ಏಕರೂಪ ನಾಗರಿಕ ಸಂಹಿತೆ: ಪ್ರಧಾನಿ ಹೇಳಿಕೆ ಬೆನ್ನಲ್ಲೆ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯಿಂದ ತುರ್ತು ಸಭೆ

Date:

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮಂಗಳವಾರ (ಜೂನ್‌ 27) ಸಂಜೆ ನವದೆಹಲಿಯಲ್ಲಿ ತುರ್ತು ಸಭೆ ನಡೆಸಿ ಉದ್ದೇಶಿತ ಕಾಯ್ದೆಯನ್ನು ವಿರೋಧಿಸಲು ನಿರ್ಧರಿಸಿತು.

- Advertisement -

ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ವಿಡಿಯೋ ಮೂಲಕ ಸಭೆ ನಡೆಸಿದ್ದು, “ಅದರ ಸದಸ್ಯರು ಯುಸಿಸಿ ಕುರಿತು ಸುಮಾರು ಮೂರು ಗಂಟೆಗಳ ಕಾಲ ಚರ್ಚೆ ನಡೆಸಿದರು. ಧರ್ಮ – ಆಧಾರಿತ ವೈಯಕ್ತಿಕ ಕಾನೂನುಗಳು, ಉತ್ತರಾಧಿಕಾರದ ನಿಯಮಗಳು, ದತ್ತು ಮತ್ತು ಉತ್ತರಾಧಿಕಾರವನ್ನು ಬದಲಿಸಲು ಕೇಂದ್ರ ಪ್ರಯತ್ನಿಸುತ್ತದೆ” ಎಂದು ಮಂಡಳಿಯ ಸದಸ್ಯರು ವಿರೋಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯ ಜತೆಗೆ, ಯುಸಿಸಿಯ ಕಾನೂನಾತ್ಮಕ ಆಯಾಮಗಳ ಬಗ್ಗೆಯೂ ಮಂಡಳಿಯ ಸದಸ್ಯರು ಸಮಾಲೋಚಿಸಿದ್ದಾರೆ. ಸದಸ್ಯರು, ವಕೀಲರು ಹಾಗೂ ಪರಿಣತರು ಮುಂದಿಟ್ಟ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಮಂಡಳಿಯು ಈ ವಿಚಾರದ ಬಗ್ಗೆ ಕಾನೂನು ಆಯೋಗಕ್ಕೆ ತನ್ನ ಕ್ರೋಡೀಕರಿಸಿದ ವಾದಗಳ ಕರಡನ್ನು ಸಲ್ಲಿಕೆ ಮಾಡಲು ನಿರ್ಧರಿಸಿದೆ.

ಸಭೆಯಲ್ಲಿ, ಎಐಎಂಪಿಎಲ್‌ಬಿ ಅಧ್ಯಕ್ಷ ಸಫೀಯುಲ್ಲಾ ರೆಹಮಾನಿ, ಇಸ್ಲಾಮಿಕ್ ಸೆಂಟರ್ ಆಫ್ ಇಂಡಿಯಾ ಅಧ್ಯಕ್ಷ ಮೌಲಾನಾ ಖಾಲಿದ್ ರಶೀದ್ ಫರಂಗಿ ಮಹಾಲಿ ಹಾಗೂ ಮಂಡಳಿಯ ಸದಸ್ಯರು, ವಕೀಲರು ಭಾಗವಹಿಸಿದ್ದರು.

ಏಕರೂಪ ನಾಗರಿಕ ಸಂಹಿತೆ ಕಾನೂನು ಸಿದ್ಧಪಡಿಸಲು ಸಮಿತಿಯನ್ನು ಸ್ಥಾಪಿಸುವ ಖಾಸಗಿ ಸದಸ್ಯ ಮಸೂದೆಯನ್ನು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ರಾಜ್ಯಸಭೆಯಲ್ಲಿ ಮಂಡಿಸಲಾಗಿತ್ತು. ಇದಕ್ಕೆ ವಿರೋಧ ಪಕ್ಷಗಳಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಹಿಂದೆ ಕೂಡ ಇದೇ ರೀತಿಯ ಮಸೂದೆಗಳ ಮಂಡನೆಗೆ ಪಟ್ಟಿ ಮಾಡಲಾಗಿತ್ತು. ಆದರೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಇದು ಸ್ಟೇಷನ್‌ ಮಾಸ್ಟರ್‌ ಮಾಡುವ ಕೆಲಸ; ಪ್ರಧಾನಿಯ ವಂದೇ ಭಾರತ್ ಉದ್ಘಾಟನೆ ಛೇಡಿಸಿದ ಪ್ರಕಾಶ್‌ ರೈ

