- ಸಾರ್ವಜನಿಕ ದೂರು ಆಧರಿಸಿ ಕ್ರಮ: ಪ್ರಿಯಾಂಕ್ ಖರ್ಗೆ
- ‘ಪತ್ತೆಯಾಗುವ ನ್ಯೂನತೆಗಳನ್ನು ಸ್ಥಳದಲ್ಲೇ ಸರಿಪಡಿಸಿ’
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ಗ್ರಾಮೀಣ ಭಾಗಗಳಿಗೆ ನೀರು ಸರಬರಾಜು ಮಾಡಲು ರಾಜ್ಯದ ವಿವಿಧೆಡೆ ಕೈಗೆತ್ತಿಕೊಂಡಿರುವ ನಳಸಂಪರ್ಕ ಕಾಮಗಾರಿಗಳ ಗುಣಮಟ್ಟದಲ್ಲಿ ಸುಧಾರಣೆ ತರಲು ಥರ್ಡ್ ಪಾರ್ಟಿ ಏಜೆನ್ಸಿ ಮೂಲಕ ವಿಸ್ತೃತ ತಪಾಸಣೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, “ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ತಪಾಸಣೆ ಕಾರ್ಯ ಕೈಗೆತ್ತಿಕೊಂಡಿರುವ ಬ್ಯೂರೋ ವೆರಿಟಾಸ್ ಇಂಡಿಯಾ ಬಾಹ್ಯ ಸಂಸ್ಥೆಯೊಂದಿಗೆ ಸಭೆ ನಡೆಸಿದ ಸಚಿವರು ಗ್ರಾಮೀಣ ನಳಸಂಪರ್ಕ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಸಾರ್ವಜನಿಕರಿಂದ ಬಂದ ದೂರುಗಳನ್ನು ಗಮನಿಸಿ ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಹೇಳಿದರು.
“ರಾಜ್ಯದಲ್ಲಿ ನಡೆಯುತ್ತಿರುವ ಗ್ರಾಮೀಣ ನಳ ಸಂಪರ್ಕ ಕಾಮಗಾರಿಗಳ ಭೌತಿಕ ಆಯಾಮಗಳು, ನೀರಿನ ಗುಣಮಟ್ಟ ಮುಂತಾದ ಪರೀಕ್ಷೆಗಳನ್ನು ಕಾಮಗಾರಿಗಳಿಗೆ ತೊಡಕಾಗದಂತೆ ತಪಾಸಣೆ ಮಾಡಲಾಗುತ್ತಿದೆ. ಭೂಮಿಯಲ್ಲಿ ಹುದುಗಿಸಿರುವ ಕೊಳವೆಗಳ ಗುಣಮಟ್ಟ, ಕೊಳವೆಗಳನ್ನು ಭೂಮಿಯಲ್ಲಿ ಹಾಗೂ ಭೂಮಿಯ ಮೇಲೆ ಹಾಯಿಸುವಾಗ ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು, ಸಂಪರ್ಕಕ್ಕೆ ಅಳವಡಿಸಲಾಗುವ ನಲ್ಲಿ ಹಾಗೂ ಸಾಮಗ್ರಿಗಳ ಗುಣಮಟ್ಟ ಹಾಗೂ ಪೂರೈಸಲಾಗುವ ನೀರಿನ ಗುಣಮಟ್ಟವನ್ನು ತಪಾಸಣೆ ಮಾಡಲಾಗುತ್ತಿದೆ” ಎಂದು ವಿವರಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಲಿಯುಗುರು ಲಾಕೆಟ್ ; ಸಂತೋಷನಿಗೇನೋ ಸುಣ್ಣ, ಸೆಲೆಬ್ರಿಟಿಗಳಿಗೇಕೆ ಬೆಣ್ಣೆ?
