ಒಳ ಮೀಸಲಾತಿ | ತಾರ್ಕಿಕ ಅಂತ್ಯದ ಕಡೆ ಹೆಜ್ಜೆ, ಎಡಗೈ-ಬಲಗೈ ನಾಯಕರಿಂದ ಮಹತ್ವದ ಸಭೆ

Date:

ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದಂತೆ ಒಳ ಮೀಸಲಾತಿ (ಉಪ ವರ್ಗೀಕರಣ)ಜಾರಿ ಕುರಿತು ಹೋರಾಟ ಆರಂಭವಾಗಿ ಸುಮಾರು ಐದು ದಶಕಗಳೇ ಸಂದಿವೆ. ಆದರೂ ಒಳಮೀಸಲಾತಿ ಇನ್ನೂ ಜಾರಿಯಾಗಿಲ್ಲ. ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ರಾಜ್ಯದಲ್ಲೂ ಒಳಮೀಸಲಾತಿ ವಿಚಾರ ತಾರ್ಕಿಕ ಅಂತ್ಯದ ಕಡೆ ಸಾಗುವಂತೆ ಕಾಣುತ್ತಿದೆ.

- Advertisement -

ಸುಪ್ರೀಂ ಕೋರ್ಟ್‌ ತೀರ್ಪಿನಂತೆ ಒಳ ಮೀಸಲಾತಿ ವರ್ಗೀಕರಣ ಜಾರಿಗಾಗಿ ವಿಳಂಬ ದೋರಣೆಯನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಮಾದಿಗ ದಂಡೋರ ಸಮಿತಿ ಮಂದಕೃಷ್ಣ ಮಾದಿಗ ನೇತೃತ್ವದಲ್ಲಿ ಅನಿರ್ದಿಷ್ಟಾವಧಿಗೆ ಧರಣಿ ಕುಳಿತಿದೆ. ಇನ್ನೊಂದೆಡೆ ಮಾ.4ರಿಂದ ಬಿ ಆರ್‌ ಭಾಸ್ಕರ್‌ ಪ್ರಸಾದ್‌ ನೇತೃತ್ವದಲ್ಲಿ ‘ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಕಾಲಿ ಮಾಡಿ’ ಎಂದು ಘೋಷ ವ್ಯಾಖ್ಯದಡಿ ಹರಿಹರದ ಪ್ರೊ. ಬಿ ಕೃಷ್ಣಪ್ಪ ಸಮಾಧಿ ಸತಳದಿಂದ ಬೆಂಗಳೂರುವರೆಗೂ ಪಾದಯಾತ್ರೆ ಸಾಗಿ ಬರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಬೆಳವಣಿಗೆ ಮಧ್ಯೆ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ವಿಳಂಬ ಆಗುತ್ತಿದ್ದು, ಈ ವಿಚಾರದಲ್ಲಿ ಎಡಗೈ-ಬಲಗೈ ಎಂಬ ಅಪಸ್ವರ ಎತ್ತದೆ ಎಲ್ಲರೂ ಒಕ್ಕೊರಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಲು ಪರಿಶಿಷ್ಟ ಸಮುದಾಯದ ಸಚಿವರು, ಶಾಸಕರು ನಿರ್ಧರಿಸಿದ್ದಾರೆ. ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರ ನೇತೃತ್ವದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ನಿವಾಸದಲ್ಲಿ ಪರಿಶಿಷ್ಟ ಸಮುದಾಯದ ಸಚಿವರು, ಶಾಸಕರು ಹಾಗೂ ಕೆಲವು ಮುಖಂಡರು ಗುರುವಾರ ದೀರ್ಘ ಸಮಾಲೋಚನೆ ನಡೆಸಿ ಒಂದು ತೀರ್ಮಾನಕ್ಕೆ ಬಂದಿದ್ದಾರೆ.

ಗೃಹ ಸಚಿವ ಜಿ. ಪರಮೇಶ್ವರ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ, ಶಾಸಕರಾದ ಪ್ರಸಾದ್ ಅಬ್ಬಯ್ಯ, ದರ್ಶನ್ ಧ್ರುವನಾರಾಯಣ, ಎನ್. ಶ್ರೀನಿವಾಸ, ವಿಧಾನ ಪರಿಷತ್‌ ಸದಸ್ಯ ಎಚ್.ಪಿ. ಸುಧಾಮ್ ದಾಸ್, ಡಾ.ಡಿ. ತಿಮ್ಮಯ್ಯ ಮುಂತಾದವರು ಸಭೆಯಲ್ಲಿ ಇದ್ದಿದ್ದು ಗಮನಾರ್ಹ.

