ಸಿಎಂ ಸಿದ್ದರಾಮಯ್ಯಗೆ ಅವಮಾನ; ರಾಘವೇಂದ್ರ ಸ್ವಾಮಿ ಮಠದ ಅರ್ಚಕ ಬಂಧನ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಂಗಳೂರಿನ ಕೆಂಗೇರಿಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಅರ್ಚಕ ಗುರುರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಇತ್ತೀಚೆಗೆ, ಖಾಸಗಿ ಸುದ್ದಿವಾಹಿನಿಯೊಂದಿಗೆ ಮತನಾಡಿದ್ದ ಗುರುರಾಜ್, ದಸರಾ ಉದ್ಘಾಟನೆಗೆ ಹಿರಿಯ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದಕ್ಕಾಗಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ವೇಳೆ, ಅವಾಚ್ಯ ಶಬ್ದಗಳನ್ನು ಬಳಸಿ ಸಿದ್ದರಾಮಯ್ಯ ಅವರಿಗೆ ಅವಮಾನಿಸಿದ್ದರು. ಅವರ ನಿಂದಿನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ವಿಡಿಯೋವನ್ನು ವೈರಲ್ ಆದ ಬಳಿಕ, ಬೆಂಗಳೂರಿನ ಕಾಂಗ್ರೆಸ್‌ ಮುಖಂಡ ಕುಶಾಲ್ ಅರೆವೇಗೌಡ ಎಂಬವರು ಅರ್ಚಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರು ದಾಖಲಿಸಿಕೊಂಡಿದ್ದ ಪೊಲೀಸರು, ಶನಿವಾರ ಸಂಜೆ ಅರ್ಚಕ ಗುರುರಾಜ್ ಅವರನ್ನು ಬಂಧಿಸಿದ್ದಾರೆ.

ಅವರ ಬಂಧನದ ಬೆನ್ನಲ್ಲೇ, ರಾಘವೇಂದ್ರ ಮಠದ ಕಾರ್ಯದರ್ಶಿ ಜೆ.ಎಸ್‌ ಭಾರದ್ವಾಜ್ ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, “ಅರ್ಚಕ ಗುರುರಾಜ್‌ ಹೇಳಿಕೆಗೂ ರಾಘವೇಂದ್ರ ಸ್ವಾಮಿ ಮಠಕ್ಕೂ ಯಾವುದೇ ಸಂಬಂಧವಿಲ್ಲ. ಅವರ ಹೇಳಿಕೆಯನ್ನು ಮಠದ ಆಡಳಿತ ಮಂಡಳಿ ತೀವ್ರವಾಗಿ ಖಂಡಿಸುತ್ತದೆ. ಅಲ್ಲದೆ, ಆತನನ್ನು ಅರ್ಚಕ ಸ್ಥಾನದಿಂದ ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...