ಪಿಎಸ್ಐ ನೇಮಕಾತಿ ಅಕ್ರಮ: ತನಿಖೆಗೆ ಸಜ್ಜಾದ ಸರ್ಕಾರ

Date:

  • ಬಿಜೆಪಿ ಅಕ್ರಮದ ಬೇಟೆ ಆರಂಭಿಸಿದ ಕಾಂಗ್ರೆಸ್
  • ಪಿಎಸ್ಐ ನೇಮಕ ಅಕ್ರಮ ತನಿಖೆಗೆ ಸಿದ್ಧತೆ

ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಅಕ್ರಮದ ವಿಚಾರದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರ ತಯಾರಿ ಆರಂಭಿಸಿದೆ.

ಈ ಸಂಬಂಧ ತನಿಖೆಗೆ ಹೈಕೋರ್ಟ್‌ನಲ್ಲಿರುವ ತಡೆಯಾಜ್ಞೆ ತೆರವುಗೊಳಿಸಲು ಸರ್ಕಾರ ಪ್ರಯತ್ನ ಆರಂಭಿಸಿದ್ದು, ಅಡ್ವೋಕೇಟ್ ಜನರಲ್ (ಎಜಿ) ಶಶಿಕಿರಣ್ ಶೆಟ್ಟಿ ಜತೆ ಗೃಹ ಸಚಿವ ಜಿ. ಪರಮೇಶ್ವರ್ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಇದರ ಮುಂದುವರೆದ ಭಾಗವಾಗಿ ಪರಮೇಶ್ವರ್ ಸೋಮವಾರ ಮತ್ತೊಮ್ಮೆ ಎ ಜಿ ಜೊತೆ ಮಾತುಕತೆ ನಡೆಸಲಿದ್ದಾರೆ. ಇವರ ಸಲಹೆ ಪಡೆದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ.

ಇದರ ಜೊತೆಗೆ ಅಕ್ರಮದಿಂದ ಅವಕಾಶ ವಂಚಿತರಾದವರಿಗೆ ಮರಳಿ ಪರೀಕ್ಷೆ ಬರೆಯಿಸುವ ಸದವಕಾಶ ಕಲ್ಪಿಸುವುದರ ಬಗೆಗೂ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಹಾಗೆಯೇ ಪೋಲಿಸ್ ಇಲಾಖೆಯಲ್ಲಿ ಶೀಘ್ರ ಮಹತ್ವದ ಬದಲಾವಣೆ ಮಾಡಲು ಸರ್ಕಾರ ಗಂಭೀರವಾಗಿ ಯೋಚಿಸಿರುವುದಾಗಿಯೂ ಮಾಹಿತಿ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ?: ತಪ್ಪೇ ಮಾಡದ ಮೇಲೆ ಭಜರಂಗದಳಕ್ಕೆ ನಿಷೇಧದ ಆತಂಕ ಏಕೆ: ಗೃಹ ಸಚಿವ ಪರಮೇಶ್ವರ್ ಪ್ರಶ್ನೆ

ಉಳಿದಂತೆ ರೈತರು, ಕನ್ನಡ ಹೋರಾಟಗಾರರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ದಾಖಲಾಗಿರುವ ಪ್ರಕರಣಗಳ ಪರಿಶೀಲನೆಗೂ ಸರ್ಕಾರ ಮುಂದಾಗಿದ್ದು, ಇದಕ್ಕೆ ಪ್ರತ್ಯೇಕ ಸಮಿತಿ ಹಾಗೂ ಸಂಪುಟ ಉಪ ಸಮಿತಿ ರಚಿಸುವ ಸಾಧ್ಯತೆಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿತೀಶ್ ಪ್ರಯಾಣಕ್ಕೆ ಸಂಚಾರ ತಡೆ; ಟ್ರಾಫಿಕ್‌ನಲ್ಲಿ ಸಿಲುಕಿದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇತರ ವಾಹನ...

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿದ್ದರಾಮಯ್ಯ

ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ...

‘ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ’ ಇದು ರಾಜ್ಯ ಸರ್ಕಾರದ ಪರಿಸ್ಥಿತಿ: ಈಶ್ವರಪ್ಪ ಲೇವಡಿ

ಡಿಕೆ ಶಿವಕುಮಾರ್‌ ಅವರ ಕುತಂತ್ರದಿಂದ ರಾಜ್ಯದ ಜನರಿಗೆ ಸಮಸ್ಯೆ ನೀರು ಬಿಡುವುದಕ್ಕಿಂತ ಮೊದಲೇ...

ದಾವಣಗೆರೆ | ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ : ದೂರು ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು...