ಟೌನ್‌ಶಿಪ್, ವಿಲ್ಲಾ ಯೋಜನೆಗೆ ತಕ್ಷಣವೇ ಜಮೀನು ಗುರುತಿಸಿ: ವಸತಿ ಸಚಿವ ಝಮೀರ್ ಅಹಮದ್

Date:

Advertisements
  • ಕಾಲಮಿತಿಯಲ್ಲಿ ಯೋಜನೆ ಅನುಷ್ಠಾನಕ್ಕೆ ಅಧಿಕಾರಿಗಳ ತಂಡ ರಚನೆ
  • ಕರ್ನಾಟಕ ಗೃಹಮಂಡಳಿಯ ಪ್ರಗತಿ ಪರಿಶೀಲನಾ ಸಭೆ

ಕರ್ನಾಟಕ ಗೃಹ ಮಂಡಳಿ ವತಿಯಿಂದ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿರುವ ಟೌನ್‌ಶಿಪ್ ಹಾಗೂ ವಿಲ್ಲಾ ಯೋಜನೆಗೆ ಅಗತ್ಯ ಜಮೀನು ಗುರುತಿಸುವ ಕಾರ್ಯ ತಕ್ಷಣವೇ ಆರಂಭಿಸುವಂತೆ ವಸತಿ ಸಚಿವ ಝಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.

ಬುಧವಾರ ಕರ್ನಾಟಕ ಗೃಹಮಂಡಳಿಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಧಾನಿಯ ಐದು ಕಡೆ ತಲಾ ಎರಡು ಸಾವಿರ ಎಕರೆಯಲ್ಲಿ ಟೌನ್‌ಶಿಪ್ ಹಾಗೂ ತಲಾ 500 ಎಕರೆಯಲ್ಲಿ ನಾಲ್ಕು ಕಡೆ ವಿಲ್ಲಾ ಯೋಜನೆಗೆ ಜಮೀನು ಗುರುತಿಸಿ ಪ್ರಕ್ರಿಯೆ ಆರಂಭಿಸಬೇಕು. ಅದಕ್ಕಾಗಿ ಅಧಿಕಾರಿಗಳ ವಿಶೇಷ ತಂಡ ರಚಿಸಬೇಕು ಎಂದು ನಿರ್ದೇಶನ ನೀಡಿದರು.

ಟೌನ್‌ಶಿಪ್ ಹಾಗೂ ವಿಲ್ಲಾ ಯೋಜನೆ ಕಾಲ ಮಿತಿಯಲ್ಲಿ ಪೂರ್ಣಗೊಳ್ಳಬೇಕಾಗಿದೆ. ಹೀಗಾಗಿ ರೂಪುರೇಷೆ ಹಾಕಿಕೊಂಡು ಪ್ರತ್ಯೇಕ ವಿಭಾಗ ರಚನೆ ಮಾಡಿ, ಕಾರ್ಯ ಪ್ರವೃತ್ತರಾಗಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisements

ರಾಜಧಾನಿಯ ನಾಲ್ಕು ಕಡೆ ಮೆಟ್ರೋ ಸೇರಿ ಸಾರಿಗೆ ಹಾಗೂ ಇತರೆ ಮೂಲ ಸೌಕರ್ಯ ವ್ಯವಸ್ಥೆ ಲಭ್ಯ ಇರುವ ಕಡೆ ಜಮೀನು ಗುರುತಿಸಿ 50:50 ಆಧಾರದಲ್ಲಿ ಜಮೀನು ಮಾಲೀಕರ ಜತೆ ಒಪ್ಪಂದ ಮಾಡಿಕೊಂಡು, ಬಡಾವಣೆ ನಿರ್ಮಾಣ ಕಾರ್ಯಕ್ಕೆ ವೇಗ ನೀಡಬೇಕು ಎಂದು ಸೂಚಿಸಿದರು.

ಗೃಹ ಮಂಡಳಿ ವತಿಯಿಂದ ಬೆಂಗಳೂರು ನಗರ ಹೊರತುಪಡಿಸಿ ಇತರೆ ಕಡೆ ಬಿಪಿಎಲ್ ಕುಟುಂಬಗಳಿಗೆ ರಿಯಾಯಿತಿ ದರದಲ್ಲಿ ನಿವೇಶನ ಅಥವಾ ಮನೆ ನಿರ್ಮಿಸಿಕೊಡುವ ಯೋಜನೆ ರೂಪಿಸಬೇಕು ಎಂಬ ಚಿಂತನೆ ಇದೆ. ಈ ಬಗ್ಗೆ ಎಲ್ಲ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಿ ವರದಿ ಕೊಡಿ ಎಂದು ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಿದರು.

ಸರ್ಕಾರದಿಂದ ಜಮೀನು ಪಡೆದು, ಬಡಾವಣೆ ಅಭಿವೃದ್ಧಿ ಅಥವಾ ನಾವೇ ಮಾಲೀಕರ ಜತೆ 50:50 ಒಪ್ಪಂದದಡಿ ಬಡಾವಣೆ ಅಭಿವೃದ್ಧಿಪಡಿಸಿ ಬಡ ಕುಟುಂಬಗಳಿಗೆ ಸೂರು ಕಲ್ಪಿಸಬಹುದೇ ಎಂಬ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಸಿದ್ದಪಡಿಸಿ, ಆ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.

ಜಮೀನು ಸ್ವಾಧೀನ ಸೇರಿದಂತೆ ನ್ಯಾಯಾಲಯದಲ್ಲಿರುವ 122 ವ್ಯಾಜ್ಯ ಇತ್ಯರ್ಥಕ್ಕಾಗಿ ಅದಾಲತ್ ಮಾದರಿಯಲ್ಲಿ ಅರ್ಜಿದಾರರ ಜತೆ ಸಂಧಾನ ಸಭೆ ಏರ್ಪಡಿಸಲು ಸಚಿವರು ಇದೇ ವೇಳೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಜ್ಯದಲ್ಲಿ ಅನುಷ್ಠಾನದಲ್ಲಿರುವ ಗೃಹ ಮಂಡಳಿ ಯೋಜನೆಗಳು, ಅದರ ಸ್ಥಿತಿಗತಿ, ಲಭ್ಯವಿರುವ ಜಮೀನು, ನ್ಯಾಯಾಲಯದಲ್ಲಿರುವ ಪ್ರಕರಣ ಕುರಿತು ಸಮಗ್ರ ವರದಿ ನೀಡುವಂತೆ ತಿಳಿಸಿದರು.

ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳ ಸ್ಥಿತಿಗತಿ ಕುರಿತು ಇದೇ ವೇಳೆ ಮಾಹಿತಿ ಪಡೆದರು.

ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಗೃಹ ಮಂಡಳಿ ಆಯುಕ್ತರಾದ ಕವಿತಾ ಮನ್ನಿ ಕೇರಿ, ಪ್ರಧಾನ ಅಭಿಯಂತರ ಶರಣಪ್ಪ, ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X