ಪ್ರಧಾನಿ ಏಕರೂಪ ನಾಗರಿಕ ಸಂಹಿತಿಯ ಹೇಳಿಕೆಯನ್ನು ವಿರೋಧಿಸಿರುವ ಕಾಂಗ್ರೆಸ್ ಹಿರಿಯ ನಾಯಕರಾದ ಪಿ ಚಿದಂಬರಂ ಹಾಗೂ ಕೆ ಸಿ ವೇಣುಗೋಪಾಲ್, “ನಿರುದ್ಯೋಗ, ಬೆಲೆ ಏರಿಕೆ ಮತ್ತು ದ್ವೇಷದ ಅಪರಾಧಗಳ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಧಾನಿ ಯುಸಿಸಿ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಬಿಜೆಪಿಯ ಮಾತು ಮತ್ತು ಕಾರ್ಯಗಳಿಂದ ಇಂದು ರಾಷ್ಟ್ರವು ವಿಭಜನೆಯಾಗಿದೆ. ಜನರ ಮೇಲೆ ಹೇರಿದ ಯುಸಿಸಿಯು ವಿಭಜನೆಯನ್ನು ವಿಸ್ತರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಐಎಂಐಎಂ ಅಧ್ಯಕ್ಷ ಅಸಾಸುದ್ದೀನ್ ಒವೈಸಿ ಕೂಡ ಯುಸಿಸಿ ಜಾರಿಗೊಳಿಸುವುದನ್ನು ಖಂಡಿಸಿದ್ದು, “ ಏಕರೂಪ ನಾಗರಿಕ ಸಂಹಿತೆ ಹೆಸರಿನಲ್ಲಿ ದೇಶದ ವೈವಿಧ್ಯ ಕಾಪಾಡಲು ಸಾಧ್ಯವೇ? ಹಾಗಿದ್ದರೆ ಮೋದಿ ಹಿಂದೂಗಳ ಅವಿಭಕ್ತ ಕುಟುಂಬ ಪದ್ಧತಿ ರದ್ದುಗೊಳಿಸುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.   

ಭೋಪಾಲ್‌ನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಂಗಳವಾರ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ,” ಮನೆಯಲ್ಲಿ ಒಬ್ಬರಿಗೆ ಒಂದು ಇನ್ನೊಬ್ಬರಿಗೆ ಇನ್ನೊಂದು ಕಾನೂನು ಇದ್ದರೆ ಕುಟುಂಬವನ್ನು ನಿಭಾಯಿಸುವುದು ಕಷ್ಟ. ಅಂತೆಯೇ ಎರಡು ಕಾನೂನುಗಳಿದ್ದರೆ ರಾಷ್ಟ್ರವನ್ನು ಮುನ್ನಡೆಸಲು ಸಾಧ್ಯವೇ” ಎಂಬ ಪ್ರಶ್ನೆಯನ್ನು ಮುಂದಿಟ್ಟು ಯುಸಿಸಿ ಜಾರಿಯ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಆರ್ಥಿಕತೆಗೆ ಸ್ಥಿರ ಸಿದ್ಧಾಂತ ನೀಡಿದ ಇಬ್ಬರು ಅಮೆರಿಕನ್‌ ಅರ್ಥಶಾಸ್ತ್ರಜ್ಞರಿಗೆ ‌’ನೊಬೆಲ್’ ಗೌರವ

ಮೂಲ ಆರ್ಥಿಕ ನೀತಿಗಳ ಆಧಾರದ ಮೇಲೆ ಜಾಗತಿಕ ಮಾರುಕಟ್ಟೆಯ ಸ್ಥಿರತೆಯನ್ನು ಕಾಪಾಡುವಲ್ಲಿ...

ಸೆಪ್ಟೆಂಬರ್‌ನಲ್ಲಿ ಶೇ. 5.54ಕ್ಕೆ ಏರಿಕೆಯಾದ ಚಿಲ್ಲರೆ ಹಣದುಬ್ಬರ: ದುಬಾರಿಯಾದ ಆಹಾರ ಪದಾರ್ಥಗಳೇ ಕಾರಣ

ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಭಾರತದ ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್ ತಿಂಗಳಿನಲ್ಲಿ...

SIR ವಿರುದ್ಧ, ಸಿಇಸಿ ಗ್ಯಾನೇಶ್ ವಜಾ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ,...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್...