ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಮಹತ್ವದ ₹2,300 ಕೋಟಿ ಯೋಜನೆಗೆ ಅಸ್ತು‌, 25 ಸಾವಿರ ಉದ್ಯೋಗ ಸೃಷ್ಟಿ ನಿರೀಕ್ಷೆ

Date:

ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರ ಸಮ್ಮುಖದಲ್ಲಿ ಸೋಮವಾರ ಇಲ್ಲಿ ಒಡಂಬಡಿಕೆಗೆ ಅಂಕಿತ ಹಾಕಲಾಯಿತು.

- Advertisement -

ಬಳಿಕ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಏರ್ ಇಂಡಿಯಾದ ಮುಖ್ಯ ವಾಣಿಜ್ಯ ವ್ಯವಹಾರ ಅಧಿಕಾರಿ ನಿಪುಣ್ ಅಗರವಾಲ್ ಹಾಗೂ ಟಿಎಎಸ್ಎಲ್ ಸಿಇಒ ಸುಕರಣ್ ಸಿಂಗ್ ಒಡಂಬಡಿಕೆ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ವಿಧಾನಸೌಧದಲ್ಲಿ ನಡೆದ ಒಡಂಬಡಿಕೆ ವಿನಿಮಯದ ನಂತರ ಮಾತನಾಡಿದ ಸಚಿವ ಪಾಟೀಲ್, “ಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್ ಒ) ಘಟಕವನ್ನು ಸ್ಥಾಪಿಸಲು 1,300 ಕೋಟಿ ರೂ. ಹೂಡುತ್ತಿದೆ. ಇದರಿಂದಾಗಿ 1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ಇಡೀ ಭಾರತದಲ್ಲಿ ಇದು ಇಂತಹ ಮೊಟ್ಟಮೊದಲ ಯೋಜನೆಯಾಗಿದೆ”ಎಂದರು.

“ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕಂಪನಿಯು ಮೂರು ಯೋಜನೆಗಳಿಗೆ 1,030 ಕೋಟಿ ರೂ. ಬಂಡವಾಳ ಹೂಡಲಿದೆ. ಇವುಗಳ ಪೈಕಿ 420 ಕೋಟಿ ರೂ.ಗಳನ್ನು ಅದು ನಾಗರಿಕ ವಿಮಾನಗಳನ್ನು ಸರಕು ಸಾಗಣೆ ವಿಮಾನಗಳನ್ನಾಗಿ (ಫ್ರೈಟರ್) ಪರಿವರ್ತಿಸುವ ಘಟಕ ಸ್ಥಾಪನೆಗೆ ವಿನಿಯೋಗಿಸಲಿದೆ. ಜೊತೆಗೆ 310 ಕೋಟಿ ರೂ. ಹೂಡಿಕೆಯೊಂದಿಗೆ ಗನ್ ತಯಾರಿಕೆ ಘಟಕ ಮತ್ತು 300 ಕೋಟಿ ರೂ. ವೆಚ್ಚದಲ್ಲಿ ವಿಮಾನಯಾನ ಮತ್ತು ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಿದೆ. ಇದರಿಂದ 450 ಉದ್ಯೋಗಗಳು ಸೃಷ್ಟಿಯಾಗಲಿವೆ” ಎಂದು ಅವರು ವಿವರಿಸಿದರು.

ಈ ಸುದ್ದಿ ಓದಿದ್ದೀರಾ?  ದಿನ ಸಂಪಾದಕೀಯ | ಗ್ಯಾರಂಟಿಗಳ ಅಸ್ತಿಭಾರದ ಮೇಲೆ ಕಟ್ಟಿದ ಅಹಿಂದ ಬಜೆಟ್

“ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ಮತ್ತು ಕೋಲಾರದಲ್ಲಿ ಟಿಎಎಸ್ಎಲ್ ತಾನು ಸ್ಥಾಪಿಸಲಿರುವ ಗನ್ ತಯಾರಿಕೆ ಘಟಕದ ಮೂಲಕ ತನಗೆ ಅಗತ್ಯವಿರುವ 13 ಸಾವಿರ ಬಿಡಿಭಾಗಗಳ ಪೈಕಿ ಶೇಕಡ 50ರಷ್ಟನ್ನು ಪೂರೈಸಿಕೊಳ್ಳುವ ಆಲೋಚನೆ ಹೊಂದಿದೆ. ಇದರಿಂದಾಗಿ 300ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ 2-3 ಸಾವಿರ ಜನರಿಗೆ ಉದ್ಯೋಗಗಳು ಸಿಗಲಿವೆ. 1939ರಷ್ಟು ಹಿಂದೆಯೇ ಬೆಂಗಳೂರಿನಲ್ಲಿ ಎಚ್ಎಎಲ್ ಸ್ಥಾಪನೆಯಾಗುವುದರೊಂದಿಗೆ ರಾಜ್ಯವು ವೈಮಾನಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ” ಎಂದು ಅವರು ಹೇಳಿದರು.

“ರಕ್ಷಣಾ ಇಲಾಖೆಗೆ ಬೇಕಾಗುವ ವಿಮಾನಗಳು ಮತ್ತು ಹೆಲಿಕಾಪ್ಟರುಗಳ ಪೈಕಿ ಶೇಕಡ 67ರಷ್ಟು ಕರ್ನಾಟಕದಲ್ಲೇ ತಯಾರಾಗುತ್ತಿದೆ. ಜತೆಗೆ ದೇಶದ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದ ರಫ್ತು ವಹಿವಾಟಿಗೆ ರಾಜ್ಯವು ಶೇಕಡ 65ರಷ್ಟು ಕೊಡುಗೆ ನೀಡುತ್ತಿದೆ. ದೇಶದಲ್ಲಿ ಈ ವಲಯದಲ್ಲಿರುವ ಕಂಪನಿಗಳ ಪೈಕಿ ಶೇ.70ರಷ್ಟು ಕಂಪನಿಗಳು ಕರ್ನಾಟಕದಲ್ಲೇ ನೆಲೆ ಹೊಂದಿವೆ”‌ ಎಂದರು.

ಕಾರ್ಯಕ್ರಮದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಏರ್ ಇಂಡಿಯಾದ ಉನ್ನತಾಧಿಕಾರಿಗಳಾದ ಮನನ್ ಚೌಹಾಣ್, ಕಾರ್ತಿಕೇಯ ಭಟ್, ಅತುಲ್ ಶುಕ್ಲ, ಟಿಎಎಸ್ಎಲ್ ಉನ್ನತಾಧಿಕಾರಿಗಳಾದ ಗುರು ದತ್ತಾತ್ರೇಯ, ಅರ್ಜುನ್ ಮೈನೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ ಹರಿ ಮಾರಾರ್, ಸಿಒಒ ಸಾತ್ಯಕಿ ರಘುನಾಥ್, ಸಿಎಫ್ಒ ಭಾಸ್ಕರ್ ರವೀಂದ್ರ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...