ಪಾಕಿಸ್ತಾನದಲ್ಲಿ ಭಯೋತ್ಪಾದನೆ ಉತ್ತೇಜಿಸಿದವರಿಗೆ ಬಹುಮಾನ ಸಿಗುತ್ತದೆ: ಶಶಿ ತರೂರ್

Date:

ಪಾಕಿಸ್ತಾನದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸಿದ್ದರೆ ನಿಮಗೆ ಬಹುಮಾನ ನೀಡಲಾಗುತ್ತದೆ. ಭಯೋತ್ಪಾದಕರನ್ನು ಬಹಿರಂಗಪಡಿಸಿದರೆ ಕಿರುಕುಳ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಸಂಸದ, ಭಯೋತ್ಪಾದನೆ ವಿರುದ್ಧ ಅಭಿಯಾನ ನಡೆಸುತ್ತಿರುವ ಸರ್ವಪಕ್ಷ ಸಂಸದೀಯ ನಿಯೋಗದ ನೇತೃತ್ವ ವಹಿಸಿರುವ ಶಶಿ ತರೂರ್ ಅವರು ಹೇಳಿದ್ದಾರೆ.

- Advertisement -

ಅಲ್-ಖೈದಾ ಉಗ್ರ ಒಸಾಮಾ ಬಿನ್ ಲಾಡೆನ್ ಪತ್ತೆಹಚ್ಚಿದ ಮತ್ತು ನಿರ್ಮೂಲನೆ ಮಾಡಲು ಅಮೆರಿಕಕ್ಕೆ ಸಹಾಯ ಮಾಡಿದ ವೈದ್ಯ ಶಕೀಲ್ ಅಫ್ರಿದಿ ಅವರನ್ನು ನಡೆಸಿಕೊಂಡ ರೀತಿಯನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ತೀವ್ರವಾಗಿ ಟೀಕಿಸಿದ್ದಾರೆ. ಡಾ. ಅಫ್ರಿದಿ ಬಿಡುಗಡೆಗಾಗಿ ಒತ್ತಾಯಿಸಿ ಅಮೆರಿಕದ ಕಾಂಗ್ರೆಸ್ ಸದಸ್ಯ ಬ್ರಾಡ್ ಶೆರ್ಮನ್ ಅವರ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆಯನ್ನು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? 40% ಸರ್ಕಾರದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ: ಶಶಿ ತರೂರ್

“ಒಸಾಮಾ ಬಿನ್ ಲಾಡೆನ್ ಅವರನ್ನು ಕೊಲ್ಲಲು ಅಮೆರಿಕಕ್ಕೆ ಸಹಾಯ ಮಾಡಿದ್ದಕ್ಕಾಗಿ ಜೈಲಿನಲ್ಲಿ ಕೊಳೆಯುತ್ತಿರುವ ಡಾ. ಶಕೀಲ್ ಅಫ್ರಿದಿ ಅವರನ್ನು ಬಿಡುಗಡೆ ಮಾಡುವ ಅಗತ್ಯವನ್ನು ಪಾಕಿಸ್ತಾನಿ ನಿಯೋಗವು ತಮ್ಮ ಸರ್ಕಾರಕ್ಕೆ ತಿಳಿಸಬೇಕೆಂದು ನಾನು ಒತ್ತಾಯಿಸಿದೆ. ಡಾ. ಅಫ್ರಿದಿಯನ್ನು ಬಿಡುಗಡೆ ಮಾಡುವುದು 9/11ರ ಸಂತ್ರಸ್ತರಿಗೆ ಬೇಕಾದ ಪ್ರಮುಖ ಹೆಜ್ಜೆ” ಎಂದು ಎಕ್ಸ್‌ನಲ್ಲಿ ಶೆರ್ಮನ್ ಪೋಸ್ಟ್ ಮಾಡಿದ್ದಾರೆ.

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಭಾರತದಿಂದ ಅಮೆರಿಕಕ್ಕೆ ಹೊರಟಿರುವ ಸರ್ವಪಕ್ಷ ಸಂಸದೀಯ ನಿಯೋಗದ ನೇತೃತ್ವ ವಹಿಸಿರುವ ತರೂರ್, “ಪಾಕಿಸ್ತಾನ ಭಯೋತ್ಪಾದಕ ಮಾಸ್ಟರ್ ಮೈಂಡ್ ಒಸಾಮಾ ಬಿನ್ ಲಾಡೆನ್‌ಗೆ(ಸೇನಾ ಶಿಬಿರದ ಬಳಿಯ ಸುರಕ್ಷಿತ ಮನೆಯಲ್ಲಿ) ಆಶ್ರಯ ನೀಡಿದ್ದು ಮಾತ್ರವಲ್ಲದೆ, ಅಮೆರಿಕನ್ನರಿಗೆ ಉಗ್ರನ ಅಡಗುಸ್ಥಾನದ ಬಗ್ಗೆ ಮಾಹಿತಿ ನೀಡಿದ ವೈದ್ಯರನ್ನು ಬಂಧಿಸಿ ಶಿಕ್ಷಿಸಿದೆ. ಪಾಕಿಸ್ತಾನದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸಿದ್ದರೆ ನಿಮಗೆ ಬಹುಮಾನ ನೀಡಲಾಗುತ್ತದೆ. ಭಯೋತ್ಪಾದಕರನ್ನು ಬಹಿರಂಗಪಡಿಸಿದರೆ ಕಿರುಕುಳ ನೀಡಲಾಗುತ್ತದೆ” ಎಂದಿದ್ದಾರೆ.

ಡಾ. ಶಕೀಲ್ ಅಫ್ರಿದಿ ಒಬ್ಬ ಪಾಕಿಸ್ತಾನಿ ವೈದ್ಯರಾಗಿದ್ದು, ಅವರು ಅಲ್-ಖೈದಾ ಉಗ್ರ ಒಸಾಮಾ ಬಿನ್ ಲಾಡೆನ್‌ನ ಅಡಗಿದ್ದ ಸ್ಥಳವನ್ನು ತಿಳಿಸುವ ಮೂಲಕ ಯುಎಸ್ ಕೇಂದ್ರ ಗುಪ್ತಚರ ಸಂಸ್ಥೆ (ಸಿಐಎ)ಗೆ ಸಹಾಯ ಮಾಡಿದರು. ಅಫ್ರಿದಿ, ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಹಿರಿಯ ಆರೋಗ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು. ಅಫ್ರಿದಿ ಅವರನ್ನು 2008ರಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಗುಂಪಿನ ಲಷ್ಕರ್-ಎ-ಇಸ್ಲಾಂನ ಕಮಾಂಡರ್ ಆಗಿ ಬದಲಾದ ಮಂಗಲ್ ಬಾಗ್ ಅಪಹರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...