ಒಳ ಮೀಸಲಾತಿ ಸಭೆ 1

ಆಯೋಗ ರಚನೆ

ಪರಿಶಿಷ್ಟ ಜಾತಿ(ಎಸ್‌ಸಿ)ಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಮತ್ತು ಈ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚಿಸಲು 2024 ಅಕ್ಟೋಬರ್‌ 28ರಂದು ನಡೆದ ಸಚಿವ ಸಂಪುಟ ಸಭೆಯಲ್ಲೇ ತೀರ್ಮಾನಿಸಲಾಗಿದೆ. ಎಸ್‌ಸಿಗಳಿಗೆ ಒಳ ಮೀಸಲಾತಿ ಜಾರಿ ಮಾಡುವ ನಿಟ್ಟಿನಲ್ಲಿ ನಂಬಲರ್ಹ ದಾಖಲೆಗಳು ಹಾಗೂ ದತ್ತಾಂಶ ಸಂಗ್ರಹಿಸಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ ಮಾಡಿ, ಮೂರು ತಿಂಗಳಲ್ಲಿ ಆಯೋಗ ವರದಿ ನೀಡಲಿದೆ ಎಂದು ಕಾನೂನು ಸಚಿಚ ಎಚ್‌ ಕೆ ಪಾಟೀಲ್‌ ತಿಳಿಸಿದ್ದರು.

ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ರಾಜ್ಯ ಸರ್ಕಾರದ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು ನವೆಂಬರ್ ತಿಂಗಳಿನಲ್ಲಿಯೇ ರಚಿಸಲಾಯಿತು. ಡಿಸೆಂಬರ್ ಮೊದಲ ವಾರದಲ್ಲಿ ಆಯೋಗಕ್ಕೆ ಹೊಣೆ ನಿಗದಿಪಡಿಸಲಾಗಿತ್ತು. ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ದ ಒಳ ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಆಯೋಗ ವರದಿ ನೀಡಬೇಕಿದೆ.

ಕರ್ನಾಟಕ ಮಾದಿಗ ಒಳ ಮೀಸಲಾತಿ ಹೋರಾಟ ಸಮಿತಿ ಫೆ.13ರಂದು ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ಅವರಿಗೆ ಮನವಿ ಸಲ್ಲಿಸಿ, ವರದಿಯನ್ನು ಶೀಘ್ರವಾಗಿ ಸರ್ಕಾರಕ್ಕೆ ನೀಡಲು ಆಗ್ರಹಿಸಿತು. ‘ಒಳ ಮೀಸಲಾತಿಯಲ್ಲಿ ಯಾರಿಗೂ ಅನ್ಯಾಯವಾಗುವುದಿಲ್ಲ. ಒಳ ಮೀಸಲಾತಿ ಹಂಚಿಕೆ ಕುರಿತು ಸರ್ಕಾರಕ್ಕೆ ಶೀಘ್ರವೇ ವರದಿ ಸಲ್ಲಿಸಲಾಗುತ್ತದೆ” ಎಂದು ಪರಿಶಿಷ್ಟ ಜಾತಿ ಒಳ ಮೀಸಲಾತಿ ಆಯೋಗದ ಅಧ್ಯಕ್ಷ ಎಚ್.ಎನ್. ನಾಗಮೋಹನ್‌ದಾಸ್‌ ತಿಳಿಸಿದ್ದರು.

ನೇರ ನೇಮಕಾತಿಗೆ ತಡೆ

“ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ 101 ಒಳ ಪಂಗಡಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

“ರಾಜ್ಯ ಹೈಕೋರ್ಟ್‌ ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಮಿಷನ್‌ ಆಫ್‌ ಇನ್‌ಕ್ವೈರಿ ಆ್ಯಕ್ಟ್‌ 1952ರ ಅನ್ವಯ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ. ಸದರಿ ಆಯೋಗವು 3 ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಷರತ್ತು ವಿಧಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಂದಿನ ತೀರ್ಮಾನದವರೆಗೆ ರಾಜ್ಯ ಸರ್ಕಾರದ ಅಧೀನದ ಸಿವಿಲ್‌ ಸೇವೆಗಳಲ್ಲಿನ ಹಾಗೂ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸದಿರುವ ನಿರ್ಧಾರವನ್ನು ಸಹ ಕೈಗೊಳ್ಳಲಾಗಿದೆ” ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...