ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮೊದಲೇ ಮಾಹಿತಿ ನೀಡಿದ್ದು ಅಪರಾಧ: ಜೈಶಂಕರ್ ವಿರುದ್ಧ ರಾಹುಲ್ ವಾಗ್ದಾಳಿ

Date:

Advertisements

ಭಾರತ ಆಪರೇಷನ್ ಸಿಂಧೂರ ನಡೆಸುವುದಕ್ಕೂ ಮುನ್ನವೇ ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು ಎಂಬ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರ ಹೇಳಿಕೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, “ಶತ್ರು ದೇಶಕ್ಕೆ ನಾವು ದಾಳಿ ನಡೆಸುತ್ತೇವೆ ಎಂದು ಮೊದಲೇ ತಿಳಿಸಿ ದಾಳಿ ನಡೆಸುವುದು ಯಾವ ಮುರ್ಖತನ” ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. “ಮೊದಲೇ ಮಾಹಿತಿ ನೀಡಿದ್ದು ಅಪರಾಧ” ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಏಪ್ರಿಲ್ 22ರಂದು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದನಾ ದಾಳಿ ನಡೆಸಿ 26 ಪ್ರವಾಸಿಗರನ್ನು ಕೊಂದಿದೆ. ಈ ದಾಳಿ ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಹೊತ್ತುಕೊಂಡಿದೆ.

ಇದನ್ನು ಓದಿದ್ದೀರಾ? ಪಾಕಿಸ್ತಾನಿ ಸೇನೆಯ ಪ್ರಧಾನ ಕಚೇರಿವರೆಗೂ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮುಟ್ಟಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

Advertisements

ಈ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಲ್ಲಿ ದಾಳಿ ನಡೆಸಿವೆ. ನೂರಕ್ಕೂ ಅಧಿಕ ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂದು ಹೇಳಲಾಗಿದೆ. ಅದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಅಧಿಕೃತವಾಗಿ ಯುದ್ಧ ಆರಂಭಿಸುವುದಕ್ಕೂ ಮುನ್ನವೇ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿದೆ.

ಈ ಆಪರೇಷನ್ ಸಿಂಧೂರ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದ ವಿಡಿಯೋ ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. “ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ನೆಲದ ಮೇಲೆ ದಾಳಿ ನಡೆಸುವ ಬಗ್ಗೆ ಮೊದಲೇ ಮಾಹಿತಿ ನೀಡಿದ್ದೆವು” ಎಂದು ಸಚಿವರು ಹೇಳುವ ಈ ವಿಡಿಯೋವನ್ನು ರಾಹುಲ್ ಗಾಂಧಿ ಅವರೂ ಹಂಚಿಕೊಂಡಿದ್ದಾರೆ.

“ಕಾರ್ಯಾಚರಣೆಯ ಆರಂಭದಲ್ಲಿ, ನಾವು ಪಾಕಿಸ್ತಾನಕ್ಕೆ ‘ನಾವು ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುತ್ತಿದ್ದೇವೆ ಮತ್ತು ನಾವು ಮಿಲಿಟರಿಯ ಮೇಲೆ ದಾಳಿ ಮಾಡುತ್ತಿಲ್ಲ’ ಎಂದು ಸಂದೇಶವನ್ನು ಕಳುಹಿಸಿದ್ದೆವು” ಎಂದು ಜೈಶಂಕರ್ ಹೇಳುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

ಇದನ್ನು ಓದಿದ್ದೀರಾ? ಸೂಕ್ತ ಪ್ರತ್ಯುತ್ತರ ನೀಡಲಾಗಿದೆ: ಆಪರೇಷನ್ ಸಿಂಧೂರಗೆ ರಾಹುಲ್ ಗಾಂಧಿ, ಖರ್ಗೆ ಬೆಂಬಲ

“ಆದ್ದರಿಂದ ಮಿಲಿಟರಿಯು ಈ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡದಿರುವ ಆಯ್ಕೆಯನ್ನು ಹೊಂದಿದೆ. ಆದರೆ ಅವರು ಈ ಉತ್ತಮ ಸಲಹೆಯನ್ನು ಪರಿಗಣಿಸದಿರಲು ನಿರ್ಧರಿಸಿದರು” ಎಂದು ಜೈಶಂಕರ್ ಅವರು ಹೇಳಿದ್ದಾರೆ.

