ದೇಶದ ಇತಿಹಾಸದಲ್ಲಿ ಮೋದಿಯಷ್ಟು ತಮ್ಮ ಹುದ್ದೆಯ ಘನತೆಯನ್ನು ಯಾವ ಪ್ರಧಾನಿಯೂ ಇಳಿಸಿಲ್ಲ: ಮಲ್ಲಿಕಾರ್ಜುನ ಖರ್ಗೆ

Date:

‘ದೇಶದ ಸಂಪತ್ತನ್ನು ಒಟ್ಟುಗೂಡಿಸಿ, ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುವುದು ಕಾಂಗ್ರೆಸ್‌ನ ಪ್ರಣಾಳಿಕೆ’ ಎಂದು ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಖಂಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ದೇಶದ ಇತಿಹಾಸದಲ್ಲಿ ಮೋದಿಯಷ್ಟು ತಮ್ಮ ಹುದ್ದೆಯ ಘನತೆಯನ್ನು ಯಾವ ಪ್ರಧಾನಿಯೂ ಇಳಿಸಿಲ್ಲ” ಎಂದಿದ್ದಾರೆ.

ಟ್ವಿಟ್ಟರ್‌ನಲ್ಲಿ ಸುದೀರ್ಘವಾದ ಪೋಸ್ಟ್ ಹಂಚಿಕೊಂಡ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ, ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯು ಮೊದಲ ಹಂತದ ಚುನಾವಣೆಯ ಬಳಿಕ ಇಂಡಿಯಾ ಮೈತ್ರಿಕೂಟವು ಗೆಲ್ಲುತ್ತಿರುವ ಸೂಚನೆ ಎಂದು ತಿಳಿಸಿದ್ದಾರೆ.

“ಮೋದೀಜಿಯವರ ಗಾಬರಿ ತುಂಬಿದ ಭಾಷಣವು ಮೊದಲ ಹಂತದ ಮತದಾನದಲ್ಲಿ ಇಂಡಿಯಾ ಮೈತ್ರಿಕೂಟವು ಗೆಲ್ಲುತ್ತಿದೆ ಎಂಬುದನ್ನು ತೋರಿಸಿದೆ. ಮೋದಿ ಜೀ ಹೇಳಿದ್ದು ಕೇವಲ ದ್ವೇಷದ ಮಾತು ಮಾತ್ರವಲ್ಲ ಗಮನ ಬೇರೆಡೆಗೆ ಸೆಳೆಯುವ ತಂತ್ರವಾಗಿದೆ” ಎಂದು ಖರ್ಗೆ ಕಿಡಿಕಾರಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರಧಾನಿ ಮೋದಿಯವರು ಸಂಘಪರಿವಾರದ ಕಲಿಸಿದ್ದ ಮೌಲ್ಯಗಳಿಂದ ಈ ರೀತಿಯ ಹೇಳಿಕೆ ನೀಡಿದ್ದಾರೆ. ಅಧಿಕಾರಕ್ಕಾಗಿ ಸುಳ್ಳು ಹೇಳುವುದು, ವಿಷಯಗಳ ಬಗ್ಗೆ ಆಧಾರರಹಿತ ಉಲ್ಲೇಖಗಳನ್ನು ಮಾಡುವುದು ಮತ್ತು ವಿರೋಧಿಗಳ ಮೇಲೆ ಸುಳ್ಳು ಆರೋಪ ಮಾಡುವುದು ಆರೆಸ್ಸೆಸ್ ಮತ್ತು ಬಿಜೆಪಿಯ ತರಬೇತಿಯ ವಿಶೇಷತೆಯಾಗಿದೆ” ಎಂದು ಆರ್‌ಎಸ್‌ಎಸ್ ಹಾಗೂ ಸಂಘಪರಿವಾರದ ವಿರುದ್ಧ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದೇಶದ 140 ಕೋಟಿ ಜನರು ಇನ್ನು ಮುಂದೆ ನಿಮ್ಮ ಇಂತಹ ಸುಳ್ಳಿಗೆ ಬಲಿಯಾಗುವುದಿಲ್ಲ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಪ್ರತಿಯೊಬ್ಬ ಭಾರತೀಯನದ್ದು. ಇದು ಎಲ್ಲರಿಗೂ ಸಮಾನತೆಯ ಬಗ್ಗೆ ಮಾತನಾಡುತ್ತದೆ. ಇದು ಎಲ್ಲರಿಗೂ ನ್ಯಾಯದ ಬಗ್ಗೆ ಮಾತನಾಡುತ್ತದೆ. ಕಾಂಗ್ರೆಸ್ಸಿನ ನ್ಯಾಯವು ಸತ್ಯದ ತಳಹದಿಯ ಮೇಲೆ ನಿಂತಿದೆ. ಆದರೆ ಗೋಬೆಲ್ಸ್ ರೂಪದಲ್ಲಿರುವ ಸರ್ವಾಧಿಕಾರಿಯ ಗದ್ದುಗೆ ಈಗ ಅಲುಗಾಡುತ್ತಿರುವಂತೆ ತೋರುತ್ತಿದೆ. ದೇಶದ ಇತಿಹಾಸದಲ್ಲಿ ಮೋದಿಯಷ್ಟು ತಮ್ಮ ಹುದ್ದೆಯ ಘನತೆಯನ್ನು ಯಾವ ಪ್ರಧಾನಿಯೂ ಇಳಿಸಿಲ್ಲ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿಯವರ ದ್ವೇಷ ಭಾಷಣಕ್ಕೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶದಲ್ಲಿ ಅಪಘಾತ: 11 ಮಂದಿ ಸಾವು, 10 ಜನರಿಗೆ ಗಾಯ

ಉತ್ತರ ಪ್ರದೇಶ ಶಹಜಹಾನ್‌ಪುರದಲ್ಲಿ ಬಸ್‌ ಹಾಗೂ ಟ್ರಕ್ ನಡುವೆ  ಸಂಭವಿಸಿದ ಭೀಕರ...

ಬಾಂಗ್ಲಾದೇಶ ಸಂಸದನ ಹತ್ಯೆ ಪ್ರಕರಣ: ತನಿಖೆಗಾಗಿ ಢಾಕಾ ಪೊಲೀಸರ ತಂಡ ಕೋಲ್ಕತ್ತಾಗೆ ಭೇಟಿ

ಕೋಲ್ಕತ್ತಾದಲ್ಲಿ ಈ ವಾರದ ಆರಂಭದಲ್ಲಿ ನಡೆದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್...

ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ...

ಮೊದಲ ಬಾರಿಗೆ ಮತ ಚಲಾಯಿಸಿದ ಹಣಕಾಸು ಆಯೋಗದ ಮುಖ್ಯಸ್ಥ ಅರವಿಂದ್ ಪನಗಾರಿಯಾ

ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ...