ಆಸ್ಪತ್ರೆಗಳ ಅಭಿವೃದ್ಧಿಗಾಗಿ ಸೇವಾ ಶುಲ್ಕ ಹೆಚ್ಚಳ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

Date:

Advertisements

ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆಯಾಗಿದ್ದು, ಗ್ಯಾರಂಟಿಗಳಿಗೆ ತಳುಕು ಹಾಕುವುದರಲ್ಲಿ ಅರ್ಥವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಈ ಕುರಿತು ಮಂಗಳೂರಿನಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, “ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಅಷ್ಟಕ್ಕೂ ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ಆಯಾ ಆಸ್ಪತ್ರೆಗಳ ಅಭಿವೃದ್ಧಿಗೆ ಬಳಕೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ” ಎಂದು ಹೇಳಿದರು.

Advertisements

“ಮೂರು, ನಾಲ್ಕು ವರ್ಷಗಳಿಗೊಮ್ಮೆ ಶುಲ್ಕ ಪರಿಷ್ಕರಣೆಯಾಗುವುದು ಸಹಜ ಪ್ರಕ್ರಿಯೆಯಾಗಿದೆ. ಇದನ್ನೇ ಮುಂದಿಟ್ಟುಕೊಂಡು ಗ್ಯಾರಂಟಿಗಳಿಗೆ ತಳುಕು ಹಾಕಿ ನೋಡುವುದು ಸರಿಯಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದ ಹಣವನ್ನು ಆಯಾ ಆಸ್ಪತ್ರೆಗಳ ಎಆರ್‌ಎಸ್‌ ಸಮಿತಿಗಳು ಚರ್ಚೆ ನಡೆಸಿ ಆಸ್ಪತ್ರೆಯ ಅಭಿವೃದ್ಧಿಗೆ ಬಳಕೆ ಮಾಡುತ್ತವೆ. ಆಸ್ಪತ್ರೆಯ ಎಆರ್‌ಎಸ್‌ ಫಂಡ್‌ ಹೆಸರಲ್ಲಿ ಅನುದಾನ ಲಭ್ಯವಿರುತ್ತದೆ. ಆಸ್ಪತ್ರೆಯ ಸ್ವಚ್ಛತೆ, ದುರಸ್ಥಿ ಕಾರ್ಯಗಳು ಸೇರಿದಂತೆ ಆಸ್ಪತ್ರೆಗಳ ಅಭಿವೃದ್ಧಿಗಳಿಗೆ ಬಳಕೆ ಮಾಡಲಾಗುತ್ತದೆ. ಸರ್ಕಾರ ಕೇವಲ ಅನುಮತಿ ನೀಡುತ್ತದೆ ಅಷ್ಟೇ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಬಾರ್ಡ್ ಸಾಲ ಖೋತಾ ಮಾಡಿದ ಮೋದಿ ಸರ್ಕಾರ ರೈತಪರವೇ?

ಜನರಿಗೆ ಹೊರೆಯಾಗದಂತೆ ಶುಲ್ಕ ಪರಿಷ್ಕರಣೆಗೆ ಚಿಂತನೆ

“ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಇಲ್ಲಿಯ ವರೆಗೂ ಸಾಮೂಹಿಕವಾಗಿ ಯಾವುದೇ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿಲ್ಲ. ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಶೇ 15 ರಿಂದ 20 ರಷ್ಟು ಶುಲ್ಕ ಹೆಚ್ಚಳದ ಬಗ್ಗೆ ಚರ್ಚೆಗಳಿವೆ” ಎಂದು ತಿಳಿಸಿದರು.

“ಈ ಹಿಂದೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮಾತ್ರ ಆರೋಗ್ಯ ಇಲಾಖೆಯ ಆಯುಕ್ತರ ಅನುಮತಿ ಪಡೆದು ಶುಲ್ಕ ಪರಿಷ್ಕರಣೆ ಮಾಡಲಾಗಿದೆ. ಉಳಿದ ಯಾವುದೇ ಆಸ್ಪತ್ರೆಗಳಲ್ಲಾಗಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಾಗಲಿ ಇಲ್ಲಿಯವರೆಗೂ ಸೇವಾ ಶುಲ್ಕದಲ್ಲಿ ಹೆಚ್ಚಳವಾಗಿಲ್ಲ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಜನರಿಗೆ ಹೊರೆಯಾಗದಂತೆ ಸೂಕ್ತ ರೀತಿಯಲ್ಲಿ ಶುಲ್ಕ ಪರಿಷ್ಕರಣೆ ಮಾಡುತ್ತೇವೆ” ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X