ಒಳಮೀಸಲಾತಿ | ರಾಜ್ಯ ಸರ್ಕಾರಗಳ ಅಧಿಕಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ: ಸಿದ್ದರಾಮಯ್ಯ

Date:

Advertisements

ಪರಿಶಿಷ್ಟರಲ್ಲಿ ಅತಿಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾದುದ್ದಾಗಿದೆ. ನ್ಯಾಯಾಲಯದ ತೀರ್ಪನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಒಳಮೀಸಲಾತಿ ಅನುಷ್ಠಾನದ ಹಾದಿಯಲ್ಲಿನ ಮುಖ್ಯ ಅಡ್ಡಿಯೊಂದು ನಿವಾರಣೆಯಾಗಿದೆ. ತೀರ್ಪಿನಲ್ಲಿರುವ ವಿವಾದಾತ್ಮಕ ಕೆನೆಪದರದ ಬಗೆಗಿನ ಅಂಶವೂ ಸೇರಿದಂತೆ ಇತರ ವಿಷಯಗಳ ಬಗ್ಗೆ ಪರಿಶಿಷ್ಟ ಜಾತಿಯ ನಾಯಕರು ಮತ್ತು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಬಗ್ಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಹಿಂದೆ ಕಾಂಗ್ರೆಸ್ ಪಕ್ಷವೇ ರಚಿಸಿದ್ದ ನ್ಯಾ.ಎ.ಜೆ.ಸದಾಶಿವ ಅವರ ಅಧ್ಯಕ್ಷತೆಯ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವುದಾಗಿ ನಾವು ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗೆ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

Advertisements

ಈ ನಡುವೆ ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಒಳಮೀಸಲಾತಿ ಬಗ್ಗೆ ಅವಸರದಲ್ಲಿ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿತ್ತು. ಪರಿಶಿಷ್ಟ ಜಾತಿಯೊಳಗಿನ ಮೀಸಲಾತಿಯನ್ನು ಸಂವಿಧಾನ ತಿದ್ದುಪಡಿಯ ಮೂಲಕ ಅನುಷ್ಠಾನಗೊಳಿಸಬಹುದು ಎಂದು ಕೇಂದ್ರ ಸರ್ಕಾರವೇ ರಚಿಸಿದ್ದ ಉಷಾ ಮೆಹ್ರಾ ಸಮಿತಿ ಸ್ಪಷ್ಟವಾಗಿ ತಿಳಿಸಿದ್ದರೂ ಕೇಂದ್ರ ಸರ್ಕಾರ ಇಲ್ಲಿಯ ವರೆಗೆ ತೀರ್ಮಾನ ಕೈಗೊಳ್ಳದೆ ಮೂಲೆಗೆ ಸರಿಸಿತ್ತು ಎಂದು ಉಲ್ಲೇಖಿಸಿದ್ದಾರೆ.

ಈಗಿನ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ನ್ಯಾ.ಎ.ಜೆ.ಸದಾಶಿವ ಆಯೋಗದ ಶಿಫಾರಸುಗಳನ್ನು ಕೂಲಂಕಷವಾಗಿ ಅಧ್ಯಯನ ನಡೆಸಿ, ಅಗತ್ಯ ಬಿದ್ದರೆ ಇದಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಗಳನ್ನು ಪರಿಗಣನೆಗೆ ತೆಗೆದುಕೊಂಡು ಸಮಾಲೋಚನೆ-ಸಂಧಾನದ ಮೂಲಕ ಒಳಮೀಸಲಾತಿ ಬಗ್ಗೆ ಸ್ಪಷ್ಟವಾದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಳ್ಳಲಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X