“ರಾಜ್ಯದ 1500 ಗ್ರಾಮಗಳಲ್ಲಿ ಬಹುಗ್ರಾಮ ನೀರು ಸರಬರಾಜು ಯೋಜನೆಗಳನ್ನು ಒಳಗೊಂಡಂತೆ ಈ ವಿಸ್ತೃತ ಪರೀಕ್ಷಾ ಕಾರ್ಯ ನಡೆಸಿ, 60 ದಿನಗಳ ಒಳಗೆ ವರದಿಯನ್ನು ಸಲ್ಲಿಸಲು ಸಂಸ್ಥೆಗೆ ಸೂಚಿಸಲಾಗಿದೆ. ಈ ತಿಂಗಳ (ಅಕ್ಟೋಬರ್) 09ರಿಂದ ಸಂಸ್ಥೆಯು ತನ್ನ ತಪಾಸಣ ಕಾರ್ಯ ಆರಂಭಿಸಿದ್ದು ಚಟುವಟಿಕೆಗಳು ಪ್ರಗತಿಯಲ್ಲಿದೆ ಎಂದು ಸಂಸ್ಥೆಯ ಪ್ರತಿನಿಧಿಗಳು ಸಭೆಯಲ್ಲಿ ಸಚಿವರಿಗೆ ತಿಳಿಸಿದರು. ರಾಜ್ಯದ 14 ಜಿಲ್ಲೆಗಳಲ್ಲಿ 82 ತಾಲ್ಲೂಕುಗಳ 533 ಗ್ರಾಮಗಳಲ್ಲಿ ಹಾಗೂ 57 ಬಹುಗ್ರಾಮ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ತಪಾಸಣೆ ನಡೆಯುತ್ತಿದೆ” ಎಂದು ಹೇಳಿದರು.
“ಗ್ರಾಮಗಳಲ್ಲಿ ತಪಾಸಣೆ ನಡೆಯುವ ಸಂದರ್ಭದಲ್ಲಿ ಗ್ರಾಮೀಣ ನೀರು ಸರಬರಾಜು ಇಲಾಖೆಯ ತಾಂತ್ರಿಕ ಅಧಿಕಾರಿಗಳು ಜೊತೆಯಲ್ಲಿದ್ದು, ಪತ್ತೆಯಾಗುವ ನ್ಯೂನ್ಯತೆಗಳನ್ನು ಸರಿಪಡಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು” ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು. ನಿರ್ಲಕ್ಷ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಗ್ರಾಮೀಣ ನೀರು ಸರಬರಾಜು ಯೋಜನೆಯ ಆಯುಕ್ತ ನಾಗೇಂದ್ರ ಪ್ರಸಾದ್, ಮುಖ್ಯ ಅಭಿಯಂತರ ಏಜಾಜ್ ಅಹಮದ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Dear Sir /Madam
As I see that you do not have many positive reviews on Google Maps, which means that you will not be able to get new customers, But the good news today is that I can increase your google map ranking so you can have more exposure and get more customers this also
Getting google maps reviews from your customers has always been a beneficial exercise for business, but today its importance is even greater. Let’s attract new customers by making your business in the first Google search results, 72% of customers will take action only after reading a positive online review.
If you are Intrested please click this link to start:https://shorturl.at/P1AuC
Regards
Danyl
Do you need targeted Customers emails and phone numbers , so I am here to help you check out my Fiverr 5 stares profile serving over 880 happy customers
contact me here and tell me what you need ===== >
https://shorturl.at/C2Nl9
See you there
Regards
Awals
Hi,
I’m Jessica, a highly-skilled Administrative Assistant offering comprehensive support to Busy Professionals, Executives, Entrepreneurs, Leaders, and Brands. I streamline your workload by managing daily tasks like web research, data entry, email support, social media management, graphic design, lead generation, and other Administrative tasks. I provide exceptional service, exceeding your expectations, and I’m available daily for your long-term needs, making me your ideal business partner.
lets Chat ==> https://shorturl.at/hKTbO