ಜನರ ಮೇಲೆ ಕಾಡುಪ್ರಾಣಿಗಳ ದಾಳಿ ಆಗದಂತೆ ಶಾಶ್ವತ ಕ್ರಮ ಕೈಗೊಳ್ಳಿ: ಎಚ್‌ಡಿ ಕುಮಾರಸ್ವಾಮಿ

Date:

Advertisements

ಕಾಡಂಚಿನಲ್ಲಿ ಜನರ ಮೇಲೆ ಕಾಡುಪ್ರಾಣಿಗಳ ದಾಳಿ ಆಗದಂತೆ ಎಲ್ಲ ಸುರಕ್ಷಿತ ಕ್ರಮಗಳನ್ನು ಕೈಗೊಂಡು ಶಾಶ್ವತವಾಗಿ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಚನ್ನಪಟ್ಟಣ ಕ್ಷೇತ್ರದ ವಿರೂಪಸಂದ್ರ ಗ್ರಾಮದಲ್ಲಿ ಮಾವಿನ ತೋಟ ಕಾಯುತ್ತಿದ್ದ ಶ್ರೀ ವೀರಭದ್ರಯ್ಯ ಅವರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ವಾರ್ತೆ ಕೇಳಿ ಬಹಳ ದುಃಖ ಉಂಟಾಯಿತು. ಮೃತ ರೈತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಆ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

“ಅರಣ್ಯ ಸಂರಕ್ಷಣೆ ಜತೆಗೆ ಕಾಡಿನ ಅಕ್ಕಪಕ್ಕ ಬೇಸಾಯ ಮಾಡುವ ರೈತರ ಹಿತವೂ ಮುಖ್ಯ. ರೈತಾಪಿ ಜನರ ಜೀವ ಅಮೂಲ್ಯ. ಈ ಕಾರಣಕ್ಕಾಗಿ ಅರಣ್ಯ ವಲಯದಲ್ಲಿ ವೈಜ್ಞಾನಿಕ ಬೇಲಿ ನಿರ್ಮಾಣ ಮಾಡಬೇಕು ಎಂದು ನಾನು ಅನೇಕ ಸಲ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದೇನೆ. ಈ ಬಗ್ಗೆ ಇನ್ನಷ್ಟು ವಿಳಂಬ ಮಾಡಬಾರದು” ಎಂದು ಒತ್ತಾಯಿಸಿದ್ದಾರೆ.

Advertisements

“ಚನ್ನಪಟ್ಟಣ ಮಾತ್ರವಲ್ಲದೆ, ರಾಮನಗರ ಜಿಲ್ಲೆಯ ನಾನಾ ಭಾಗಗಳಲ್ಲಿ ಜನರ ಮೇಲೆ ಕಾಡುಪ್ರಾಣಿಗಳು ದಾಳಿ ನಡೆಸುವ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಕೂಡಲೇ ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಅರಣ್ಯ ಇಲಾಖೆಯ ನೂತನ ಸಚಿವ ಈಶ್ವರ್‌ ಖಂಡ್ರೆ ಈಗಾಗಲೇ ಘೋಷಿಸಿರುವಂತೆ, ಕೂಡಲೇ ನೊಂದ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ಹಸ್ತಾಂತರ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ಕಾಡಾನೆ ದಾಳಿಗೆ ತೋಟದ ಕಾವಲುಗಾರ ಬಲಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X