ಅಕ್ರಮ ಆಸ್ತಿ ಗಳಿಕೆ ಪ್ರಕರಣ | ಸಚಿವ ಜಮೀರ್‌ ಅ‌ಹಮದ್ ಖಾನ್‌ಗೆ ಲೋಕಾಯುಕ್ತ ನೋಟಿಸ್

Date:

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್‌ ಅ‌ಹಮದ್‌ ಖಾನ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಕಚೇರಿ ನೋಟಿಸ್ ಜಾರಿಗೊಳಿಸಿದೆ.

- Advertisement -

ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್‌ಪಿ ನೋಟಿಸ್‌ ನೀಡಿದ್ದಾರೆ. ಇ.ಡಿ ದಾಳಿಯ ಬಳಿಕ ಜಮೀರ್‌ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. ಅಕ್ರಮ ಗಳಿಕೆ ಸಂಬಂಧ ತನಿಖೆಗೆ ಇ.ಡಿ ಸೂಚಿಸಿತ್ತು. ಕಳೆದೆರಡು ವರ್ಷದಿಂದ ಲೋಕಾಯುಕ್ತ ತನಿಖೆ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಈ ಹಿಂದೆ ದಾಖಲೆ ಸಲ್ಲಿಸಲು ನೋಟಿಸ್ ನೀಡಲಾಗಿತ್ತು. ಈಗ ಹಾಜರಾಗಿ ಹೇಳಿಕೆ ದಾಖಲಿಸಲು ನೋಟಿಸ್ ನೀಡಲಾಗಿದೆ. ಯಾವುದೇ ಸಬೂಬು ಹೇಳದೆ ಖುದ್ದು ತಾವೇ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಜಮೀರ್‌ ಅವರಿಗೆ ಲೋಕಾಯುಕ್ತ ಪೊಲೀಸರು ಹೇಳಿರುವುದಾಗಿ ತಿಳಿದು ಬಂದಿದೆ. ಇದರೊಂದಿಗೆ ಅಕ್ರಮ ಆಸ್ತಿ ಸಂಪಾದನೆ ವಿಚಾರದಲ್ಲಿ ಜಮೀ‌ಅವರಿಗೆ ಮತ್ತೆ ಪೊಲೀಸರ ತನಿಖೆ ಬಿಸಿ ಎದುರಾಗಿದ್ದು, ತಮ್ಮ ಹಣಕಾಸು ವ್ಯವಹಾರದ ಕುರಿತು ಲೆಕ್ಕವನ್ನು ಲೋಕಾಯುಕ್ತಕ್ಕೆ ಸಚಿವರು ಸಲ್ಲಿಸಬೇಕಿದೆ. ತಮ್ಮ ಮೇಲಿನ ಆದಾಯಕ್ಕೂ ಅಧಿಕ ಆಸ್ತಿ ಗಳಿಸಿದ ಆರೋಪದ ವಿಚಾರಣೆಗೆ ಪೂರಕ ದಾಖಲೆ ಸಮೇತ ಬರಲು ಸಚಿವರಿಗೆ ಕಾಲಾವಕಾಶ ನೀಡಲಾಗಿದೆ.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಣಿಪುರದ ನಾಗಾ, ಕುಕಿಗಳೂ ಬುಡಕಟ್ಟು ಜನರು ಎಂದು ಪ್ರಧಾನಿಗೆ ನೆನಪಿಸಬೇಕಿದೆ

ಮೂರು ವಾರ ಸಮಯದಲ್ಲಿ ಅವರು ಪುರಾವೆ ಸಂಗ್ರಹಿಸಿ ಬರಲಿ. ವಿಚಾರಣೆ ವೇಳೆ ಅವರು ನೀಡುವ ಹೇಳಿಕೆ ಹಾಗೂ ಸಲ್ಲಿಸುವ ದಾಖಲೆಗಳನ್ನು ಪರಾಮರ್ಶಿಸಿ ಮುಂದಿನ ತನಿಖೆ ನಡೆಸಲಾಗುತ್ತದೆ. ತಪ್ಪು ಮಾಹಿತಿ ನೀಡಿದ್ದರೆ ಲೆಕ್ಕಪರಿಶೋಧನೆ ವೇಳೆ ಸತ್ಯಾಸತ್ಯತೆ ಗೊತ್ತಾಗಲಿದೆ.

ಈ ಹಿಂದೆ ಇದೇ ಪ್ರಕರಣ ವಿಚಾರವಾಗಿ ಜಮೀ‌ರ್ ಅವರನ್ನು ಎಸಿಬಿ ಅಧಿಕಾರಿಗಳು ಸುದೀರ್ಘವಾಗಿ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದರು. ಅಲ್ಲದೆ ಸಚಿವರಿಗೆ ಸೇರಿದ ಮನೆ ಹಾಗೂ ಕಚೇರಿ ಸೇರಿದಂತೆ ಇನ್ನಿತರ ಸ್ಥಳಗಳ ಮೇಲೆ ಎಸಿಬಿ ದಾಳಿ ಸಹ ನಡೆಸಿ ದಾಖಲೆಗಳನ್ನು ಸಂಗ್ರಹಿಸಿತ್ತು. ತರುವಾಯ ಎಸಿಬಿ ರದ್ದುಗೊಂಡ ನಂತರ ಆ ಪ್ರಕರಣದ ಮುಂದುವರೆದ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಕೈಗೆತ್ತಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಸಿಎಂ ಡಿ.ಕೆ. ಶಿವಕುಮಾರ್ ಅಭಿಮತ

"ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಎದುರಾಗುತ್ತವೆ. ಏಳನೇ ತರಗತಿಯಿಂದ ಹಿಡಿದು ಶಾಸಕನಾಗುವವರೆಗೂ ಅನೇಕ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಯಾದಗಿರಿ: ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ವ್ಯಾಪ್ತಿಗೆ ಬರುವ ಗುರುಸುಣಿಗಿ ಗುಡ್ಡದಲ್ಲಿರುವ ಸುಪ್ರಸಿದ್ಧ...

ಬ್ರಿಕ್ಸ್‌ ಶೃಂಗಸಭೆ | ಚೀನಾಗೆ ಹೆಚ್ಚಿನ ಲಾಭ, ಭಾರತಕ್ಕೆ ಸವಾಲುಗಳ ನಿರ್ವಹಣೆ: ಕಪಿಲ್ ಸಿಬಲ್

ಇತ್ತೀಚೆಗೆ ದೆಹಲಿಯಲ್ಲಿ ಮುಕ್ತಾಯಗೊಂಡ 'ಬ್ರಿಕ್ಸ್‌' ಶೃಂಗಸಭೆಯಿಂದ ಚೀನಾ ಅತ್ಯಂತ ಹೆಚ್ಚಿನ ಲಾಭವನ್ನು...