ಚುನಾವಣಾ ಬಾಂಡ್‌ಗಳ ಮಾಹಿತಿ ‘ಸಿದ್ದ’ವಿದೆ: ಎಸ್‌ಬಿಐ

Date:

ಸುಪ್ರೀಂ ಕೋರ್ಟ್‌ ಆದೇಶದಂತೆ ಚುನಾವಣಾ ಬಾಂಡ್‌ಗಳ ಮಾಹಿತಿಯು ‘ಸಿದ್ದ’ವಾಗಿದೆ. ಬಾಂಡ್‌ಗಳನ್ನು ಖರೀದಿಸಿದವರು ಮತ್ತು ಅವರು ಯಾರಿಗೆ ಕೊಟ್ಟಿದ್ದಾರೆ ಎಂಬ ಸಂಪೂರ್ಣ ಮಾಹಿತಿಯನ್ನು ಸಿದ್ದಪಡಿಸಲಾಗಿದೆ. ಅದರ ಅಂತಿಮ ಮ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಎಸ್‌ಬಿಐ ಹೇಳಿದೆ.

ಚುನಾವಣಾ ಬಾಂಡ್‌ಗಳ ಮಾಹಿತಿ ನೀಡಲು ಜೂನ್ 30ರವರೆಗೆ ಸಮಯ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ ಮಾಡಿತ್ತು. ಆದರೆ, ಎಸ್‌ಬಿಐ ಮನವಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿತ್ತು. ಮಂಗಳವಾರವೇ ಮಾಹಿತಿಯನ್ನು ಒದಗಿಸಬೇಕು ಎಂದು ಖಡಕ್ ಎಚ್ಚರಿಕೆ ನೀಡಿದೆ. ಅಲ್ಲದೆ, ಮಾರ್ಚ್‌ 15ರ ಸಂಜೆಯೊಳಗೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಸೂಚಿಸಿದೆ. ಒಂದು ವೇಳೆ, ಗಡುವಿನೊಳಗೆ ಮಾಹಿತಿ ನೀಡದಿದ್ದರೆ, ಎಸ್‌ಬಿಐ ವಿರುದ್ಧ ಕ್ರಮಕ್ಕೆ ಮುಂದಾಗುವುದಾಗಿಯೂ ಹೇಳಿತ್ತು.

ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಎಸ್‌ಬಿಐ ಮಾಹಿತಿಯನ್ನು ಸಿದ್ದಪಡಿಸಿದೆ. ಮಾಹಿತಿಯ ಅಂಕಿಅಂಶಗಳಲ್ಲಿ ವ್ಯತ್ಯಾಸಗಳು ಇಲ್ಲದಂತೆ ನೋಡಿಕೊಳ್ಳಲು ಡೇಟಾ ಮ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಎಸ್‌ಬಿಐ ಹೇಳಿರುವುದಾಗಿ ಎನ್‌ಡಿಟಿವಿ ಪ್ರಾಫಿಟ್ ವರದಿ ಮಾಡಿದೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಹಿಂದೆ,ಫೆಬ್ರವರಿ 15ರಂದು ನೀಡಿದ ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು, ಚುನಾವಣಾ ಬಾಂಡ್‌ ಯೋಜನೆಯು ಅಸಂವಿಧಾನಿಕ. ಅನಾಮಧೇಯ ರಾಜಕೀಯ ನಿಧಿಯನ್ನು ಅನುಮತಿಸಲು ಸಾಧ್ಯವಿಲ್ಲ. ಚುನಾವಣಾ ಬಾಂಡ್‌ ಖರೀದಿಸಿದವರು ಮತ್ತು ಪಡೆದವರ ವಿವರನ್ನು ಮಾರ್ಚ್‌ 6ರರೊಳಗೆ ಒದಗಿಸಬೇಕು. ಮಾರ್ಚ್‌ 13ರರೊಳಗೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಹೇಳಿತ್ತು.

ಎಸ್‌ಬಿಐ ಕೋರಿದ್ದ ಸಮಯವನ್ನು ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿರುವುದನ್ನು ಕಾಂಗ್ರೆಸ್‌ ಶ್ಲಾಘಿಸಿದೆ. “ಸುಪ್ರೀಂ ಕೋರ್ಟ್‌ ಅಸಂವಿಧಾನಿಕ ಎಂದಿರುವ ಈ ಬೃಹತ್ ಭ್ರಷ್ಟಾಚಾರ ಹಗರಣವು ಬಿಜೆಪಿ ಮತ್ತು ಅದರ ಭ್ರಷ್ಟ ಕಾರ್ಪೊರೇಟ್ ಮಾಸ್ಟರ್‌ಗಳ ನಡುವಿನ ಅಪವಿತ್ರ ಸಂಬಂಧವನ್ನು ಬಹಿರಂಗಪಡಿಸುತ್ತದೆ” ಎಂದು ಕಾಂಗ್ರೆಸ್‌ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್ | ಪೇಟ ಮತ್ತು ಸನ್ ಗ್ಲಾಸ್ ಧರಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ

ದೇಶಾದ್ಯಂತ ಜಾತಿ ದೌರ್ಜ್ಯನದ ಘಟನೆಗಳು ಹೆಚ್ಚುತ್ತಲೇ ಇವೆ. ಇತ್ತೀಚಿನ ಘಟನೆಯೊಂದರಲ್ಲಿ, ಪೇಟ...

ಬಿಹಾರ, ಆಂಧ್ರ, ಒಡಿಶಾಗೆ ವಿಶೇಷ ಸ್ಥಾನಮಾನಕ್ಕೆ ಜೆಡಿಯು, ವೈಎಸ್ಆರ್‌ಸಿಪಿ, ಬಿಜೆಡಿ ಬೇಡಿಕೆ

ನವದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಬಿಹಾರ ಹಾಗೂ ಆಂಧ್ರ ಪ್ರದೇಶಗಳಿಗೆ ವಿಶೇಷ...

ಸಿಕ್ಕಿಂ ಪ್ರವೇಶಿಸುವ ಪ್ರವಾಸಿ ವಾಹನಗಳು ಕಸದ ಚೀಲ ಹೊತ್ತೊಯ್ಯುವುದು ಕಡ್ಡಾಯ!

ಸಿಕ್ಕಿಂಗೆ ಪ್ರವೇಶಿಸುವ ಎಲ್ಲಾ ಪ್ರವಾಸಿ ವಾಹನಗಳು ಈಗ ಕಡ್ಡಾಯವಾಗಿ ದೊಡ್ಡ ಕಸದ...