ಅಪೌಷ್ಠಿಕತೆಯಲ್ಲಿ ಭಾರತದ ಸೂಚ್ಯಂಕ ಏರುತ್ತಿದೆ; ‘ವಿಶ್ವಗುರು’ ಮೋದಿಯವರು ಉತ್ತರಿಸಬೇಕು: ಸಿಎಂ

Date:

  • ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯದ ಸವಲತ್ತು ತಲುಪಿಸುವುದು ನಮ್ಮ ಸರ್ಕಾರದ ಗುರಿ
  • ಬಡತನ-ದಾರಿದ್ರ್ಯ-ಅನಕ್ಷರತೆ ಹೋಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ

ಅಪೌಷ್ಠಿಕತೆ ಸೂಚ್ಯಂಕದಲ್ಲಿ ಗುಜರಾತ್ ರಾಜ್ಯ ಮತ್ತು ಭಾರತದ ಸೂಚ್ಯಂಕ ಏರಿಕೆ ಆಗುತ್ತಲೇ ಇದೆ. ಏಕೆ ಹೀಗಾಯ್ತು ಎಂದು ತನ್ನನ್ನು ತಾನು ವಿಶ್ವಗುರು ಎಂದು ಕರೆದುಕೊಳ್ಳುವ ಪ್ರಧಾನಮಂತ್ರಿ ಮೋದಿಯವರು ಉತ್ತರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಮಹತ್ವಪೂರ್ಣ ಮತ್ತು ಜನಾರೋಗ್ಯ ಕಾರ್ಯಕ್ರಮವಾದ ಅನೀಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗುಜರಾತ್ ಮಾದರಿ, ಗುಜರಾತ್ ಮಾದರಿ ಎನ್ನುವವರು ಗುಜರಾತ್ ಅಪೌಷ್ಠಿಕತೆ ಸೂಚ್ಯಂಕದಲ್ಲಿ ಮೇಲಕ್ಕೆ ಏರುತ್ತಿರುವುದು ಏಕೆ ಎನ್ನುವುದಕ್ಕೆ ಉತ್ತರಿಸಬೇಕು. ಗುಜರಾತ್ ನ ಈ ಸ್ಥಿತಿ ಮಾದರಿ ಆಗಲು ಸಾಧ್ಯವೇ ಎಂದು ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆ 4 ಮತ್ತು 5 ರಲ್ಲಿ ಇರುವ ಅಂಕಿ ಅಂಶಗಳನ್ನು ತುಲನೆ ಮಾಡಿ ಲೇವಡಿ ಮಾಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಡತನ-ದಾರಿದ್ರ್ಯ-ಅನಕ್ಷರತೆ ಹೋಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ. ಆದ್ದರಿಂದ ಈ ಮೂರು ಪಿಡುಗುಗಳಿಗೆ ಚಿಕಿತ್ಸೆ ಕೊಡುವುದು ನಮ್ಮ ಸರ್ಕಾರದ ಪ್ರಥಮ ಆದ್ಯತೆ. ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯದ ಸವಲತ್ತು ತಲುಪಿಸುವುದು ನಮ್ಮ ಸರ್ಕಾರದ ಗುರಿ. ಇದಕ್ಕಾಗಿ ಸರ್ಕಾರ ಅಗತ್ಯವಿದ್ದಷ್ಟು ಹಣ ನೀಡಲು ಸಿದ್ದವಿದೆ ಎಂದರು.

ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಬ್ಬರೂ ಸೇರಿ ನಮ್ಮ ರಾಜ್ಯದ ಮಕ್ಕಳು ಮತ್ತು ಪ್ರತಿಯೊಬ್ಬರೂ ಅತ್ಯಂತ ಆರೋಗ್ಯವಂತರಾಗುವಂತೆ ಇನ್ನಷ್ಟು ಹೆಚ್ಚೆಚ್ಚು ಶ್ರಮಿಸಿ, ಸರ್ಕಾರದ ಗುರಿಯನ್ನು ಸಾಧಿಸಿ ತೋರಿಸಬೇಕು ಎಂದು ಸೂಚಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ: ಪ್ರಲ್ಹಾದ್‌ ಜೋಶಿ ನಿವಾಸದೆದುರು ರೈತ ಹೋರಾಟಗಾರರ ಆಕ್ರೋಶ

ಮಹದಾಯಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಣೆ ವಿಚಾರವಾಗಿ ಇಂದು ಕೇಂದ್ರ...

ಬಿಜೆಪಿಯವರ ಒಂದು ಕೋಟಿ ಸದಸ್ಯತ್ವ ಅಭಿಯಾನ ಸುಳ್ಳಿನ ನಾಟಕ: ರಮೇಶ್ ಬಾಬು

ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಕೋಟಿ ನಲವತ್ತು ಲಕ್ಷ...

ಸ್ವಂತ ಕುಟುಂಬ ಒಡೆಯುವುದನ್ನು ಸಮಾಜ ಇಷ್ಟಪಡಲ್ಲ, ನನ್ನ ತಪ್ಪಿನ ಅರಿವಾಗಿದೆ: ಅಜಿತ್ ಪವಾರ್

"ಕುಟುಂಬಗಳಲ್ಲಿನ ಬಿರುಕುಗಳನ್ನು ಸಮಾಜವು ಇಷ್ಟಪಡುವುದಿಲ್ಲ. ನನ್ನ ತಪ್ಪಿನ ಅರಿವು ನನಗಾಗಿದೆ" ಎಂದು...

ರಾಜಕೀಯ ‘ಕುಸ್ತಿಯಂಗಳ’ಕ್ಕೆ ವಿನೇಶ್‌ ಫೋಗಟ್‌; ಇದೇನಾ ʼಹೋರಾಟ ಮುಂದುವರಿಯಲಿದೆ…ʼಎಂಬ ಮಾತಿನ ಒಳಾರ್ಥ?

ಕುಸ್ತಿ ಅಂಗಳದಲ್ಲಿ ಸತತ ಒಂದೊಂದೇ ಗೆಲುವಿನ ಮೆಟ್ಟಿಲೇರಿದ ಚರ್ಕಿ ದಾದ್ರಿಯ ಛಲಗಾರ್ತಿಗೆ...