ಸಂಸತ್ತಿನ ವಿಶೇಷ ಅಧಿವೇಶನ : 9 ವಿಷಯಗಳ ಚರ್ಚೆಗೆ ಪ್ರಧಾನಿಗೆ ಸೋನಿಯಾ ಪತ್ರ

Date:

ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿರುವ ಸಂಸತ್ ವಿಶೇಷ ಅಧಿವೇಶನದಲ್ಲಿ 9 ಪ್ರಮುಖ ವಿಷಯಗಳನ್ನು ಚರ್ಚಿಸುವಂತೆ ಕೋರಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

- Advertisement -

ಒಂಬತ್ತು ವಿಷಯಗಳನ್ನು ಪಟ್ಟಿ ಮಾಡಿರುವ ಸೋನಿಯಾ ಗಾಂಧಿ ಅವರು ಮುಂಬರುವ ವಿಶೇಷ ಅಧಿವೇಶನದಲ್ಲಿ ಅವುಗಳ ಬಗ್ಗೆ ಚರ್ಚೆಗೆ ಸಮಯಾವಕಾಶ ನೀಡಬೇಕು ಎಂದು ಪ್ರಧಾನಿಯನ್ನು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ನೀವು ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನವನ್ನು ಸೆಪ್ಟೆಂಬರ್ 18 ರಿಂದ ಕರೆದಿರುವಿರಿ. ಈ ವಿಶೇಷ ಅಧಿವೇಶನವನ್ನು ಇತರ ರಾಜಕೀಯ ಪಕ್ಷಗಳೊಂದಿಗೆ ಯಾವುದೇ ಸಮಾಲೋಚನೆಯಿಲ್ಲದೆ ಕರೆಯಲಾಗಿದೆ ಎಂದು ನಾನು ಗಮನಿಸಿರುವೆ. ನಮ್ಮ ಪ್ರತಿ ಪಕ್ಷದ ಯಾರಿಗೂ ಅದರ ಕಾರ್ಯಸೂಚಿಯ ಬಗ್ಗೆ ಯಾವುದೇ ಕಲ್ಪನೆ ಇಲ್ಲ” ಎಂದು ಕಾಂಗ್ರೆಸ್ ನಾಯಕಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭಾರತ, ಟರ್ಕಿಯಲ್ಲಿ ನಕಲಿ ಯಕೃತ್ತಿನ ಔಷಧಿ ಮಾರಾಟ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

“ಇತರ ರಾಜಕೀಯ ಪಕ್ಷಗಳೊಂದಿಗೆ ಯಾವುದೇ ಸಮಾಲೋಚನೆಯಿಲ್ಲದೆ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಆದರೆ ಅಧಿವೇಶನವು ಸಾರ್ವಜನಿಕ ಕಾಳಜಿ ಮತ್ತು ಪ್ರಾಮುಖ್ಯತೆಯ ವಿಷಯಗಳನ್ನು ಪ್ರಸ್ತಾಪಿಸಲು ನಮಗೆ ಅವಕಾಶವನ್ನು ನೀಡಬೇಕು” ಎಂದು ತಿಳಿಸಿದ್ದಾರೆ.

ಚರ್ಚೆಗೆ ತೆಗೆದುಕೊಳ್ಳಬೇಕಾದ ಒಂಬತ್ತು ವಿಷಯಗಳನ್ನು ಪಟ್ಟಿ ಮಾಡಿರುವ ಸೋನಿಯಾ ಗಾಂಧಿ, “ಈ ವಿಷಯಗಳ ಬಗ್ಗೆ ಚರ್ಚೆಗೆ ಸೂಕ್ತ ನಿಯಮಗಳ ಅಡಿಯಲ್ಲಿ ಸಮಯವನ್ನು ನಿಗದಿಪಡಿಸಲಾಗುವುದು ಎಂದು ನಾನು ಪ್ರಾಮಾಣಿಕವಾಗಿ ಭಾವಿಸುತ್ತೇನೆ” ಎಂದು ತಿಳಿಸಿದ್ದಾರೆ.

