77 ವರ್ಷಗಳಿಂದ ಭಾರತ ಸಾಕಷ್ಟು ಅಭಿವೃದ್ಧಿ ಸಾಧಿಸಿದೆ: ಸಭಾಪತಿ ಬಸವರಾಜ ಹೊರಟ್ಟಿ

Date:

Advertisements
  • ವಿಧಾನಸೌಧದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಧ್ವಜಾರೋಹಣ
  • ‘ಭಾರತ ವಿಶ್ವಗುರು ಆಗುವಲ್ಲಿ ಹೆಜ್ಜೆ ಇಡುತ್ತಿರುವುದು ಹೆಮ್ಮೆಯ ಸಂಗತಿ’

ಭಾರತಕ್ಕೆ ಸ್ವಾತಂತ್ರ್ಯ ಸುಮ್ಮನೆ ಬಂದಿಲ್ಲ ಲಕ್ಷಾಂತರ ಭಾರತೀಯರ ಅಮೂಲ್ಯ ಜೀವ ಬಲಿದಾನದ ಫಲವಾಗಿದೆ. ಸ್ವಾತಂತ್ರ್ಯ ಯೋಧರ ಆತ್ಮಕ್ಕೆ ಶಾಂತಿ ಕೋರುವುದರ ಜೊತೆಗೆ ಅವರ ಕುಟುಂಬಕ್ಕೆ ನಾವು ಸದಾ ಚಿರಋಣಿಯಾಗಿ ಇರಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ವಿಧಾನಸೌಧದ ಪೂರ್ವ ಭಾಗದ ಭವ್ಯ ಮೆಟ್ಟಲುಗಳ ಮುಂಭಾಗದಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, “ಕಳೆದ 77 ವರ್ಷಗಳಿಂದ ಭಾರತ ಸಾಕಷ್ಟು ಅಭಿವೃದ್ಧಿ ಹೊಂದುವ ಮೂಲಕ ವಿಶ್ವದಲ್ಲಿ ಬಲಿಷ್ಠ ರಾಷ್ಟ್ರವಾಗಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ವಿಶ್ವಗುರು ಆಗುವಲ್ಲಿ ದಾಪುಗಾಲು ಇಡುತ್ತಿರುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಸಂಗತಿ” ಎಂದರು.

“ಇಡೀ ಜಗತ್ತು ಭಾರತದತ್ತ ನೋಡುತ್ತಿರುವುದು ನಮಗೆಲ್ಲ ಅಭಿಮಾನದ ಸಂಗತಿ. ದೇಶ ಕಟ್ಟುವಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳೋಣ. ಸಾಕಷ್ಟು ಹಿರಿಯರ ಶ್ರಮದಿಂದ ಹಾಗೂ ಲಕ್ಷಾಂತರ ಜನರ ಬಲಿದಾನದಿಂದ ನಮಗೆಲ್ಲ ಇಂದು ಸ್ವಾತಂತ್ರ್ಯ ಸಿಕ್ಕಿದೆ. ಸ್ವಾತಂತ್ರ್ಯ ಎನ್ನುವುದು ಬಹುದೊಡ್ಡ ಆಸ್ತಿ. ಅದು ಒಮ್ಮೆ ಕಳೆಯಿತೆಂದರೆ ಮರಳಿ ಪಡೆಯಲು ಅದರ ಹತ್ತರಷ್ಟು ಬೆಲೆ ಕಟ್ಟಬೇಕಾಗುತ್ತದೆ. ಅದರ ಮೌಲ್ಯ ಅರಿತು ಹಿರಿಯರು ತಂದುಕೊಟ್ಟ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು ದೇಶಾಭಿಮಾನವನ್ನು ಹೆಚ್ಚಿಸಿಕೊಂಡು ಭವ್ಯ ಭಾರತ ಕಟ್ಟುವತ್ತ ಸಂಕಲ್ಪ ಮಾಡೋಣ ಎಂದು ಹೊರಟ್ಟಿ ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಹುಸಿ ದೇಶಭಕ್ತರ ಮೋದಿ ಕಾಲ; ಗಾಂಧಿ ಅವಮಾನಿಸುವ ಕಾಲ

“ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ, ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ, ವಿಧಾನ ಪರಿಷತ್ತಿನ ಅಪರ ಕಾರ್ಯದರ್ಶಿ ಎಸ್ ನಿರ್ಮಲ, ಸಭಾಪತಿಗಳ ಆಪ್ತ ಕಾರ್ಯದರ್ಶಿ ಶೈಲಾ ಕೆ.ಡಿ, ಸಭಾಪತಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ. ಮಹೇಶ ವಾಳ್ವೇಕರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X