ಪರಪ್ಪನ ಅಗ್ರಹಾರ | ದುರುಪಯೋಗ ತಡೆಗಟ್ಟಲು ಹೈ ರೆಸಲ್ಯೂಷನ್ ಜಾಮರ್‌ ಅಳವಡಿಕೆ: ಸಚಿವ ಪರಮೇಶ್ವರ್

Date:

Advertisements

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ರೆಸಲ್ಯೂಷನ್ ಜಾಮರ್‌ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ತಿಳಿಸಿದರು.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಸುಧಾರಣಾ ಸೇವೆ ಪದಕ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರದಾನ ಮತ್ತು ಸನ್ನಡತೆಯ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

“ಈ ಹಿಂದೆ ಜೈಲಿನ ಒಳಗೆ ಫೋನ್ ತಂದುಕೊಡುತ್ತಾರೆ. ಕೈದಿಗಳು ಹೊರಗಿನವರ ಜೊತೆ ಸಂಪರ್ಕ ಮಾಡುತ್ತಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಜೈಲಿನಲ್ಲಿ ಬೇರೆ ರಾಜ್ಯದ ಕೈದಿಗಳು ಇದ್ದಾರೆ. ಇಂತಹ ಸಂದರ್ಭದಲ್ಲಿ ಜಾಮರ್ ಅಳವಡಿಸುವುದರಿಂದ ಅಕ್ರಮಗಳನ್ನು ತಡೆಗಟ್ಟಬಹುದು” ಎಂದರು.

Advertisements

“ಹೈ ರೆಸಲ್ಯೂಷನ್ ಜಾಮರ್ ಹಾಕಿರುವುದರಿಂದ ಸುಮಾರು 800 ಮೀಟರ್ ವ್ಯಾಪ್ತಿಯವರೆಗೂ ಕಾರ್ಯನಿರ್ವಹಿಸುತ್ತದೆ. ಸ್ವಾಭಾವಿಕವಾಗಿ ಕಾಂಪೌಂಡ್‌ನಿಂದ ಹೊರಗೂ ವ್ಯಾಪಿಸಿರುವುದರಿಂದ ಜನರಿಗೆ ತೊಂದರೆಯಾಗಿತ್ತು‌. ಜಾಮರ್ ಕಾರ್ಯನಿರ್ವಹಣೆಯ ವ್ಯಾಪ್ತಿಯನ್ನು 100 ಮೀಟರ್‌ಗೆ ಇಳಿಸಲಾಗಿದೆ. ಜಾಮರ್‌ಗಳನ್ನು ತೆಗೆಯುವುದಿಲ್ಲ” ಎಂದು ತಿಳಿಸಿದರು‌.

“ಇಲಾಖೆಯಲ್ಲಿ ಬದಲಾವಣೆಯನ್ನು ತರಲು ಹೆಚ್ಚು ಪ್ರೋತ್ಸಾಹ ನೀಡಲಾಗುತ್ತಿದೆ. ಸನ್ನಡತೆಯ ಬಿಡುಗಡೆ ಹೊಂದಿರುವ ಸತೀಶ್ ಎಂಬಾತ ‘ತಾನು ಕಾನೂನು ಡಿಪ್ಲೋಮಾ ಮುಗಿಸಿದ್ದೇನೆ. ಹೊರಗಡೆ ಹೋದಾಗ ಜೀವನಕ್ಕೆ ಉಪಯೋಗವಾಗುತ್ತದೆ’ ಎಂದು ಹೇಳಿದ್ದಾನೆ‌. ಬಹಳ ಜನ ಪರಿವರ್ತನೆ ಹೊಂದಲು ಇಂತಹ ಅವಕಾಶ ಕಲ್ಪಿಸಿಕೊಡುತ್ತೇವೆ. ಕಾರ್ಪೆಂಟರ್, ಎಲೆಕ್ಟ್ರಿಕ್ ಕೆಲಸ, ಕಂಪ್ಯೂಟರ್ ತರಬೇತಿ ಕಲಿಸಿಕೊಡುತ್ತೇವೆ. ಕೈದಿಗಳು ಬದಲಾವಣೆ ಹೊಂದಲು ಅವಕಾಶವಾಗುತ್ತದೆ” ಎಂದು ಹೇಳಿದರು‌.

ನಟ ದರ್ಶನ್‌ಗೆ ರಾಜಾತಿಥ್ಯ ಸಿಗುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು‌, “ಜೈಲಿನ ಒಳಗೆ ನೇರವಾಗಿ ಬರಲು ನನಗೆ ಅವಕಾಶವಿಲ್ಲ. ಊಟ ಉಪಚಾರ ವಿಚಾರದಲ್ಲಿ ಬೇರೆ ರೀತಿ ಆತಿಥ್ಯ ನೀಡಿಲ್ಲ. ಜೈಲಿನಲ್ಲಿರುವ ಎಲ್ಲರಂತೆಯೇ ದರ್ಶನ್‌ಗೆ ವ್ಯವಸ್ಥೆ ಇದೆ. ಬಿರಿಯಾನಿ ಕೊಟ್ಟರು ಎಂದು ಕೆಲವರು ಆರೋಪಿಸಿದ್ದಾರೆ. ಅಂತಹ ಯಾವುದೇ ಘಟನೆ ನಡೆದಿಲ್ಲ‌” ಎಂದು ಸ್ಪಷ್ಟಪಡಿಸಿದರು.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X