ಉಡುಪಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರನಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, “ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿರುವೆ” ಎಂದು ಹೇಳಿದರು.
“ನನಗೆ ಮಾಹಿತಿ ಬಂದ ಪ್ರಕಾರ ಘಟನೆಗೆ ಸಂಬಂಧ ಪಟ್ಟಂತೆ ಯಾವುದೇ ವಿಡಿಯೋ ಕೂಡ ವೈರಲ್ ಆಗಿಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದರು.