ಸಚಿವರ ಪರಿಚಯ | ಭರವಸೆ ನಾಯಕ ಕೃಷ್ಣ ಭೈರೇಗೌಡ ಮೂರನೇ ಬಾರಿಗೆ ಸಚಿವರಾಗಿ ಆಯ್ಕೆ

Date:

Advertisements
  • 2003ರಲ್ಲಿ ವೇಮಗಲ್ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ
  • ಸಿದ್ದರಾಮಯ್ಯ, ಕುಮಾರಸ್ವಾಮಿ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಣೆ

ಕರ್ನಾಟಕ ಕಾಂಗ್ರೆಸ್‌ನ ಹೊಸ ತಲೆಮಾರಿನ ನಾಯಕರಲ್ಲಿ ಹೆಚ್ಚು ಗಮನ ಸೆಳೆಯುವ ನಾಯಕ ಕೃಷ್ಣ ಭೈರೇಗೌಡ ಅವರು ಶನಿವಾರ ರಾಜ್ಯಪಾಲರಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಮೂಲಕ ಮೂರನೇ ಬಾರಿಗೆ ಸಚಿವರಾಗಿ ಆಯ್ಕೆಯಾಗಿದ್ದಾರೆ.

ಮಾಜಿ ಸಚಿವ ದಿವಂಗತ ಭೈರೇಗೌಡ, ತಾಯಿ ಸಾವಿತ್ರಮ್ಮ ಅವರ ಪುತ್ರನಾಗಿ ಕೃಷ್ಣಭೈರೇಗೌಡ ಏಪ್ರಿಲ್ 4, 1973 ರಲ್ಲಿ ಬೆಂಗಳೂರಲ್ಲಿ ಜನಿಸಿದರು. ಪತ್ನಿ ಮೀನಾಕ್ಷಿ ಭೈರೇಗೌಡ. ಕೃಷ್ಣಭೈರೇಗೌಡ ಅವರು ನರಸಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದಿ, ಎಸ್‌ಎಸ್‌ಎಲ್‌ಸಿಯನ್ನು ಸತ್ಯಸಾಯಿ ಶಾಲೆ ಮುದ್ದೇನಹಳ್ಳಿಯಲ್ಲಿ ಪೂರ್ಣಗೊಳಿಸಿದರು.

ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಪಿಯು ಶಿಕ್ಷಣ ಮುಗಿಸಿ, 1994 ರಲ್ಲಿ ಕ್ರೈಸ್ಟ್ ಯೂನಿವರ್ಸಿಟಿಯಲ್ಲಿ ‘ವ್ಯವಹಾರ ನಿರ್ವಹಣೆ’ಯಲ್ಲಿ ಸ್ನಾತಕೋತ್ತರ ಪದವಿ ಪಡೆದರು. ನಂತರ ಅಮೆರಿಕಾದಲ್ಲಿ ಇಂಟರ್‌ನ್ಯಾಷನಲ್‌ ಅಫೇರ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

Advertisements

ಬಳಿಕ ಅಮೆರಿಕಾ ವಾಷಿಂಗ್ಟನ್‌ನಲ್ಲಿರುವ ಇಥಿಯೋಪಿಯಾ ರಾಜತಾಂತ್ರಿಕ ಕಚೇರಿಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಆಗಿ ಒಂದು ವರ್ಷ ಕೆಲಸ ಮಾಡಿದರು. ಇದಾದ ನಂತರ 2000 ದಿಂದ 2002ರ ಮಧ್ಯೆ ಕೋಲಾರದ ತಮ್ಮ ಜಮೀನಿನಲ್ಲಿ ಕೃಷಿಕರಾಗಿಯೂ ದುಡಿದಿದ್ದರು.

ರಾಜಕೀಯ ಜೀವನ

2003ರಲ್ಲಿ ತಂದೆ ನಿಧನರಾದ ಬಳಿಕ ಕೋಲಾರ ಜಿಲ್ಲೆಯ ವೇಮಗಲ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಮೊದಲ ಬಾರಿಗೆ ಗೆದ್ದು ವಿಧಾನಸಭೆ ಪ್ರವೇಶಿಸಿ, ಈವರೆಗೂ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

2004ರಲ್ಲಿ ವೇಮಗಲ್ ಕ್ಷೇತ್ರದಿಂದ ಕೃಷ್ಣ ಭೈರೇಗೌಡ ಪುನರಾಯ್ಕೆಗೊಂಡರು. 2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆಯಾಗಿ, ವೇಮಗಲ್ ಕ್ಷೇತ್ರ ಅಸ್ತಿತ್ವ ಕಳೆದುಕೊಂಡಿತು. 2008ರ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ನಗರದ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ ವಿಧಾನಸಭೆಗೆ ಮರು ಆಯ್ಕೆಯಾದರು. 2008, 2013, 2018 ಹಾಗೂ 2023ರ ಚುನಾವಣೆಯಲ್ಲಿ ಬ್ಯಾಟರಾಯನಪುರ ಕ್ಷೇತ್ರದಿಂದ ಕೃಷ್ಣ ಭೈರೇಗೌಡ ಸತತ ಗೆಲುವು ಸಾಧಿಸಿದ್ದಾರೆ.

