ಪ್ರಜಾಪ್ರಭುತ್ವದಲ್ಲಿ‌ ಜನರೇ ಜನಾರ್ದನರು, ಮೋದಿ ದೇವರಲ್ಲ: ಸಿದ್ದರಾಮಯ್ಯ

Date:

  • ‘ಪ್ರಜಾಪ್ರಭುತ್ವದಲ್ಲಿ ಸರ್ವಾಧಿಕಾರಿ ಧೋರಣೆಗೆ ಅವಕಾಶ ಇಲ್ಲ’
  • ನಡ್ಡಾ ಹೇಳಿಕೆಗೆ ಸರಣಿ ಟ್ವೀಟ್ ಮಾಡಿ ಕುಟುಕಿದ ಸಿದ್ದರಾಮಯ್ಯ

“ಪ್ರಜಾಪ್ರಭುತ್ವದಲ್ಲಿ‌ ಜನರೇ ಜನಾರ್ದನರು, ಆಶೀರ್ವಾದ ನೀಡಲು ಪ್ರಧಾನಿ ಮೋದಿ ಅವರೇನು ದೇವರಲ್ಲ” ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ತಿರುಗೇಟು ನೀಡಿದ್ದಾರೆ.

- Advertisement -

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿಗ್ಗಾಂವಿಯಲ್ಲಿ ಮಾತನಾಡಿದ್ದ ಜೆ.ಪಿ ನಡ್ಡಾ, “ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು” ಎಂದು ಹೇಳಿಕೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಹೇಳಿಕೆಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ, ಜೆ.ಪಿ ನಡ್ಡಾ ವಿರುದ್ಧ ಹರಿಹಾಯ್ದಿದ್ದಾರೆ. “ಪ್ರಜಾಪ್ರಭುತ್ವದಲ್ಲಿ‌ ಜನರೇ ಜನಾರ್ದನರು, ಆಶೀರ್ವಾದ ನೀಡಲು ಪ್ರಧಾನಿ ಮೋದಿ ಅವರೇನು ದೇವರಲ್ಲ, ಜನರ ಸೇವೆ ಮಾಡಲು ಜನರಿಂದ ಆಯ್ಕೆಯಾಗಿರುವ ಪ್ರತಿನಿಧಿ ಎನ್ನುವುದು ನೆನಪಿರಲಿ ಜೆ.ಪಿ ನಡ್ಡಾ ಅವರೇ” ಎಂದು ಟ್ವೀಟ್ ಮಾಡಿದ್ದಾರೆ.WhatsApp Image 2023 04 19 at 11.08.19 PM

“ಕರ್ನಾಟಕದ ಜನತೆ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು ಎನ್ನುವ ನಿಮ್ಮ ಹೇಳಿಕೆ ಬೆದರಿಕೆ ಎಂದಾದರೆ ಅದಕ್ಕೆ ನನ್ನ ಧಿಕ್ಕಾರ ಇದೆ. ಇದು‌ ನಿಮ್ಮ ಅಜ್ಞಾನ ಎಂದಾದರೆ ನಿಮಗೆ ದೇವರು ಸದ್ಬುದ್ಧಿಯ ಆಶೀರ್ವಾದವನ್ನು ಮಾಡಲಿ ಎಂದು ಹಾರೈಸುತ್ತೇನೆ” ಎಂದು ಕುಟುಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೊಮ್ಮಾಯಿಗೆ ಮುಂದಿನ 5 ವರ್ಷಗಳ ಕಾಲ ಮತ್ತೆ ಸಿಎಂ ಅವಕಾಶ: ಜೆ ಪಿ ನಡ್ಡಾ

“ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಸಂವಿಧಾನದತ್ತವಾದ ಸಮಾನ ಸ್ಥಾನಮಾನ, ಗೌರವ ಮತ್ತು ಹಕ್ಕುಗಳನ್ನು ಹೊಂದಿರುತ್ತವೆ ಎಂಬುದು ನೆನಪಿರಲಿ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

“ಜೆ.ಪಿ ನಡ್ಡಾ ಅವರೇ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ‌ ನಿಮ್ಮ‌ ಸರ್ವಾಧಿಕಾರಿ ಧೋರಣೆಗೆ ಅವಕಾಶ ಇಲ್ಲ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...