‘ಇಂಡಿಯಾ’ ಮೈತ್ರಿಕೂಟ ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿ ನಿರ್ಧರಿಸುತ್ತದೆ: ಉದ್ಧವ್ ಠಾಕ್ರೆ

Date:

ಇಂಡಿಯಾ ಮೈತ್ರಿಕೂಟ ಸಭೆ ಸೇರಿ ಪ್ರಧಾನಿ ಅಭ್ಯರ್ಥಿ ನಿರ್ಧಿರಿಸಲಿದೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

- Advertisement -

ಲೋಕಸಭೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮಂಗಳವಾರ (ಜೂನ್ 4) ಮುಕ್ತಾಯವಾಗಿದ್ದು ಬುಧವಾರ ಇಂಡಿಯಾ ಮೈತ್ರಿಕೂಟ ಸಭೆ ಸೇರಲಿದೆ. ಇದಕ್ಕೂ ಮುನ್ನ ಉದ್ಧವ್ ಠಾಕ್ರೆ ಈ ಹೇಳಿಕೆಯನ್ನು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಬಿಜೆಪಿ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೂಡಾ ಠಾಕ್ರೆ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ?  ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರದಲ್ಲಿ ‘ಇಂಡಿಯಾ’ ಒಕ್ಕೂಟಕ್ಕೆ ಭರ್ಜರಿ ಗೆಲುವು

“ನಮ್ಮ ಇಂಡಿಯಾ ಮೈತ್ರಿಕೂಟ ರಚನೆಯಾದ ದಿನವೇ ನಾವು ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗಾಣಿಸಿ ಸಂವಿಧಾನವನ್ನು ಉಳಿಸಬೇಕೆಂದು ನಿರ್ಧರಿಸಿದ್ದೆವು. ನಾಳೆ (ಜೂನ್ 5) ನಾವು ಪ್ರಧಾನಿ ಅಭ್ಯರ್ಥಿಯನ್ನು ನಾವು ನಿರ್ಧರಿಸುತ್ತೇವೆ. ಎಲ್ಲಾ ದೇಶಭಕ್ತರು ಮತ್ತು ಅವರಿಂದ (ಬಿಜೆಪಿ) ಕಿರುಕುಳಕ್ಕೊಳಗಾದ ಎಲ್ಲಾ ಜನರು ಚಂದ್ರಬಾಬು ಕೂಡ ಬಿಜೆಪಿ ಸರ್ಕಾರದಿಂದ ಕಿರುಕುಳಕ್ಕೊಳಗಾಗಿದ್ದಾರೆ” ಎಂದು ಮಂಗಳವಾರ ಠಾಕ್ರೆ ಹೇಳಿದರು.

ಹಾಗೆಯೇ “ಇಂಡಿಯಾ ಮೈತ್ರಿಕೂಟವು ತಮ್ಮಲ್ಲಿರುವ ಸಂಖ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ರಚನೆಗೆ ಹಕ್ಕು ಸಾಧಿಸುವ ಅಗತ್ಯವಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ?  ಮಹಾ ಸರ್ಕಾರ ಬೀಳಿಸಿದ್ದ ಬಿಜೆಪಿಗೆ ಮುಖಭಂಗ; ‘ಇಂಡಿಯಾ’ ಒಕ್ಕೂಟಕ್ಕೆ ಭಾರೀ ಮುನ್ನಡೆ

ಈ ನಡುವೆ ಇಂಡಿಯಾ ಒಕ್ಕೂಟವು ಮಹಾರಾಷ್ಟ್ರದಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಮುಂಬೈ ದಕ್ಷಿಣದಲ್ಲಿ ಅರವಿಂದ್ ಸಾವಂತ್ ಸೇರಿದಂತೆ ಒಂಬತ್ತು ಶಿವಸೇನೆ (ಯುಬಿಟಿ) ಲೋಕಸಭಾ ಅಭ್ಯರ್ಥಿಗಳು ಗೆದ್ದಿದ್ದಾರೆ. ಮುಂಬೈ ಉತ್ತರದಲ್ಲಿ ವರ್ಷಾ ಗಾಯಕ್ವಾಡ್ ಸೇರಿದಂತೆ ಒಟ್ಟು 13 ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಎನ್‌ಸಿಪಿಯ ಶರದ್‌ಚಂದ್ರ ಪವಾರ್ ಅವರು ಬಾರಾಮತಿಯಿಂದ ಸುಪ್ರಿಯಾ ಸುಳೆ ಸೇರಿದಂತೆ 8 ಸ್ಥಾನಗಳನ್ನು ಗೆದ್ದಿದ್ದಾರೆ. ಆದರೆ ನಿರೀಕ್ಷೆಗೆ ತಕ್ಕಂತೆ ಗೆಲುವು ಮಾಡುವಲ್ಲಿ ಎನ್‌ಡಿಎ ವಿಫಲವಾಗಿದೆ. ನಾಗ್ಪುರದಿಂದ ನಿತಿನ್ ಗಡ್ಕರಿ ಮತ್ತು ಮುಂಬೈ ಉತ್ತರದಲ್ಲಿ ಪಿಯೂಷ್ ಗೋಯಲ್ ಸೇರಿದಂತೆ ಬಿಜೆಪಿ 9 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...