ಪಶ್ಚಿಮ ಏಷ್ಯಾದಲ್ಲಿ ಈಗ ಮೂಡಿರುವ ಬಿಕ್ಕಟ್ಟಿಗೆ ಹಮಾಸ್ ಕೂಡಾ ಒಂದು ಕಾರಣ ಎಂದು ಭಾರತ ಹೇಳಿಕೆ ನೀಡಿದೆ.
ಇದೇ ಮೊದಲ ಬಾರಿಗೆ ಈ ರೀತಿಯ ಹೇಳಿಕೆ ನೀಡಿರುವ ವಿದೇಶಾಂಗ ಸಚಿವಾಲಯ, ಗಾಝಾದ ಮೇಲೆ ನಿರಂತರವಾಗಿ ಬಾಂಬ್ ಸುರಿಸುತ್ತಿರುವ ಇಸ್ರೇಲ್, ಅಂತಾರಾಷ್ಟ್ರೀಯ ಮಾನವೀಯ ಕಾಯ್ದೆಗೆ ಬದ್ಧರಾಗಿರಬೇಕು ಎಂದು ಇದೇ ವೇಳೆ ಒತ್ತಾಯಿಸಿದೆ.
ಪಶ್ಚಿಮ ಏಷ್ಯಾದ ಬಿಕ್ಕಟ್ಟು ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ದೂರವಾಣಿಯಲ್ಲಿ ಚರ್ಚಿಸಿದ್ದು, ಅದರ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಈ ಸಂಬಂಧ ಹೇಳಿಕೆ ನೀಡಿದೆ.
Spoke this afternoon with FM @elicoh1 of Israel.
Appreciated his sharing the Israeli assessment of the current situation.
Reiterated our firm commitment to countering terrorism, observance of international humanitarian law and for a two state solution.
— Dr. S. Jaishankar (@DrSJaishankar) November 4, 2023
ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು, ಇಸ್ರೇಲ್ ವಿದೇಶಾಂಗ ಸಚಿವ ಎಲಿ ಕೊಹೆನ್ ಜೊತೆಗೆ ಸದ್ಯದ ಬೆಳವಣಿಗೆಗಳ ಬಗ್ಗೆ ಶನಿವಾರ ಚರ್ಚಿಸಿರುವುದಾಗಿ ತಿಳಿಸಿದ್ದಾರೆ. ಈ ಮಾತುಕತೆಯ ವೇಳೆ ಭಯೋತ್ಪಾದನೆ ನಿಗ್ರಹದಲ್ಲಿ ಹಾಗೂ ಎರಡು ರಾಜ್ಯಗಳ ಪರಿಹಾರಕ್ಕಾಗಿ ನಮ್ಮ ದೃಢವಾದ ಬದ್ಧತೆಯನ್ನು ಪುನರುಚ್ಚರಿಸಿದ್ದು, ಇಸ್ರೇಲ್‌ನಲ್ಲಿ ನಡೆದ ದಾಳಿ ದಿಗ್ಭ್ರಮೆ ಮೂಡಿಸಿರುವ ಬಗ್ಗೆಯೂ ತಿಳಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ ನಂತರ ಅರಬ್ ರಾಷ್ಟ್ರದೊಂದಿಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಇತ್ತೀಚೆಗಷ್ಟೇ ಮೊದಲ ಬಾರಿಗೆ ಮಾತುಕತೆ ನಡೆಸಿದ್ದರು. ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟು ಕುರಿತು ಯುಎಇಯ ತಮ್ಮ ಸಹವರ್ತಿ ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಜೈಶಂಕರ್ ಚರ್ಚಿಸಿದ್ದರು.