ದೇಶಕಂಡ ಅದಕ್ಷ, ಅಸಮರ್ಥ ಗೃಹ ಸಚಿವ ಪರಮೇ‌ಶ್ವರ್‌ ಅವರನ್ನು ಸಂಪುಟದಿಂದ ಕೈಬಿಡಲಿ: ಪಿ.ರಾಜೀವ್ ಆಗ್ರಹ

Date:

Advertisements

ರಾಜ್ಯದ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ದೇಶ ಕಂಡ ಅಸಮರ್ಥ ಗೃಹ ಸಚಿವರಲ್ಲಿ ಮೊದಲಿಗರು. ಇವರ ಆಡಳಿತದಲ್ಲಿ ಸಾಕಷ್ಟು ಕೊಲೆ ಪ್ರಕರಣ, ಅತ್ಯಾಚಾರ ಪ್ರಕರಣಗಳು ನಡೆದಿವೆ. ದರೋಡೆಗಳೂ ನಡೆಯುತ್ತಿದ್ದು, ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ. ಈ ಸರಕಾರ ಬಂದ ಬಳಿಕ ಪೊಲೀಸ್ ಇಲಾಖೆ ಇದೆ ಎಂಬುದೇ ಮರೆತುಹೋಗಿದೆ. ಕೂಡಲೇ ಇವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆಗ್ರಹಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಗುರುವಾರ (ಮೇ 23) ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಹಿಂದೆ ರಾಜ್ಯದಲ್ಲಿ ಒಂದು ಅಪರಾಧ ಪ್ರಕರಣ ನಡೆದರೂ, ಎಲ್ಲೋ ಒಂದು ದರೋಡೆ, ಅತ್ಯಾಚಾರ ನಡೆದರೆ ಎಲ್ಲ ಪೊಲೀಸ್ ಠಾಣೆಗೆ ಸುತ್ತೋಲೆ ಕಳುಹಿಸಲಾಗುತ್ತಿತ್ತು. ಆದರೆ ಇವರು ಗಸ್ತನ್ನು ತೀವ್ರಗೊಳಿಸಬೇಕು; ಸಂಶಯಿತರನ್ನು ತಪಾಸಣೆಗೆ ಒಳಪಡಿಸಿ; ರೌಡಿಗಳ ಪರೇಡ್ ಮಾಡಬೇಕು” ಎಂದು ಸುತ್ತೋಲೆ ಕಳಿಸುತ್ತಿದ್ದಾರೆ” ಎಂದು ಕಿಡಿಕಾರಿದರು.

“ಹೊಸ ಸರಕಾರ ಬಂದ ಬಳಿಕ ಪೊಲೀಸ್ ಇಲಾಖೆಗೆ ಕ್ರಿಯಾಶೀಲವಾಗಲು ಒಂದೇ ಒಂದು ಸುತ್ತೋಲೆ ಬಂದಿಲ್ಲ. ಡಿಜಿಪಿಗೆ ಗೃಹ ಸಚಿವರೇ ಸೂಚನೆ ಕೊಡುತ್ತಿಲ್ಲ ಎಂದಾದಾಗ ಡಿಜಿ ಏನು ಮಾಡಲು ಸಾಧ್ಯ? ರಾಜ್ಯದಲ್ಲಿ ಪೊಲೀಸ್ ಠಾಣೆಗಳು ಕಾಂಗ್ರೆಸ್ಸಿನ ಕಚೇರಿಗಳಾಗಿ ಪರಿವರ್ತನೆ ಆಗುತ್ತಿವೆ” ಎಂದು ಟೀಕಿಸಿದರು.

