ಮಧ್ಯಪ್ರದೇಶ ಬಿಜೆಪಿಯಲ್ಲಿ ಆಂತರಿಕ ಬಿಕ್ಕಟ್ಟು; ತಮ್ಮದೇ ಸರ್ಕಾರದ ವಿರುದ್ಧ ಸಿಡಿದ ಶಾಸಕರು

Date:

ಮಧ್ಯಪ್ರದೇಶ ಆಡಳಿತಾರೂಢ ಬಿಜೆಪಿಯಲ್ಲಿ ಅಂತರಿಕ ಬಿಕ್ಕಟ್ಟು ಬಹಿರಂಗಗೊಂಡಿದೆ. ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು ಅಸಮಾಧಾಗೊಂಡಿದ್ದಾರೆ. ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರವನ್ನು ದೂರುತ್ತಿದ್ದಾರೆ. ಇದು, ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

- Advertisement -

ಇತ್ತೀಚೆಗೆ, ವ್ಯಕ್ತಿಯೊಬ್ಬರಿಗೆ ಹಾವು ಕಚ್ಚಿತ್ತು. ಆ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ನಿರಾಕಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೇ ಕಾರಣಕ್ಕಾಗಿ ಅಸಮಾಧಾನಗೊಂಡಿದ್ದ ದಿಯೋರಿ ಕ್ಷೇತ್ರದ ಶಾಸಕ ಬಿಹಾರಿ ಪಟೇರಿಯ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದು, ಮಧ್ಯಪ್ರದೇಶ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಠಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪಟೇರಿಯ ಮಾತ್ರವಲ್ಲದೆ, ಹಲವಾರು ಬಿಜೆಪಿ ಶಾಸಕರು ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಗೌಪ್ಯ ಸಭೆಗಳನ್ನು ನಡೆಸುತ್ತಿದ್ದಾರೆ. ಕೆಲ ಶಾಸಕರು ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕುತ್ತಿದ್ದಾರೆ.

ಇತ್ತೀಚೆಗೆ, ಮೌಗಂಜ್‌ನ ಬಿಜೆಪಿ ಶಾಸಕ ಪ್ರದೀಪ್ ಪಟೇಲ್ ಅವರು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಕಾಣಿಸಿಕೊಂಡಿದ್ದರು. ಪೊಲೀಸರು ಮದ್ಯ ಮಾಫಿಯಾವನ್ನು ರಕ್ಷಿಸುತ್ತಿದ್ದಾರೆ. ಕೆಲ ಗೂಂಡಾಗಳು ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಯು ಬಿಜೆಪಿಯೊಳಗಿನ ಪ್ರಕ್ಷುಬ್ಧತೆ ಸೃಷ್ಠಸಿತ್ತು.

WhatsApp Image 2024 10 12 at 5.03.26 PM

ಇನ್ನು, ನಾರಿಯಾವಾಲಿ ಕ್ಷೇತ್ರದ ಬಿಜೆಪಿ ಶಾಸಕ ಕೂಡ ತಮ್ಮ ಕ್ಷೇತ್ರದಲ್ಲಿ ನಡೆಯುತ್ತಿದ್ದ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದರೂ, ಪೊಲೀಸರು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದರು.

ಮಧ್ಯಪ್ರದೇಶದಲ್ಲಿ ಒಬ್ಬರ ನಂತರ ಒಬ್ಬರಂತೆ ಬಿಜೆಪಿ ಶಾಸಕರು ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆ, ಪೋಸ್ಟ್‌, ರಾಜೀನಾಮೆ ಮೂಲಕ ಸುದ್ದಿಯಾಗುತ್ತಿದ್ದಾರೆ. ಬಿಜೆಪಿಯ ಆಂತರಿಕ ಬಿಕ್ಕಟ್ಟನ್ನು ಬಹಿರಂಗಗೊಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...