ಭಾರತ-ಪಾಕ್‌ ಸಂಘರ್ಷ: ‘ಅಮೆರಿಕ ಕರೆಗೆ ಶರಣಾದ ಮೋದಿ’

Date:

ಪಹಲ್ಗಾಮ್ ದಾಳಿಯ ಬಳಿಕ ಉದ್ಭವಿಸಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಕದನ ವಿರಾಮದೊಂದಿಗೆ ಕೊನೆಗೊಂಡಿದೆ. ಭಾರತವು ಕದನ ವಿರಾಮಕ್ಕೆ ಒಪ್ಪಿಕೊಂಡ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, “ಅಮೆರಿಕದಿಂದ ದೂರವಾಣಿ ಕರೆ ಬಂದ ಕೂಡಲೇ ಪ್ರಧಾನಿ ಮೋದಿ ಶರಣಾಗಿದ್ದಾರೆ” ಎಂದು ಟೀಕಿಸಿದ್ದಾರೆ.

- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ‘ವ್ಯಾಪಾರ ಸಂಬಂಧವನ್ನು ಅಸ್ತ್ರವಾಗಿ ಬಳಸಿಕೊಂಡು ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆಯಾಗುವಂತೆ ಮಾಡಿದೆ’ ಎಂದು ಪದೇ-ಪದೇ ಹೇಳಿಕೊಂಡಿದ್ದಾರೆ. ಆದಾಗ್ಯೂ, ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸರ್ಕಾರದ ಪ್ರಮುಖ ನಾಯಕರು ಟ್ರಂಪ್ ಹೇಳಿಕೆಯನ್ನು ಅಲ್ಲಗಳೆದಿಲ್ಲ. ಹೀಗಾಗಿ, ಕದನ ವಿರಾಮಕ್ಕೆ ಭಾರತ ಒಪ್ಪಿಕೊಂಡ ಬಗ್ಗೆ ಸಾಕಷ್ಟು ಆಕ್ಷೇಪ, ಟೀಕೆಗಳು ವ್ಯಕ್ತವಾಗುತ್ತಿವೆ. ರಾಹುಲ್ ಗಾಂಧಿ ಕೂಡ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“1971ರ ಯುದ್ಧದ ಸಮಯದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿ ಅಮೆರಿಕದಿಂದ ಒತ್ತಡ ಹಾಕುವ ಕರೆ ಬಂದರೂ ಆಗಿನ ಪ್ರಧಾನಿ ಇಂದಿರಾಗಾಂಧಿ ಅವರು ಮಣಿದಿರಲಿಲ್ಲ. ದಿಟ್ಟತನದಿಂದ ನಿರ್ಧಾರಗಳನ್ನು ತೆಗೆದುಕೊಂಡಿದ್ದರು. ಭಾರತವು ಪಾಕಿಸ್ತಾನವನ್ನು ಎರಡು ರಾಷ್ಟ್ರಗಳಾಗಿ ವಿಭಜಿಸಿತ್ತು. ಆದರೆ, ಈಗ ಟ್ರಂಪ್ ಒಂದು ಕರೆ ಮಾಡಿದ್ದಕ್ಕೆ, ಮೋದಿ ತಕ್ಷಣವೇ ಶರಣಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

“ಸ್ವಾತಂತ್ರ್ಯ ಚಳುವಳಿಯ ಸಮಯದಿಂದಲೂ ಶರಣಾಗತಿ, ಕ್ಷಮಾಪಣೆಯ ಪತ್ರ ಬರೆಯವುದು ಆರ್‌ಎಸ್‌ಎಸ್‌, ಬಿಜೆಪಿಗರಿಗೆ ಅಭ್ಯಾಸವಾಗಿದೆ. ಕಾಂಗ್ರೆಸ್‌ ಎಂದಿಗೂ ಶರಣಾಗಿಲ್ಲ. ಇದೇ ಬಿಜೆಪಿ/ಆರ್‌ಎಸ್‌ಎಸ್‌ ಮತ್ತು ಕಾಂಗ್ರೆಸ್ ನಡುವಿನ ವ್ಯತ್ಯಾಸ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...