ಭಾರತ-ಪಾಕ್ ಸಂಘ‍ರ್ಷ | ‘ಟೂರ್ಸ್‌ ಆ್ಯಂಡ್‌ ಟ್ರಾವೆಲ್ಸ್‌’ ಕಂಪನಿ ತೆರೆಯುತ್ತಿದೆ ಮೋದಿ ಸರ್ಕಾರ: ಸಂಜಯ್ ರಾವತ್

Date:

ಪಾಕಿಸ್ತಾನ ವಿರುದ್ದ ನಡೆದ ಆಪರೇಷನ್‌ ಸಿಂಧೂರ ಮತ್ತು ಭಯೋತ್ಪಾದನೆ ವಿರೋಧಿ ನಿಲುವಿನ ಹೆಸರಿನಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ‘ಟೂರ್ಸ್‌ ಆ್ಯಂಡ್ ಟ್ರಾವೆಲ್ಸ್‌’ ಕಂಪನಿ ತೆರೆಯಲು ಮುಂದಾಗಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿರುವ ರಾಜ್ಯಸಭಾ ಸದಸ್ಯ ರಾವತ್, “ಭಯೋತ್ಪಾದನೆ ವಿರುದ್ದವಾಗಿ ಭಾರತದ ನಿಲುವನ್ನು ಮಿತ್ರ ರಾಷ್ಟ್ರಗಳಿಗೆ ತಿಳಿಸಲು ಕೇಂದ್ರ ಸರ್ಕಾರವು ನಿಯೋಗಗಳನ್ನು ಕಳಿಸುತ್ತಿದೆ. ಆ ಮೂಲಕ, ಸರ್ಕಾರವು ಸರ್ವಪಕ್ಷಗಳ ಸದಸ್ಯರನ್ನು ಪ್ರವಾಸಕ್ಕೆ ಕಳಿಸಿದೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಕಾಶ್ಮೀರ ಸಮಸ್ಯೆಯ ಕುರಿತು ಸರ್ಕಾರವು ವಿಶೇಷ ಅಧಿವೇಶನ ಕರೆದು, ಗಂಭೀರವಾಗಿ ಚರ್ಚೆ ನಡಸಬೇಕಿತ್ತು. ಆದರೆ, ವಿಶೇಷ ಅಧಿವೇಶನ ಕರೆಯದೆ, ವಿದೇಶಗಳಿಗೆ ನಿಯೋಗಗಳನ್ನು ಕಳಿಸುವ ಮೂಲಕ ಸಮಸ್ಯೆಯನ್ನು ಅಂತಾರಾಷ್ರೀಯಗೊಳಿಸಲು ಬಿಜೆಪಿ ಮುಂದಾಗಿದೆ. ಮೊದಲು ವಿಶೇಷ ಅಧಿವೇಶನ ನಡೆಸಿ, ಬಳಿಕ ಅಗತ್ಯವಿದ್ದರೆ ನಿಯೋಗಗಳನ್ನು ಕಳಿಸಬಹುದಿತ್ತು” ಎಂದು ರಾವತ್ ಹೇಳಿದ್ದಾರೆ.

“ಸಂಘರ್ಷದಲ್ಲಿರುವ ಇಸ್ರೇಲ್, ಉಕ್ರೇನ್‌ನ ಪ್ರಧಾನಿಗಳು ವಿದೇಶಗಳಿಗೆ ನಿಯೋಗ ಕಳಿಸಿದ್ದಾರೆಯೇ. ಭಾರತದ ಸಂಸದರು ವಿದೇಶಗಳಿಗೆ ಹೋಗಿ ಏನು ಮಾಡುತ್ತಾರೆ. ಮೋದಿ ಅವರು 11 ವರ್ಷಗಳಲ್ಲಿ ಎಷ್ಟು ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಆದರೆ, ಅವರ ಪ್ರವಾಸಗಳು ಯಾವುದೇ ಫಲಿತಾಂಶ ನೀಡಿಲ್ಲ” ಎಂದಿದ್ದಾರೆ.

“ಲೋಕಸಭೆಯಲ್ಲಿ ಶಿವಸೇನೆ (ಯುಟಿಬಿ)ಯ 9 ಸಂಸದರಿದ್ದಾರೆ. ಆದರೂ, ಸರ್ವಪಕ್ಷ ನಿಯೋಗದ ವಿಚಾರವಾಗಿ ನಮ್ಮ ಪಕ್ಷವನ್ನು ಸಂಪರ್ಕಿಸಿಲ್ಲ. ಟಿಎಂಸಿ, ಸಮಾಜವಾದಿ ಪಕ್ಷ ಹಾಗೂ ಆರ್‌ಜೆಡಿ ಪಕ್ಷದ ಯಾವುದೇ ಸಂಸದರನ್ನು ನಿಯೋಗದಲ್ಲಿ ಸೇರಿಸಿಕೊಂಡಿಲ್ಲ. ನಿಯೋಗದ ವಿಚಾರದಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ. ವಿಪಕ್ಷಗಳೊಳಗೆ ಒಡಕು ಮೂಡಿಸಲು ಯತ್ನಿಸುತ್ತಿದೆ” ಎಂದು ರಾವತ್ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...