ಯಾವುದೇ ವಿಷಯ ಇರಲಿ, ಆಳವಾದ ಜ್ಞಾನದೊಂದಿಗೆ, ಚುರುಕಾಗಿ ವಿಷಯ ಮಂಡಿಸುವುದು ಕೃಷ್ಣ ಭೈರೇಗೌಡರ ಹೆಗ್ಗಳಿಕೆ. ಈ ಕಾರಣಕ್ಕಾಗಿಯೇ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸರ್ಕಾರದಲ್ಲಿ ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸಭೆ ಸಮಾರಂಭಗಳಲ್ಲಿ ಸರ್ಕಾರದ ಪ್ರತಿನಿಧಿಯಾಗಿ ಭಾಗಿಯಾಗುವ ಮೂಲಕ ಕಾಂಗ್ರೆಸ್‌ನ ಭರವಸೆ ನಾಯಕರಾಗಿ ಹೊರಹೊಮ್ಮಿದ್ದಾರೆ.

ಈ ಸುದ್ದಿ ಓದಿದ್ದೀರಾ? 24 ನೂತನ ಸಚಿವರ ಸೇರ್ಪಡೆಯೊಂದಿಗೆ ಪೂರ್ಣ ಪ್ರಮಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ರಚನೆ

ಸಿದ್ದರಾಮಯ್ಯ ಸರ್ಕಾರದಲ್ಲಿ ಕೃಷಿ ಮಂತ್ರಿಯಾಗಿ, ಯುವ ನಾಯಕರಾಗಿ ಗುರುತಿಸಿಕೊಂಡಿದ್ದು, ತಮ್ಮ ವಿಶಿಷ್ಟ ಕೃಷಿ ಕಾರ್ಯಕ್ರಮಗಳ ಮೂಲಕ ರಾಜ್ಯದ ಗಮನ ಸೆಳೆದವರು. ಇದೀಗ ರಾಷ್ಟ್ರಮಟ್ಟದಲ್ಲಿ ಸಿರಿಧಾನ್ಯ ಯೋಜನೆ ಪ್ರಸಿದ್ಧಿ ಪಡೆಯುತ್ತಿರುವಾಗ, ರಾಜ್ಯದಲ್ಲಿ ಪ್ರಾಥಮಿಕ ಹಂತದಲ್ಲಿ ಸಿರಿಧಾನ್ಯವನ್ನು ಮುನ್ನೆಲೆಗೆ ತಂದವರು ಕೃಷ್ಣ ಭೈರೇಗೌಡ. ʼಸಿರಿಧಾನ್ಯ ಮೇಳʼ ಎಂದರೆ ಕೃಷ್ಣ ಭೈರೇಗೌಡ ಹೆಸರು ತಟ್ಟನೆ ನೆನಪಾಗುವ ಮಟ್ಟಕ್ಕೆ ಅವರು ಹೆಸರು ಪ್ರಸಿದ್ಧಿಗೆ ಬಂದಿದೆ. ಈಗ ಮತ್ತೊಮೆ ಸಿಎಂ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ.

2018ರಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಎಚ್‌ ಡಿ ಕುಮಾರಸ್ವಾಮಿ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಸಿದ್ದರಾಮಯ್ಯ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡಿದ್ದರೂ, ರಾಜಕೀಯದಲ್ಲಿ ಅಜಾತಶತ್ರುವಾಗಿ ಭೈರೇಗೌಡ ಬೆಳೆಯುತ್ತಿದ್ದಾರೆ. ಪಕ್ಷದ ವರ್ಚಸ್ಸಿಗಿಂತ, ವೈಯಕ್ತಿಕ ವರ್ಚಸ್ಸನ್ನೇ ಮುಂದುಮಾಡಿಕೊಂಡು ರಾಜಕೀಯದಲ್ಲಿ ದಾಪುಗಾಲಿಡುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ರಾಹುಲ್‌ ಗಾಂಧಿಗೆ ಆಪ್ತ ನಾಯಕರಲ್ಲಿ ಕೃಷ್ಣಭೈರೇಗೌಡರೂ ಒಬ್ಬರು. ಕೃಷ್ಣ ಭೈರೇಗೌಡರು ಕೃಷಿ ಭಾಗ್ಯ, ಜಲಾಮೃತ, ಸ್ವಚ್ಛ ಮೇವ ಜಯತೆ ಕೃತಿಗಳನ್ನೂ ಬರೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X