ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಬಿಜೆಪಿ-ಜೆಡಿಎಸ್​ ನಾಯಕರಿಗೆ ಢವಢವ ಶುರು

Date:

Advertisements

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋತ್‌ ಅವರ ಪಕ್ಷಪಾತಿ ನಡೆ ವಿರುದ್ಧ ಗುರುವಾರ ನಡೆದ ಸಚಿವ ಸಂಪುಟದಲ್ಲಿ ಮಹತ್ವದ ಚರ್ಚೆ ನಡೆದಿದೆ.

ಸಿಎಂ ಸಿದ್ದರಾಮಯ್ಯ ವಿಚಾರದಲ್ಲಿ ತೋರಿದ ಆಸಕ್ತಿಯನ್ನು ಇತರೆ ಬಾಕಿ ಇರುವ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡದ ಪ್ರಕರಣಗಳಿಗೆ ರಾಜ್ಯಪಾಲರಿಗೆ ಸೂಕ್ತ ನೆರವು ಮತ್ತು ಸಲಹೆ ನೀಡುವ ನಿರ್ಣಯವನ್ನು ಸಚಿವ ಸಂಪುಟ ತೆಗೆದುಕೊಂಡಿದೆ. ಈ ಮಹತ್ವದ ಬೆಳವಣಿಗೆಯಿಂದ ಬಿಜೆಪಿ ಮತ್ತು ಜೆಡಿಎಸ್​​ ನಾಯಕರಿಗೆ ಢವಢವ ಶುರುವಾಗಿದೆ.

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧದ ಗಣಿ ಗುತ್ತಿಗೆ ಅನುಮತಿ ಆರೋಪ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಪ್ರಕರಣ, ಮುರುಗೇಶ್ ನಿರಾಣಿ ವಿರುದ್ಧದ ಪ್ರಕರಣ ಹಾಗೂ ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣ ಸೇರಿ ಒಟ್ಟು ನಾಲ್ಕು ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್‌ ಅವರಿಗೆ ಸಲಹೆ ನೀಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

Advertisements

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್​ ಕೆ ಪಾಟೀಲ್, “ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್​​ಗೆ ಬಾಕಿ ಇರುವ ಹಲವು ಪ್ರಕರಣಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಇನ್ನು ಕೆಲವು ಪ್ರಕರಣ ಲೋಕಾಯುಕ್ತದಿಂದ ರಾಜ್ಯಪಾಲರಿಗೆ ಹೋಗಿದೆ. ಕೆಲವು ತನಿಖಾ ಸಂಸ್ಥೆಗಳ ವರದಿ ರಾಜ್ಯಪಾಲರಿಗೆ ಸಲ್ಲಿಕೆಯಾಗಿದೆ. ಅನೇಕ ಅನುಮೋದನೆ ಅರ್ಜಿಗಳು ರಾಜ್ಯಪಾಲರ ಸಮಕ್ಷಮದಲ್ಲಿ ಬಾಕಿ ಇವೆ. ಈ ಅರ್ಜಿಗಳಲ್ಲಿ ಕೆಲವು ಚಾರ್ಜ್​ಶೀಟ್ ಸಲ್ಲಿಕೆಗೆ ಒಪ್ಪಿಗೆ ಬಾಕಿ ಇವೆ. 1980ರ ಭ್ರಷ್ಟಾಚಾರ ತಡೆಕಾಯ್ದೆ ಸೆಕ್ಷನ್ 19ರಡಿ ಅನುಮೋದನೆಗೆ ಬಾಕಿ ಇದೆ. 17ಎ ಅಡಿಯಲ್ಲೂ ರಾಜ್ಯಪಾಲರ ಪೂರ್ವಾನುಮತಿಗೆ ಬಾಕಿ ಇದೆ. ಆ ಎಲ್ಲ ಪ್ರಕರಣಗಳ ಬಗ್ಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳುವಂತೆ 163ರ ಅನ್ವಯ ರಾಜ್ಯಪಾಲರಿಗೆ ಸಲಹೆ ಮತ್ತು ನೆರವು ನೀಡಲು ಸಂಪುಟ ಸಭೆ ನಿರ್ಣಯಿಸಿದೆ” ಎಂದು ತಿಳಿಸಿದರು.

“ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಹಾಗೂ ಎಚ್ ಡಿ ಕುಮಾರಸ್ವಾಮಿ ಹಾಗೂ ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಅನುಮತಿ ಕೋರಲಾಗಿದೆ. ಎಚ್ ಡಿ ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಲೋಕಾಯುಕ್ತ ಎಸ್ ಐ ಟಿ ಗೆ ಸ್ಪಷ್ಟೀಕರಣ ಕೋರಿ ಕೇಳಿದ್ದರು. ಇದಕ್ಕೆ ಅಗತ್ಯವಿರುವ ಸ್ಪಷ್ಟೀಕರಣವನ್ನು ಪತ್ರದ ಎಸ್ ಐ ಟಿ ನೀಡಿದೆ. ಬಾಕಿ ಇರುವ ಪ್ರಾಸಿಕ್ಯೂಷನ್‌ಗೆ ಅನುಮತಿ ಪ್ರಕರಣಗಳ ಬಗ್ಗೆ ಬಗ್ಗೆ ಶೀಘ್ರವಾಗಿ ತೀರ್ಮಾನ ಕೈಗೊಳ್ಳಲು ರಾಜ್ಯಪಾಲರಿಗೆ ಸಲಹೆ ನೀಡುತ್ತೇವೆ” ಎಂದು‌ ವಿವರಿಸಿದರು.

“ಆ.1 ರಂದು ಕ್ಯಾಬಿನೆಟ್ ಸಭೆ ನಡದಿತ್ತು. ಅಂದು ಸಿಎಂ ಅವರು ಡಿಸಿಎಂಗೆ ಸಭೆ ನಡೆಸಲು ಸೂಚಿಸಿದ್ದರು. ಆರ್ಟಿಕಲ್ 163ರ ಅನ್ವಯ ಏಡ್ ಆ್ಯಂಡ್ ಅಡ್ವೈಸ್ ರಾಜ್ಯಪಾಲರಿಗೆ ನೀಡಿದ್ದೆವು. ದೃಢೀಕರಣ ಸಂದರ್ಭದಲ್ಲಿ ಸಿಎಂ ತಾವಿರುವುದು ಸೂಕ್ತ ಅಲ್ಲ ಎಂದು ಸಭೆಯಿಂದ ಹೊರಗೆ ಇದ್ದರು. ಆ ಸಭೆ ಆದ ಮೇಲೆ ಕ್ಯಾಬಿನೆಟ್ ನಿರ್ಣಯವನ್ನು ದೃಢೀಕರಿಸಲು ಇಂದು ಸಭೆ ನಡೆದಿದ್ದು, ಆ.1ರ ನಿರ್ಣಯವನ್ನು ದೃಢೀಕರಿಸಿದ್ದೇವೆ” ಎಂದು ಹೇಳಿದರು.

“ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಪ್ರಕರಣದಲ್ಲಿ ಖಾಸಗಿ ವ್ಯಕ್ತಿ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ತರಾತುರಿಯಲ್ಲಿ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದಾರೆ. ಆದರೆ ಈ ನಾಲ್ಕು ಪ್ರಕರಣದಲ್ಲಿ ತನಿಖೆಯಾಗಿದೆ ಹಾಗೂ ಎರಡು ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದರೂ ಏನೂ ಕ್ರಮ ಆಗಿಲ್ಲ. ಹೀಗಿರುವಾಗ ಕ್ಯಾಬಿನೆಟ್ ಸಲಹೆ ಕೊಡುವುದು ಸೂಕ್ತ” ಎಂದರು.

“ಜನ ಸಂಘಟನೆಗಳು ಕೂಡಾ ಈ ಆಗ್ರಹ ಮಾಡುತ್ತಿವೆ. ಈ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಇದರಲ್ಲಿ ಯಾವುದೇ ದ್ವೇಷದ ರಾಜಕಾರಣ ಇಲ್ಲ” ಎಂದು ಸಂಪುಟ ನಿರ್ಧಾರವನ್ನು ಸಮರ್ಥಿಸಿಕೊಂಡರು.

2021ರ ಡಿ.9ರಂದು ಜೊಲ್ಲೆ ವಿರುದ್ಧ ರಾಜ್ಯಪಾಲರಿಗೆ ಅರ್ಜಿ ಸಲ್ಲಿಕೆಯಾಗಿದೆ. 2024ರ ಫೆಬ್ರವರಿ 26ರಂದು ನಿರಾಣಿ ವಿರುದ್ಧ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಲಾಗಿದೆ. 2023ರ ನವೆಂಬರ್ 21ರಂದು ಹೆಚ್​ ಡಿ ಕುಮಾರಸ್ವಾಮಿ ವಿರುದ್ಧವೂ ಸಹ ಅರ್ಜಿ ಸಲ್ಲಿಕೆಯಾಗಿದೆ. ಈ ಸಂಬಂಧ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಈಗಾಗಲೇ ಲೋಕಾಯಕ್ತ ಎಸ್​ಐಟಿ ರಾಜ್ಯಪಾಲರಿಗೆ ಮತ್ತೆ ಮನವಿ ಮಾಡಿದೆ. ಇಂದಿನ ಕ್ಯಾಬಿನೆಟ್ ನಿರ್ಧಾರ ರಾಜ ಭವನ ವರ್ಸಸ್​ ರಾಜ್ಯ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಕಾನೂನು ಸಮರಕ್ಕೆ ಮುನ್ನುಡಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X