ಮಂಡ್ಯ ಜನರ ನೆಮ್ಮದಿ ಹಾಳು ಮಾಡಲು ಕುಮಾರಸ್ವಾಮಿ ಮುಂದಾಗಿರುವುದು ನೋವು ತಂದಿದೆ : ಚಲುವರಾಯಸ್ವಾಮಿ

Date:

ಮಂಡ್ಯ ಜಿಲ್ಲೆಯ ಜನರ ನೆಮ್ಮದಿ ಹಾಳು ಮಾಡಲು ಜೆಡಿಎಸ್ ನಾಯಕ ಎಚ್ ​ಡಿ ಕುಮಾರಸ್ವಾಮಿ ಮುಂದಾಗಿರುವುದು ನೋವು ತಂದಿದೆ. ನೀವು ಸಿಎಂ ಆಗುವುದಕ್ಕೆ ಮಂಡ್ಯ ಜನರ ಆಶೀರ್ವಾದವೇ ಕಾರಣ ಎಂಬುದನ್ನು ಮರೆಯಬೇಡಿ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದರು.

- Advertisement -

ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜಿಲ್ಲೆಯ ಜನರ ಜೀವನ ಹಾಳುಮಾಡಬೇಡಿ. ಜವಾಬ್ದಾರಿಯುತ ಪ್ರತಿಪಕ್ಷದ ನಾಯಕರಾಗಿ ನೀವು ನಮ್ಮನ್ನು (ಸರ್ಕಾರವನ್ನು) ಸರಿಯಾದ ದಾರಿಯಲ್ಲಿ ಸಾಗುವಂತೆ ನೋಡಿಕೊಳ್ಳಬೇಕೇ ವಿನಃ ಶಾಂತಿ ಕದಡುವ ಕೆಲಸ ಮಾಡಬಾರದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಚುನಾವಣೆ ಗಮನದಲ್ಲಿಟ್ಟುಕೊಂಡು ಕುಮಾರಸ್ವಾಮಿ ಈ ರೀತಿ ಮಾಡುತ್ತಿದ್ದಾರೆ. ಇವರು ಸಿಂಗಾಪುರದಲ್ಲಿ ಕುಳಿತುಕೊಂಡು ಹೇಗೆಲ್ಲಾ ಮಾತನಾಡಿದ್ದರು ಎಂಬುದನ್ನು ಗಮನಿಸಿ. ಕುಮಾರಸ್ವಾಮಿಯವರು ಬಿಜೆಪಿಯನ್ನು ಟೀಕಿಸಿದಷ್ಟು ಬೇರೆ ಯಾರೂ ಟೀಕಿಸಿಲ್ಲ. ದೇವೇಗೌಡರೇ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಜೆಡಿಎಸ್​ನವರು ಟೀಕೆ‌ ಮಾಡಿದಷ್ಟು ಕಾಂಗ್ರೆಸ್ ಕೂಡ ಮಾಡಿಲ್ಲ. ಇದೀಗ ಅವರಿಬ್ಬರೂ (ಜೆಡಿಎಸ್, ಬಿಜೆಪಿ) ಅಸ್ತಿತ್ವ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

“ಜಿಲ್ಲೆಯ ಜನರೇ ನಿಮಗೆ ಅಧಿಕಾರ ನೀಡಿದ್ದು. ಕಳೆದ ಬಾರಿಯ ಚುನಾವಣೆಯಲ್ಲಿ ನಮ್ಮನ್ನು ಆಶೀರ್ವದಿಸಿದ್ದಾರೆ. ಮುಂದೆ ನಾವು ಸರಿಯಾದ ದಾರಿಯಲ್ಲಿ ಸಾಗದಿದ್ದರೆ ನಮಗೂ ಜನ ಪಾಠ ಕಲಿಸಬಹುದು. ಇದನ್ನು ನೀವು ನೆನಪಿನಲ್ಲಿಟ್ಟುಕೊಳ್ಳಿ. ಅದು ಬಿಟ್ಟು ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಗಳಿಗೆ ಪ್ರಚೋದನೆ ನೀಡಬೇಡಿ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಮಂಡ್ಯ ಜಿಲ್ಲೆಯ ಜನರು ನಿಮ್ಮ ಗಿಮಿಕ್ ಅನ್ನು ನಂಬುವುದಿಲ್ಲ. ಅದೇ ರೀತಿ ನಿಮ್ಮನ್ನು ಕ್ಷಮಿಸುವುದೂ ಇಲ್ಲ. ಕೇಸರಿ ಶಾಲು ಹಾಕುವ ಬದಲು ನೇರವಾಗಿ ಬಿಜೆಪಿಗೆ ಸೇರ್ಪಡೆಯಾಗಿ. ರೈತರ ಹಸಿರು ಶಾಲು ಬಿಟ್ಟಾಯ್ತು. ಜೆಡಿಎಸ್​ನ ಜಾತ್ಯತೀತತೆಯನ್ನೂ ಬಿಟ್ಟಾಯ್ತು. ಇನ್ನು ಬಿಜೆಪಿಗೆ ಸೇರಿಕೊಳ್ಳಿ. ಎಲ್ಲವನ್ನೂ ಜನ ತೀರ್ಮಾನಿಸಲಿ” ಎಂದು ಕುಮಾರಸ್ವಾಮಿ ವಿರುದ್ಧ ಸಚಿವರು ಕಿಡಿ ಕಾರಿದರು.

“ಕೆರಗೋಡು ಗ್ರಾಮದ ಮಧ್ಯಭಾಗದಲ್ಲಿರುವ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜ ಮಾತ್ರ ಆರೋಹಣ, ಅವರೋಹಣ ಮಾಡುವುದಾಗಿ ಅನುಮತಿ-ಒಪ್ಪಂದ ಪತ್ರ ಬರೆಯಲಾಗಿದೆ. ಇದರಂತೆಯೇ ಅವರು ನಡೆದುಕೊಂಡಿದ್ದರು. ಆದರೆ, ನಂತರ ಅಲ್ಲಿ ಧರ್ಮದ ಧ್ವಜ ಆರೋಹಣ ಮಾಡಲು ಯಾರು ಪ್ರೇರೇಪಣೆ ಕೊಟ್ಟರೋ ತಿಳಿಯದು. ಚುನಾವಣೆ ಸಂದರ್ಭದಲ್ಲಿ ಅದರ ಲಾಭ ಪಡೆಯಲು ಮಾಡಿದ್ದಾರೋ ತಿಳಿಯದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...