Advertisements

“ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಲು 3 ಕಾರಣಗಳು ಇರಬೇಕೆಂದು ಸುಪ್ರೀಂ ಕೋರ್ಟ್ ಬಹಳಷ್ಟು ಸಲ ಹೇಳಿದೆ. ಆರೋಪಿ ತಲೆ ಮರೆಸಿಕೊಳ್ಳುವ ವ್ಯಕ್ತಿ ಆಗಿದ್ದರೆ ಕೂಡಲೇ ಬಂಧಿಸಬೇಕು. ಆತ ಸಾಕ್ಷ್ಯ ನಾಶ ಮಾಡುವ ಅವಕಾಶಗಳಿದ್ದರೆ, ಇಲ್ಲವೇ ಫಿರ್ಯಾದಿದಾರ ಅಥವಾ ದೂರುದಾರನ ಮೇಲೆ ಪ್ರಭಾವ ಬೀರಿ ಆತನಿಗೆ ಅಪಾಯ ತಂದೊಡ್ಡುವ ಸ್ಥಿತಿ ಇದ್ದರೆ ಬಂಧಿಸಬೇಕು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಪ್ರಕರಣದಲ್ಲಿ ಅವರು ತಲೆ ಮರೆಸಿಕೊಳ್ಳುವುದು, ಸಾಕ್ಷ್ಯ ನಾಶ ಮಾಡುವುದು ಇರಲಿಲ್ಲ. ಕೇವಲ ರಾಜಕೀಯ ಕಾರಣಕ್ಕೆ ಅವರನ್ನು ಬಂಧಿಸುವ ಉದ್ದೇಶದಿಂದ 70 ಜನ ಪೊಲೀಸರನ್ನು ಈ ಸರಕಾರ ಬಳಸಿಕೊಂಡಿದೆ” ಎಂದು ಆಕ್ಷೇಪಿಸಿದರು.

“ಹರೀಶ್ ಪೂಂಜ ಅವರು ಹಿಂದೆ ಬೇರೊಬ್ಬರು ಪ್ರತಿಭಟನಾ ಭಾಷಣದಲ್ಲಿ ಯಾವ ರೀತಿ ಉಲ್ಲೇಖಿಸಿದ್ದರು ಎಂಬುದನ್ನು ಭಾಗಶಃ ಇಟ್ಟುಕೊಂಡು ಸುಳ್ಳು ಆರೋಪವನ್ನು ಅಥವಾ ತಪ್ಪು ಅಭಿಪ್ರಾಯ ಸೃಷ್ಟಿಸಲು ಷಡ್ಯಂತ್ರ ಮಾಡಿದ್ದಾರೆ. ಅವರಲ್ಲಿ ಯಾವುದೇ ರೀತಿಯ ಅಪರಾಧದ ಉದ್ದೇಶ ಇರಲಿಲ್ಲ. ಈ ರೀತಿ ಕೆಲಸ ಮಾಡುವ ಸರಕಾರವು ಸುಧಾಕರ್ ಅವರ ಮೇಲೆ ಎಸ್‍ಸಿ, ಎಸ್‍ಟಿ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಕೇಸು ದಾಖಲಾಗಿದ್ದರೂ ಅವರನ್ನು ಬಂಧಿಸಲಿಲ್ಲ. ಬೆಳಗಾವಿಯ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಅವರು ಮಾರಣಾಂತಿಕವಾಗಿ ತಮ್ಮ ಮೇಲೆ ಹಲ್ಲೆ ಮಾಡಿದ್ದಾಗಿ ಬೆಳಗಾವಿಯ ಪೃಥ್ವಿ ಎಂಬವರು ದೂರು ದಾಖಲಿಸಿದರೆ ಅವರ ಮೇಲೆ ಪ್ರಕರಣ ದಾಖಲಿಸಲಿಲ್ಲ” ಎಂದು ಆರೋಪಿಸಿದರು.

“ಪೆನ್ ಡ್ರೈವ್ ಹಂಚುವಲ್ಲಿ ಡಿ.ಕೆ.ಶಿವಕುಮಾರ್ ಅವರ ಪಾತ್ರ ಇದೆ ಎಂದು ಕಂಡು ಬಂದರೂ ಕೂಡ ಈ ಪೊಲೀಸರು ಡಿ.ಕೆ.ಶಿವಕುಮಾರ್ ಅವರನ್ನು ಕರೆದು ವಿಚಾರಣೆ ಮಾಡಿಲ್ಲ. ಬಿಜೆಪಿಯ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ದ್ವೇಷದ ರಾಜಕಾರಣ ಮಾಡುವುದರಲ್ಲಿ ಸರಕಾರ ಬ್ಯುಸಿಯಾಗಿದೆ” ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥನಾರಾಯಣ್, ರಾಜ್ಯ ವಕ್ತಾರ ಹೆಚ್.ಎನ್. ಚಂದ್ರಶೇಖರ್ ಅವರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X