ಸೋನಿಯಾ ಗಾಂಧಿ ಪಟ್ಟಿ ಮಾಡಿದ ವಿಷಯಗಳು

  1. ಪ್ರಸ್ತುತ ಆರ್ಥಿಕ ಪರಿಸ್ಥಿತಿಯಲ್ಲಿ ಏರಿಕೆಯಾಗಿರುವ ಅಗತ್ಯ ವಸ್ತುಗಳ ಬೆಲೆ, ಹೆಚ್ಚುತ್ತಿರುವ ನಿರುದ್ಯೋಗ, ಅಸಮಾನತೆಗಳ ಏರಿಕೆ ಮತ್ತು ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಂಕಷ್ಟದ ಮೇಲೆ ಕೇಂದ್ರೀಕರಿಸಿ.
  2. ಕನಿಷ್ಠ ಬೆಂಬಲ ಬೆಲೆ ಮತ್ತು ರೈತ ಸಂಘಟನೆಗಳು ಬೇಡಿಕೆಯಿಟ್ಟಿರುವ ಇತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೈತರು ಮತ್ತು ರೈತ ಸಂಘಟನೆಗಳಿಗೆ ಕೈಗೊಂಡಿರುವ ಬದ್ಧತೆ.
  3. ಈಗಾಗಲೇ ಎಲ್ಲಡೆ ಬಹಿರಂಗವಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಅದಾನಿ ವ್ಯಾಪಾರ ಸಮೂಹದ ವಹಿವಾಟುಗಳನ್ನು ತನಿಖೆ ಮಾಡಲು ಜಂಟಿ ಸಂಸದೀಯ ಸಮಿತಿಗೆ ಬೇಡಿಕೆ.
  4. ಮಣಿಪುರದ ಜನರು ಎದುರಿಸುತ್ತಿರುವ ನಿರಂತರ ಸಂಕಟ ಮತ್ತು ರಾಜ್ಯದಲ್ಲಿ ಸಾಂವಿಧಾನಿಕ ಆಡಳಿತ ವ್ಯವಸ್ಥೆ ಮತ್ತು ಸಾಮಾಜಿಕ ಸಾಮರಸ್ಯದ ಕುಸಿತ.
  5. ಹರ್ಯಾಣದಂತಹ ವಿವಿಧ ರಾಜ್ಯಗಳಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿದೆ.
  6. ಚೀನಾದಿಂದ ಭಾರತೀಯ ಭೂಪ್ರದೇಶದ ಮುಂದುವರಿದ ಆಕ್ರಮಣ ಮತ್ತು ಲಡಾಖ್ ಮತ್ತು ಅರುಣಾಚಲ ಪ್ರದೇಶದ ಗಡಿಗಳಲ್ಲಿ ನಮ್ಮ ಸಾರ್ವಭೌಮತ್ವಕ್ಕೆ ಉಂಟಾಗಿರುವ ಸವಾಲುಗಳು.
  7. ಜಾತಿ ಗಣತಿಯ ತುರ್ತು ಅಗತ್ಯ.
  8. ಕೇಂದ್ರ-ರಾಜ್ಯ ಸಂಬಂಧಗಳ ಮೇಲೆ ಆಗುತ್ತಿರುವ ಹಾನಿ.
  9. ಕೆಲವು ರಾಜ್ಯಗಳಲ್ಲಿ ಅತಿವೃಷ್ಟಿ ಮತ್ತು ಇತರ ರಾಜ್ಯಗಳಲ್ಲಿ ಅನಾವೃಷ್ಟಿಯಿಂದ ಉಂಟಾದ ನೈಸರ್ಗಿಕ ವಿಕೋಪಗಳ ಪರಿಣಾಮದ ಬಗ್ಗೆ ಚರ್ಚೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಕ್ಷಾಂತರ ಪರ್ವ: ಮೋದಿ ಸರ್ಕಾರದ ಅಧಿಕಾರದ ಆಸೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳ ಬಲಿ

ಭಾರತದಲ್ಲಿ 2022 ಮತ್ತು 2026ರ ನಡುವಿನ ಅವಧಿಯಲ್ಲಿ ರಾಜಕೀಯ ಕ್ಷೇತ್ರದಲ್ಲಿ ಬಹುದೊಡ್ಡ...

ಯುಪಿ | ಮತದಾರರ ಪಟ್ಟಿಯಲ್ಲಿ ಭಾರೀ ಅಕ್ರಮ ಆರೋಪ; 16 ಸಾವಿರಕ್ಕೂ ಹೆಚ್ಚು ಹೆಸರುಗಳ ಪರಿಶೀಲನೆಗೆ EC ಆದೇಶ

ಉತ್ತರ ಪ್ರದೇಶದ ಪಿಲಿಭಿತ್ ಸದರ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ...

ಅಭಿವೃದ್ಧಿ ಹೆಸರಲ್ಲಿ 23 ಲಕ್ಷ ಮರಗಳಿಗೆ ಕುತ್ತು; ಅರುಣಾಚಲದ ಜಲವಿದ್ಯುತ್‌ ಯೋಜನೆ ಅನುಮತಿ ಕೋರಿದ NHPC

ಅರುಣಾಚಲ ಪ್ರದೇಶದಲ್ಲಿ 1,720 ಮೆಗಾವ್ಯಾಟ್ ಸಾಮರ್ಥ್ಯದ ಕಮಲಾ ಜಲವಿದ್ಯುತ್ ಯೋಜನೆ ಅನುಷ್ಠಾನಗೊಳಿಸಲು...

ಸೋನಿಯಾ ಗಾಂಧಿ ಇನ್‌ಸ್ಟಾಗ್ರಾಮ್‌ಗೆ ಪದಾರ್ಪಣೆ: ‘ಬಿಲಾಂಗಿಂಗ್’ ಆತ್ಮಕಥೆಯ ಮೊದಲ ನೋಟ ಬಿಡುಗಡೆ

ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಾಮಾಜಿಕ ಜಾಲತಾಣ...