ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್‌ ಲೋಕಾರ್ಪಣೆ

Date:

ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ಲೋಕಾರ್ಪಣೆಗೊಳಿಸಿದರು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಂತೆ 188 ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ಪ್ರಾರಂಭಿಸುತ್ತಿದ್ದೇವೆ” ಎಂದರು.

“ಈಗಾಗಲೇ 40 ಸಿದ್ದವಾಗಿದ್ದು, ಉಳಿದ್ದು ಸಿದ್ದಗೊಳ್ಳುತ್ತಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಅಗತ್ಯವಿತ್ತು. ಅದಕ್ಕಾಗಿ ಈಗಾಗಲೇ ಒಂದು ಉದ್ಘಾಟಿಸಲಾಗಿದೆ. ಮತ್ತೊಂದು ಇಂದಿರಾ ಕ್ಯಾಂಟೀನ್ ಇಲ್ಲಿ ಬರಲಿದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ವಿಮಾನ ನಿಲ್ದಾಣದಲ್ಲಿ 2 ಇಂದಿರಾ ಕ್ಯಾಂಟೀನ್ ಬರಲಿದೆ. ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರೂ. ಮಧ್ಯಾಹ್ನ ಮತ್ತು ರಾತ್ರಿ ಊಟ 10. ರೂ.ಗಳಿಗೆ ದೊರಕಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ. ಕುಳಿತು ತಿನ್ನಲು ಅನುಕೂಲವಾಗಲೆಂದು ಡೈನಿಂಗ್ ಹಾಲ್ ವ್ಯವಸ್ಥೆ ಕಲ್ಪಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಯಕರ್ತರನ್ನು ಕಡೆಗಣಿಸಿದ ಬಿಜೆಪಿ ‘ಗೋ ಬ್ಯಾಕ್’ ಘೋಷಣೆಗೆ ಬೆಚ್ಚಿತೇ?

“ಬೆಂಗಳೂರಿನ ಪ್ರತಿ ವಾರ್ಡ್‍ನಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಹಿಂದಿನ ಸರ್ಕಾರ ಊಟ ಪೂರೈಸದೇ, ಕೆಲವನ್ನು ಮುಚ್ಚಿಯೂಬಿಟ್ಟಿತ್ತು. ಬಡವರು ಊಟ ಮಾಡಬೇಕೆಂಬ ಕಾರಣಕ್ಕೆ ನಾವು ಪುನಃ ಪ್ರಾರಂಭಿಸಿದ್ದೇವೆ” ಎಂದು ತಿಳಿಸಿದರು.

ಕುಡಿಯುವ ನೀರಿಗೆ ತೊಂದರೆ ಇಲ್ಲ: ಸಿಎಂ

ಬೆಂಗಳೂರಿನ ಕುಡಿಯುವ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, “ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗಬಾರದೆಂದು ಸ್ಪಷ್ಟ ಸೂಚನೆ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಕೂಡ 2-3 ಸಭೆಗಳನ್ನು ನಡೆಸಿದ್ದು, ಎಷ್ಟೇ ಹಣ ವೆಚ್ಚವಾದರೂ ಟ್ಯಾಂಕರ್ ಹೊಸ ಕೊಳವೆಬಾವಿಗಳಿರಬಹುದು ಅಥವಾ ಕಾವೇರಿ ನೀರನ್ನಾದರೂ ಕೊಡುವ ಮೂಲಕ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಲಾಗಿದೆ” ಎಂದು ಹೇಳಿದರು.

ಆಹಾರ ಸಚಿವ ಕೆ ಹೆಚ್ ಮುನಿಯಪ್ಪ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಸೇರಿದಂತೆ ಅಧಿಕಾರಿ ವರ್ಗ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆ ಕಳೆದುಕೊಂಡವರಿಗೆ ಕಾಂಗ್ರೆಸ್ ಸರಕಾರ ಹೆಚ್ಚಿನ ಪರಿಹಾರ ಕೊಡಲಿ: ವಿಜಯೇಂದ್ರ ಆಗ್ರಹ

ನೆರೆಪೀಡಿತರು ಮತ್ತು ಮನೆ ಕಳೆದುಕೊಂಡವರಿಗೆ ಹಿಂದಿನ ಬಿಜೆಪಿ ಸರಕಾರ ಸ್ಪಂದಿಸಿದ ಮಾದರಿಯಲ್ಲಿ...

ಬೆಂಗಳೂರು | ಗುರಾಯಿಸಿ ನೋಡಿದ ಯುವಕನಿಗೆ ಇರಿದು ಕೊಲೆ!

ಗುರಾಯಿಸಿ ನೋಡಿದ ಎಂಬ ಕ್ಷುಲ್ಲಕ ಕಾರಣಕ್ಕೆ 22 ವರ್ಷದ ಯುವಕನಿಗೆ ಅಪರಿಚಿತ...

ಹಿರಿಯ ಪತ್ರಕರ್ತ ಶಶಿಧರ ಭಟ್‌ ಅವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಿಎಂ ಸಿದ್ದರಾಮಯ್ಯ

ಹಿರಿಯ ಪತ್ರಕರ್ತ ಶಶಿಧರ ಭಟ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ‌...

ಗಂಗಾರತಿ‌ ಮಾದರಿಯಲ್ಲೇ ಕೆಆರ್​ಎಸ್ ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ: ಡಿ ಕೆ ಶಿವಕುಮಾರ್‌

ಗಂಗಾರತಿ‌ ಮಾದರಿಯಲ್ಲೇ ಕೆಆರ್​ಎಸ್ ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು...