ಬಜೆಟ್‌ 23-24 | ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್‌ ಪುನಾರಂಭಕ್ಕೆ 100 ಕೋಟಿ ರೂ. ಅನುದಾನ

Date:

ನಗರ ಪ್ರದೇಶದ ಬಡವರು ಮತ್ತು ಶ್ರಮಿಕರಿಗೆ ಕಡಿಮೆ ದರದಲ್ಲಿ ಊಟ, ಉಪಾಹಾರ ಒದಗಿಸುವ ಉದ್ದೇಶದಿಂದ ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಆರಂಭವಾಗಿದ್ದ ಇಂದಿರಾ ಕ್ಯಾಂಟೀನ್ ಯೋಜನೆಗೆ ಈ ಬಾರಿಯ ಬಜೆಟ್‌ನಲ್ಲಿ 100 ಕೋಟಿ ರೂ. ಮೀಸಲಿಡಲಾಗಿದೆ.

- Advertisement -

ಬಜೆಟ್‌ನಲ್ಲಿ ಪ್ರಸ್ತಾವ ಮಾಡಿರುವಂತೆ ಮೊದಲಿಗೆ ಇಂದಿರಾ ಕ್ಯಾಂಟೀನ್ ಹೊಸ ಮೆನುವನ್ನು ಪರಿಚಯಿಸಲಾಗುವುದು. ಇದನ್ನು ಬಿಬಿಎಂಪಿ ಹಾಗೂ ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಪುನರಾರಂಭ ಮಾಡಲಾಗುವುದು ಎಂದು ಘೋಷಣೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಎರಡನೇ ಹಂತದಲ್ಲಿ ರಾಜ್ಯದಾದ್ಯಂತ ಎಲ್ಲ ಪಟ್ಟಣಗಳಲ್ಲಿ ಮತ್ತು ಬಿಬಿಎಂಪಿ ಹೊಸ ವಾರ್ಡ್ ಗಳಿಗೆ ಈ ಯೋಜನೆಯನ್ನು ವಿಸ್ತರಣೆ ಮಾಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಇಂದಿರಾ ಕ್ಯಾಂಟೀನ್ ಗಳ ದುರಸ್ತಿ, ನವೀಕರಣ ಹಾಗೂ ನಿರ್ವಹಣೆಗಾಗಿ ರಾಜ್ಯ ಸರ್ಕಾರವು ನೂರು ಕೋಟಿ ರೂಪಾಯಿ ಒದಗಿಸಲಿದೆ ಎಂದು ಪ್ರಸ್ತಾವದಲ್ಲಿ ತಿಳಿಸಲಾಗಿದೆ.

ಹಿಂದೆ ಅಧಿಕಾರದಲ್ಲಿ ಇದ್ದ ಬಿಜೆಪಿ ಸರ್ಕಾರವು ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಸ್ಥಗಿತಗೊಳಿಸಿ, ಜನವಿರೋಧಿ ನೀತಿಯನ್ನು ಅನುಸರಿಸಿತು ಎಂದು ಸಹ ಬಜೆಟ್ ದಾಖಲೆಯಲ್ಲಿ ಉಲ್ಲೇಖ ಮಾಡಲಾಗಿದೆ.

ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತಂದಿದ್ದರು. ಇದರಿಂದ ಸಿದ್ದರಾಮಯ್ಯ ಅವರಿಗೆ ಜನಪ್ರಿಯತೆ ಹಾಗೂ ವರ್ಚಸ್ಸು ಕೂಡ ದೊರಕಿತ್ತು. ಆದರೆ, ಬಿಜೆಪಿ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಯೋಜನೆಯನ್ನು ಸಂಪೂರ್ಣ ನಿರ್ಲಕ್ಷಿಸಿತು ಎಂಬುದು ಕಾಂಗ್ರೆಸ್ ಆರೋಪವಾಗಿತ್ತು. ಆದರೆ ಈ ಬಾರಿ ಚುನಾವಣೆಗೆ ಪೂರ್ವದಲ್ಲಿ ಬಿಜೆಪಿ ತಂದಿದ್ದ ಪ್ರಣಾಳಿಕೆಯಲ್ಲಿ ಇಂದಿರಾ ಕ್ಯಾಂಟೀನ್ ಆಲೋಚನೆಯಂಥದ್ದೇ ಇದ್ದ ಹಾಗೂ ಅಟಲ್ ಬಿಹಾರಿ ವಾಜಪೇಯಿ ಹೆಸರಿನಲ್ಲಿ ಯೋಜನೆ ಜಾರಿಗೆ ತರುವ ಪ್ರಸ್ತಾವ ಮಾಡಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬಜೆಟ್ 23-24 | ಬೆಂಗಳೂರಿನ 100 ಎಕರೆ ಪ್ರದೇಶದಲ್ಲಿ ತಂತ್ರಜ್ಞಾನ ಆವಿಷ್ಕಾರ ಪಾರ್ಕ್

ಅದರ ಪ್ರಕಾರ, ಪೌಷ್ಟಿಕಾಂಶಯುಕ್ತ ಆಹಾರವನ್ನು ಅತ್ಯಂತ ಕಡಿಮೆ ಬೆಲೆಗೆ ಜನರಿಗೆ ಒದಗಿಸುವುದು ಅಟಲ್ ಹೆಸರಿನ ಆಹಾರ ಕೇಂದ್ರದ ಉದ್ದೇಶವಾಗಿತ್ತು. ಇದೀಗ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಇಂದಿರಾ ಕ್ಯಾಂಟೀನ್ ಗೆ ಮರುಜೀವ ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...

ಬಂಗಾಳದಲ್ಲಿ ಮಿತಿಮೀರಿದ ಕೋಮು ರಾಜಕಾರಣ: ಆಡಳಿತ ಮತ್ತು ಶಿಕ್ಷಣ ಕ್ಷೇತ್ರಕ್ಕೆ ತೀವ್ರ ಸವಾಲು

ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ವಾರಗಳಿಂದ ಆಡಳಿತ, ಶಿಕ್ಷಣ ಸಂಸ್ಥೆಗಳು ಹಾಗೂ...