‘ಚಲೋ ದಿಲ್ಲಿ’ ಬದಲು ‘ಚಲೋ ಹಳ್ಳಿ’ ಕಾರ್ಯಕ್ರಮ ಆರಂಭಿಸಿ ನಿಮ್ಮೊಂದಿಗೆ ನಾವೂ ಬರುತ್ತೇವೆ: ವಿಜಯೇಂದ್ರ

Date:

ಸಮೃದ್ಧ ಕರ್ನಾಟಕ ಮೋದಿ ಅವರ ಆದ್ಯತೆಯಾಗಿರುವಾಗ ಆರ್ಥಿಕ ತಾರತಮ್ಯದ ಸುಳ್ಳು ಕಂತೆ ಹೊತ್ತು ‘ಚಲೋ ದಿಲ್ಲಿ’ ಬದಲು ಬರಗಾಲದಿಂದ ತತ್ತರಿಸಿರುವ ರೈತರ ಕಣ್ಣೀರೊರೆಸಿ ಪರಿಹಾರ ನೀಡಲು ‘ಚಲೋ ಹಳ್ಳಿ’ ಕಾರ್ಯಕ್ರಮ ಆರಂಭಿಸಿ ನಿಮ್ಮೊಂದಿಗೆ ನಾವೂ ಬರುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆಗೆ ಮುಂದಾಗಿರುವ ರಾಜ್ಯ ಸರ್ಕಾರ ಕ್ರಮವನ್ನು ಟೀಕಿಸಿ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸಲು ಸಾಧ್ಯವಾಗದೇ, ಆರ್ಥಿಕ ಸಮತೋಲನ ಕಾಯ್ದು ಕೊಳ್ಳುವಲ್ಲಿ ವಿಫಲವಾಗಿ ಬೊಕ್ಕಸ ಬರಿದು ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರ, ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ತೆರಿಗೆ ಬಾಕಿಯ ನೆಪ ಮಾಡಿಕೊಂಡು ಕೇಂದ್ರ ಸರ್ಕಾದ ವಿರುದ್ಧ ಪ್ರತಿಭಟಿಸಲು ಹೊರಟಿದೆ” ಎಂದು ಕಿಡಿಕಾರಿದೆ.

“ಸುಳ್ಳು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸುವುದೂ ಕೂಡ ವಂಚನೆಯ ಇನ್ನೊಂದು ಮುಖ, ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಲಿದೆ, ಕಾಂಗ್ರೆಸ್ ಸರ್ಕಾರದ ಬಂಡವಾಳ ಸಾಕ್ಷಿ ಸಮೇತ ಬಯಲಿಗೆಳೆಯಲಿದೆ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸುಮಾರು 60 ವರ್ಷಗಳ ಕಾಲ ಈ ದೇಶವನ್ನಾಳಿದ ಕಾಂಗ್ರೆಸ್ “ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ” ಎನ್ನುವಂತೆ ನಿರಂತರವಾಗಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸಿ ರಾಜ್ಯಕ್ಕೆ ಬಹುದೊಡ್ಡ ಅನ್ಯಾಯಗಳನ್ನು ಎಸಗಿರುವುದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆ ಇದೆ. ಇದನ್ನೆಲ್ಲ ಇಷ್ಟರಲ್ಲೇ ಪುಂಖಾನುಪುಂಖವಾಗಿ ನಾವೂ ಬಿಚ್ಚಿಟ್ಟು ಕಾಂಗ್ರೆಸ್‌ನ ಅಸಲಿ ಮುಖವಾಡ ಕನ್ನಡಿಗರ ಮುಂದೆ ಕಳಚಿಡಲಿದ್ದೇವೆ” ಎಂದು ಎಚ್ಚರಿಸಿದ್ದಾರೆ.

‘ಸ್ವಾವಲಂಬಿ ಬಲಿಷ್ಠ ಭಾರತ ನಿರ್ಮಾಣ’ದ ಮಹಾ ಸಂಕಲ್ಪ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಕರ್ನಾಟಕವೇ ಸ್ಫೂರ್ತಿ, ಅಣ್ಣ ಬಸವಣ್ಣನವರ ಕಾಯಕ ತತ್ವವೇ ಪ್ರೇರಣೆ. ಇದಕ್ಕೆ ‘ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಸಾಕ್ಷಿಯಾಗಿದೆ” ಎಂದು ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ | ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೇಂದ್ರದ ತಡೆ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಬೇಕಿದ್ದ ದೆಹಲಿ ರೈತ ಹೋರಾಟದ ಕುರಿತ ‘ಕಿಸಾನ್...

ಗ್ಯಾರಂಟಿಗಳಿಂದ ನೆಮ್ಮದಿ ಗಳಿಸಿರುವ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ: ಸಿದ್ದರಾಮಯ್ಯ ಕಿಡಿ

ಗ್ಯಾರಂಟಿಗಳಿಂದ ನೆಮ್ಮದಿ ಗಳಿಸಿರುವ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ...

ಜಾತಿ ಸಮೀಕ್ಷೆ ವರದಿ ಸ್ವೀಕಾರ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ: ಮಾಜಿ ಸಿಎಂ ಬೊಮ್ಮಾಯಿ

ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ವರದಿ ಪಡೆದಿರುವುದು ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ....

ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ವಾರ್ಷಿಕ 50 ರಿಂದ 60 ಸಾವಿರ ಉಳಿತಾಯ: ಡಿ.ಕೆ.ಶಿವಕುಮಾರ್

"ಗ್ಯಾರಂಟಿ ಯೋಜನೆಗಳಿಂದ ಒಂದು ಬಡ ಕುಟುಂಬಕ್ಕೆ ವಾರ್ಷಿಕ 50-60 ಸಾವಿರ ಉಳಿತಾಯವಾಗುತ್ತಿದೆ....