ಒಳಮೀಸಲಾತಿ | ‌ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌ಗೆ ವರದಿ ಜಾರಿ ಇಷ್ಟವಿಲ್ಲ: ವಿಪಕ್ಷ ನಾಯಕ ಆರ್‌ ಅಶೋಕ್

Date:

Advertisements

ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿಯನ್ನು ಕೂಡಲೇ ಜಾರಿ ಮಾಡಿ ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

‌ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಒಳಮೀಸಲಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್ ಸೇರಿದಂತೆ ರಾಜ್ಯದ ಕಾಂಗ್ರೆಸ್‌ ನಾಯಕರಿಗೆ ಇದು ಜಾರಿಯಾಗಲು ಇಷ್ಟವಿಲ್ಲ. ಎಲ್ಲ ಅವಕಾಶವಿದ್ದರೂ ಮತ್ತೆ ಆಯೋಗ ರಚಿಸಿ, ಮೂರು ತಿಂಗಳವರೆಗೆ ಕಾಯಲು ನಿರ್ಧರಿಸಲಾಗಿದೆ. ಇನ್ನು ಜನಗಣತಿ ಆರಂಭವಾದರೆ ಆಗ ಮತ್ತೊಂದು ಸಬೂಬು ಹೇಳಬಹುದು. ಜನರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ” ಎಂದರು.

“ಹಿಂದಿನ ಬಿಜೆಪಿ ಸರ್ಕಾರ ಒಳಮೀಸಲಾತಿಯನ್ನು ಒಪ್ಪಿತ್ತು. ಎಷ್ಟು ಮೀಸಲು ನೀಡಬೇಕೆಂದು ತಿಳಿಸಲಾಗಿತ್ತು. ಇನ್ನು ಯಾವುದೇ ಹುನ್ನಾರ ಮಾಡದೆ ಸರ್ಕಾರ ಒಳಮೀಸಲು ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

Advertisements

ಲ್ಯಾಂಡ್‌ ಜಿಹಾದ್‌

“ರಾಜ್ಯದಲ್ಲಿ ಲವ್‌ ಜಿಹಾದ್‌ನಂತೆಯೇ, ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್‌ ಜಿಹಾದ್‌ ನಡೆಯುತ್ತಿದೆ. ಭೂಮಿಯನ್ನು ಹೇಗೆ ಕಬಳಿಸಬೇಕೆಂದು ಸಚಿವ ಜಮೀರ್‌ ಅಹ್ಮದ್‌ ಯೋಜನೆ ರೂಪಿಸಿದ್ದಾರೆ. ಇನ್ನೂ ಕೆಲವರು ಸಂಸತ್ತು ನಮ್ಮದು, ವಿಧಾನಸೌಧವೂ ನಮ್ಮದು ಎಂದಿದ್ದಾರೆ. ಮುಸ್ಲಿಂ ಮತಾಂಧರ ವಿರುದ್ಧ ಇದ್ದ ಕೇಸು ವಾಪಸ್‌ ಪಡೆಯುವುದು, ಭಯೋತ್ಪಾದನೆ, ಪಾಕಿಸ್ತಾನಕ್ಕೆ ಜೈಕಾರ ಮೊದಲಾದವುಗಳಿಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ” ಎಂದು ದೂರಿದರು.

“ವಕ್ಫ್‌ ಬೋರ್ಡ್‌ ರೈತರ ಜಮೀನುಗಳನ್ನು ಕಬಳಿಸುತ್ತಿದೆ. ಇದು ಭಾರತಕ್ಕೆ ಸೇರಿದ ಆಸ್ತಿ. ಕಂಡ ಜಮೀನುಗಳೆಲ್ಲ ತಮ್ಮದೇ ಎಂದು ಇವರು ಹೇಳುತ್ತಿದ್ದಾರೆ. ಕೆಲವು ಮತಾಂಧ ಅಧಿಕಾರಿಗಳು ಖಬರ್‌ಸ್ತಾನ, ವಕ್ಫ್‌ ಬೋರ್ಡ್‌ ಆಸ್ತಿ ಎಂದು ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮೂಲಕ ರೈತರ ಅನ್ನ ಕೀಳುವ ಕೆಲಸ ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಪರಿಗಣಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರಿಗೆ ಟಿಪ್ಪು ದೆವ್ವ ಬಂದಿದ್ದು, ಆ ದೆವ್ವವನ್ನು ಬಿಡಿಸಬೇಕಾಗಿದೆ. ಇದರ ವಿರುದ್ಧ ಹೋರಾಟ ಮಾಡಬೇಕಿದೆ. ಇಲ್ಲವಾದರೆ ವಿಧಾನಸೌಧ, ಸಂಸತ್ತು, ಬಳಿಕ ದೇವಸ್ಥಾನಗಳನ್ನೂ ವಕ್ಫ್‌ ಆಸ್ತಿ ಎನ್ನುತ್ತಾರೆ. ವಕ್ಫ್‌ ಆಸ್ತಿಗಳನ್ನು ದೊಡ್ಡ ದೊಡ್ಡ ನಾಯಕರು ನುಂಗಿದ್ದಾರೆ. ಈ ಕುರಿತ ವರದಿಯನ್ನು ಹಿಂದೆ ವಿಧಾನಪರಿಷತ್‌ನಲ್ಲಿ ಮಂಡಿಸಲಾಗಿತ್ತು. ಕಾಂಗ್ರೆಸ್‌ ಸರ್ಕಾರ ಈಗ ಆ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಲಿ” ಎಂದು ಆಗ್ರಹಿಸಿದರು.

ದ್ವೇಷ ರಾಜಕಾರಣ

“ರಾಜ್ಯ ಸರ್ಕಾರಕ್ಕೆ ಹಣವಿಲ್ಲದೆ ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ಅನುದಾನ ನೀಡಿದೆ. ಆದರೆ ಜಯನಗರ ಶಾಸಕರಿಗೆ ಆ ಅನುದಾನ ಕೂಡ ನೀಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ರಾಮಲಿಂಗಾರೆಡ್ಡಿ ಅವರ ಕ್ಷೇತ್ರಕ್ಕೆ 80 ಕೋಟಿ ರೂ. ನೀಡಲಾಗಿತ್ತು. ಜಯನಗರದ ಜನರು ಕೂಡ ತೆರಿಗೆ ಕಟ್ಟಿದ್ದಾರೆ. ಈ ದ್ವೇಷ ರಾಜಕಾರಣದ ವಿರುದ್ಧ ಹೋರಾಟ ಮಾಡಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X