ಜಮ್ಮು-ಕಾಶ್ಮೀರದಲ್ಲಿ ‘ಇಂಡಿಯಾ’ ಗೆದ್ದಿದೆ, ಬಿಜೆಪಿಯೂ ಗೆದ್ದಿದೆ: ಸೋತವರು ಯಾರು?

Date:

ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇ‍ಷ ಸ್ಥಾನಮಾನ ಕಸಿದುಕೊಂಡರೂ, ರಾಜ್ಯತ್ವವನ್ನು ಕಿತ್ತುಕೊಂಡರೂ, ರಾಜ್ಯವನ್ನು ಇಬ್ಬಾಗ ಮಾಡಿ ಎರಡು ಕೇಂದ್ರಾಡಳಿತ ಪ್ರವೇಶಗಳಾಗಿ ವಿಭಜಿಸಿದರೂ ಬಿಜೆಪಿ ತನ್ನ ಸ್ಥಾನಗಳನ್ನು ಹಾಗೆಯೇ ಉಳಿಸಿಕೊಂಡಿದೆ. ಅದಾಗ್ಯೂ, 'ಭಾರತ' ಬಣಕ್ಕೆ ಈ ಗೆಲುವು ನಿರ್ಣಾಯಕವಾಗಿದೆ.

ಜಮ್ಮು-ಕಾಶ್ಮೀರದಲ್ಲಿ 10 ವರ್ಷಗಳ ಬಳಿಕ ವಿಧಾನಸಭಾ ಚುನಾವಣೆ ನಡೆದಿದೆ. ಚುನಾವಣಾ ಫಲಿತಾಂಶವೂ ಹೊರಬಿದ್ದಿದೆ. ಕಾಂಗ್ರೆಸ್‌, ನ್ಯಾಷನಲ್ ಕಾನ್ಫರೆನ್ಸ್‌ (ಎನ್‌ಸಿ), ಸಿಪಿಐಎಂನ ‘ಇಂಡಿಯಾ’ ಮೈತ್ರಿಕೂಟ ಸ್ಪಷ್ಟ ಬಹುಮತ ಗಳಿಸಿದೆ. ಒಮರ್ ಅಬ್ದುಲ್ಲಾ ಮುಂದಿನ ಮುಖ್ಯಮಂತ್ರಿ ಎಂದು ಎನ್‌ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದಾರೆ. ಜಮ್ಮು-ಕಾಶ್ಮೀರದ ಚುಕ್ಕಾಣಿ ‘ಇಂಡಿಯಾ’ ಕೈಸೇರಿದೆ.

- Advertisement -

ಕಣಿವೆ ರಾಜ್ಯದಲ್ಲಿ ‘ಇಂಡಿಯಾ’ ಗೆದ್ದಿದೆ. ಎನ್‌ಸಿ 42 ಸ್ಥಾನಗಳನ್ನೂ, ಕಾಂಗ್ರೆಸ್‌ 6, ಸಿಪಿಐ(ಎಂ) 1 ಕ್ಷೇತ್ರಗಳನ್ನೂ ಹಾಗೂ ಬಿಜೆಪಿ 29 ಸ್ಥಾನಗಳನ್ನು ಗೆದ್ದಿವೆ. ಪಿಡಿಪಿ ಮತ್ತು ಇತರರು 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈ ಅಂಕಿಅಂಶವು ಏನು ಹೇಳುತ್ತದೆ? ಇದು ಬಿಜೆಪಿಯ ಸೋಲೇ ಅಥವಾ ‘ಇಂಡಿಯಾ’ದ ಗೆಲುವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದು, ಖಂಡಿತವಾಗಿಯೂ ‘ಇಂಡಿಯಾ’ದ ಗೆಲುವು. ಆದರೆ, ಬಿಜೆಪಿಯ ಸೋಲಲ್ಲ. 2014ರಲ್ಲಿ 15 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದ್ದ ಎನ್‌ಸಿ, ಈಗ ಬರೋಬ್ಬರಿ 42 ಸ್ಥಾನಗಳಿಗೆ ಏರಿಕೆ ಕಂಡಿದೆ. ಇದು, ಎನ್‌ಸಿಯ ಭಾರೀ ದೊಡ್ಡ ಗೆಲುವು. ಆದರೆ, ಮೆಹಬೂಬಾ ಮುಫ್ತಿ ಅವರ ಪಿಡಿಪಿ 2014ರಲ್ಲಿ 28 ಸ್ಥಾನ ಗಳಿಸಿತ್ತು. ಈಗ ಕೇವಲ 3 ಸ್ಥಾನಗಳಿಗೆ ಕುಸಿದಿದೆ. ಇನ್ನು, ಕಾಂಗ್ರೆಸ್‌ 17ರಿಂದ ಈಗ 6ಕ್ಕೆ ಇಳಿದಿದೆ. ಆದರೆ, ಬಿಜೆಪಿ ತನ್ನ ಸ್ಥಾನಗಳನ್ನು ಕಳೆದುಕೊಂಡಿಲ್ಲ. ಕಳೆದ ಬಾರಿ 25 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಈಗ 28 ಸ್ಥಾನಗಳನ್ನು ಪಡೆದುಕೊಂಡಿದೆ. ಮೂರು ಸ್ಥಾನಗಳನ್ನು ವೃದ್ಧಿಸಿಕೊಂಡಿದೆ.

ಗಮನಾರ್ಹವಾಗಿ, 2014ರಲ್ಲಿ ಚುನಾವಣಾ ಫಲಿತಾಂಶದ ಬಳಿಕ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ಪಿಡಿಪಿ ಸಂಪೂರ್ಣವಾಗಿ ಜಮ್ಮು-ಕಾಶ್ಮೀರದಲ್ಲಿ ನೆಲಕಚ್ಚಿದೆ. 2014ರಲ್ಲಿ ಬಿಜೆಪಿ ಜೊತೆ ಪಿಡಿಪಿ ಮೈತ್ರಿ ಮಾಡಿಕೊಂಡರೂ, 2018ರಲ್ಲಿ ಮೈತ್ರಿ ಮುರಿದುಕೊಂಡಿತ್ತು. ಆದರೂ, ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಸರ್ಕಾರ ರಚಿಸಲು ಪಿಡಿಪಿಯೇ ಕಾರಣವಾಯಿತು. ಇದನ್ನೇ ಎನ್‌ಸಿ ಚುನಾವಣಾ ಪ್ರಚಾರದಲ್ಲಿ ಮತ್ತೆ-ಮತ್ತೆ ಒತ್ತಿ ಹೇಳಿತು. ‘ಇಂಡಿಯಾ’ ಮೈತ್ರಿಕೂಟದ ನಾಯಕರು ಬಿಜೆಪಿಗಿಂತಲೂ ಹೆಚ್ಚಾಗಿ ‘ಪಿಡಿಪಿ’ಯನ್ನೇ ಗುರಿಯಾಗಿಸಿಕೊಂಡಿದ್ದರು. ಪರಿಣಾಮ, ಪಿಡಿಪಿ ನೆಲಕಚ್ಚಿದರೂ, ಬಿಜೆಪಿ ತನ್ನ ಸ್ಥಾನಗಳನ್ನು ವೃದ್ಧಿಸಿಕೊಂಡಿದೆ.

ಈ ವರದಿ ಓದಿದ್ದೀರಾ?: ಹರಿಯಾಣ ಚುನಾವಣೆ | ಬಿಜೆಪಿ ಗೆಲುವು – ಕಾಂಗ್ರೆಸ್ ಸೋಲಿಗಿವೆ ನಾನಾ ಕಾರಣಗಳು

ಇನ್ನು, ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿ, ರಾಜ್ಯತ್ವವನ್ನು ಕಸಿದುಕೊಂಡ ಬಿಜೆಪಿ ವಿರುದ್ಧ ಇಡೀ ಜಮ್ಮು-ಕಾಶ್ಮೀರವೇ ಸಿಟ್ಟಾಗಿದೆ. ಆದರೂ, ಹಿಂದು ಮತಗಳನ್ನು ತನ್ನ ತೆಕ್ಕೆಯಲ್ಲಿಯೇ ಬಿಜೆಪಿ ಹಿಡಿದಿಟ್ಟುಕೊಂಡಿದೆ. ಜಮ್ಮು ಪ್ರಾಂತ್ಯದ ಹಿಂದು ಮತಗಳು ಬಿಜೆಪಿ ಪರವಾಗಿ ಚಲಾವಣೆಯಾಗಿವೆ. ಜಮ್ಮು ಪ್ರದೇಶದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ನೆಲೆ ಉಳಿಸಿಕೊಂಡಿದೆ. ಈಗ ಬಿಜೆಪಿ ಗೆದ್ದಿರುವ ಹಲವು ಕ್ಷೇತ್ರಗಳೂ ಜಮ್ಮು ಪ್ರದೇಶದಲ್ಲಿವೆ. ಕಾಶ್ಮೀರ ಮತ್ತು ಲಡಾಖ್ ಭಾಗದ ಜನರು ಬಿಜೆಪಿ-ಪಿಡಿಪಿ ವಿರುದ್ಧ ಮತ ಚಲಾಯಿಸಿದ್ದಾರೆ. ಆ ಮತಗಳನ್ನು ಎನ್‌ಸಿ ಪಡೆದುಕೊಂಡಿದೆ.

ಇದರರ್ಥ, ಎನ್‌ಸಿ ಮತ್ತು ಕಾಂಗ್ರೆಸ್ ಮೈತ್ರಿಕೂಟವು ಬಿಜೆಪಿಯ ಯಾವುದೇ ಮತಗಳನ್ನು ತಮ್ಮತ್ತ ತಿರುಗಿಸಲು ಸಾಧ್ಯವಾಗಲಿಲ್ಲ. ಹೀಗಾಗಿ, ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇ‍ಷ ಸ್ಥಾನಮಾನ ಕಸಿದುಕೊಂಡರೂ, ರಾಜ್ಯತ್ವವನ್ನು ಕಿತ್ತುಕೊಂಡರೂ, ರಾಜ್ಯವನ್ನು ಇಬ್ಬಾಗ ಮಾಡಿ ಎರಡು ಕೇಂದ್ರಾಡಳಿತ ಪ್ರವೇಶಗಳಾಗಿ ವಿಭಜಿಸಿದರೂ ಬಿಜೆಪಿ ತನ್ನ ಸ್ಥಾನಗಳನ್ನು ಹಾಗೆಯೇ ಉಳಿಸಿಕೊಂಡಿದೆ. ಅದಾಗ್ಯೂ, ‘ಭಾರತ’ ಬಣಕ್ಕೆ ಈ ಗೆಲುವು ನಿರ್ಣಾಯಕವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...