ಈ ವಿಡಿಯೋ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ನಮ್ಮ ದಾಳಿಯ ಬಗ್ಗೆ ಮೊದಲೇ ಪಾಕಿಸ್ತಾನಕ್ಕೆ ಮಾಹಿತಿ ನೀಡುವುದು ಅಪರಾಧ. ಭಾರತ ಸರ್ಕಾರ ಈ ಅಪರಾಧ ಮಾಡಿದೆ ಎಂದು ವಿದೇಶಾಂಗ ಸಚಿವಾಲಯ ಸಾರ್ವಜನಿಕವಾಗಿ ಒಪ್ಪಿಕೊಂಡಿದೆ” ಎಂದಿದ್ದಾರೆ.

ಹಾಗೆಯೇ, “ಮೊದಲೇ ಮಾಹಿತಿ ನೀಡುವ ನಿರ್ಧಾರಕ್ಕೆ ಅನುಮತಿಸಿದ್ದು ಯಾರು ಮತ್ತು ಇದರಿಂದಾಗಿ ನಮ್ಮ ವಾಯುಪಡೆ ಎಷ್ಟು ವಿಮಾನಗಳನ್ನು ಕಳೆದುಕೊಂಡಿದೆ” ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಮತ್ತು ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ಪ್ರಶ್ನಿಸಿದ್ದಾರೆ.

ಆದರೆ ಆಪರೇಷನ್ ಸಿಂಧೂರ ಬಗ್ಗೆ ಭಾರತ ಮೊದಲೇ ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು ಎಂದು ಜೈಶಂಕರ್ ಹೇಳಿದ್ದರು ಎಂಬ ಹೇಳಿಕೆಗಳನ್ನು ಪತ್ರಿಕಾ ಮಾಹಿತಿ ಬ್ಯೂರೋ(ಪಿಐಬಿ) ತಳ್ಳಿಹಾಕಿದೆ. “ಸಚಿವರು ಅಂತಹ ಹೇಳಿಕೆ ನೀಡಿಲ್ಲ” ಎಂದು ಪಿಐಬಿಯ ಫ್ಯಾಕ್ಟ್ ಚೆಕ್ ಯೂನಿಟ್ ಹೇಳಿಕೊಂಡಿದೆ.

ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. “ನಿಜವಾಗಿಯೂ! ಈ ವ್ಯಕ್ತಿ ಏನು ಹೇಳುತ್ತಿದ್ದಾರೆ? ತಾನು ದಾಳಿ ನಡೆಸುತ್ತೇನೆ, ಆದರೆ ಅದು ಸೇನೆಯ ಮೇಲಿನ ದಾಳಿಯಲ್ಲ ಎಂದು ತನ್ನ ಶತ್ರುಗೆ ಹೇಳಿ ಬಳಿಕ ದಾಳಿ ನಡೆಸುವುದೇ? ನನ್ನ ದೇಶದ ಬಗ್ಗೆ ನನಗೆ ಭಯವಾಗಿದೆ” ಎಂದು ಸುರೇಶ್ ಎಂಬ ನೆಟ್ಟಿಗರು ಹೇಳಿದ್ದಾರೆ. “ಇದು ಪ್ರಧಾನಿ ಮೋದಿ ಮತ್ತು ಪಾಕಿಸ್ತಾನದ ನಡುವಿನ ಫಿಕ್ಸ್‌ ಮ್ಯಾಚ್‌ ಆಗಿದೆಯೇ” ಎಂದೂ ನೆಟ್ಟಿಗರು ಪ್ರಶ್ನಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X