ಶೇ. 15ರಷ್ಟು ಕೈಗಾರಿಕಾ ಬೆಳವಣಿಗೆ ನಮ್ಮ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

“2032ರ ಹೊತ್ತಿಗೆ 1 ಟ್ರಿಲಿಯನ್ ಡಾಲರ್ ಜಿಡಿಪಿ ಸಾಧಿಸಲು ವಾರ್ಷಿಕ ಶೇ 15-16ರಷ್ಟು ಕೈಗಾರಿಕಾ ಬೆಳವಣಿಗೆ ಸಾಧಿಸುವ ಗುರಿ ನಮ್ಮದಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

2025ರ ಫೆಬ್ರವರಿ 12, 13 ಮತ್ತು 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಜಾಗತಿಕ ಹೂಡಿಕೆದಾರರ ಸಮಾವೇಶ’ದ ಭಾಗವಾಗಿ ಬುಧವಾರ ಇಲ್ಲಿ ನಡೆದ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ರಾಜ್ಯ ಸರಕಾರವು ಗ್ರಾಮೀಣಾಭಿವೃದ್ಧಿ ಮತ್ತು ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಸಾಧಿಸಲು ಪಣ ತೊಟ್ಟಿದೆ. ಇದಕ್ಕಾಗಿ ರಾಜ್ಯದ ಎಲ್ಲಾ ಭಾಗಗಳಲ್ಲೂ ಕೈಗಾರಿಕಾ ಕ್ಲಸ್ಟರ್‌ಗಳನ್ನು ಬೆಳೆಸಲು ತೀರ್ಮಾನಿಸಲಾಗಿದೆ. ಮಹಾನಗರಗಳ ಆಚೆಗೂ ಆರ್ಥಿಕ ಪ್ರಗತಿಯನ್ನು ಕೊಂಡೊಯ್ಯಬೇಕು ಎನ್ನುವುದು ನಮ್ಮ ಸಂಕಲ್ಪವಾಗಿದೆ” ಎಂದು ಅವರು ನುಡಿದರು.

“ಸ್ಥಳೀಯ ಪ್ರತಿಭೆ ಮತ್ತು ಸಂಪನ್ಮೂಲಗಳನ್ನು ಬಳಸಿಕೊಂಡು, ವಿಶೇಷ ಪರಿಣತ ಉದ್ದಿಮೆಗಳನ್ನು ಬೆಳೆಸಲು ಸರಕಾರ ಬದ್ಧವಾಗಿದೆ. ಇದಕ್ಕಾಗಿ ಎಲೆಕ್ಟ್ರಾನಿಕ್ಸ್, ಆಟೋ ಮತ್ತು ಇ.ವಿ., ಫಾರ್ಮಸುಟಿಕಲ್ಸ್, ಜವಳಿ ಮುಂತಾದ ವಲಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಹೆಚ್ಚು ಹೆಚ್ಚು ಹೂಡಿಕೆ ಆಕರ್ಷಣೆ ಮತ್ತು ಉದ್ಯೋಗ ಸೃಷ್ಟಿ ಎರಡಕ್ಕೂ ನಾವು ಒತ್ತು ಕೊಡುತ್ತಿದ್ದೇವೆ” ಎಂದು ಅವರು ವಿವರಿಸಿದರು.

ಸಣ್ಣ & ಸೂಕ್ಷ್ಮ ಕೈಗಾರಿಕೆ, ಸ್ಟಾರ್ಟಪ್ ಗೆ ಒತ್ತು: ಎಂ ಬಿ ಪಾಟೀಲ್

ಕಾರ್ಯಕ್ರಮದಲ್ಲಿ ಮಾತನಾಡಿದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್, “ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೂ ಆದ್ಯ ಗಮನ ಹರಿಸಲಾಗುತ್ತಿದೆ. ಜೊತೆಗೆ ಕಳೆದ ಬಾರಿಯಂತೆ ಈ ಸಲವೂ ನವೋದ್ಯಮಗಳಿಗೆ ಬಂಡವಾಳ ಸೆಳೆಯಲು ವಿಶೇಷ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ. ಇದರ ಭಾಗವಾಗಿ ‘ಎಸ್ಎಂಇ ಕನೆಕ್ಟ್- 25’ ಮತ್ತು ‘ವೆಂಚರೈಸ್- 24’ ಪರಿಕಲ್ಪನೆಗಳನ್ನು ರೂಪಿಸಲಾಗಿದೆ” ಎಂದರು.

“ಜಾಗತಿಕ ಹೂಡಿಕೆದಾರರ ಸಮಾವೇಶದ ಭಾಗವಾಗಿ ರಾಜ್ಯದ ತಯಾರಿಕಾ ವಲಯದ ಕಾರ್ಯ ಪರಿಸರವನ್ನು ಜಾಗತಿಕ ಮಟ್ಟದ ಉದ್ದಿಮೆಗಳಿಗೆ ತೋರಿಸಲು ನಾಲ್ಕು ರೋಡ್ ಶೋ ನಡೆಸಲಾಗುವುದು. ಅಲ್ಲದೆ, ಗಣ್ಯ ಉದ್ಯಮಿಗಳನ್ನು ಖುದ್ದಾಗಿ ಆಹ್ವಾನಿಸಲು ಜೂನ್ 24ರಿಂದ 28ರವರೆಗೆ ಜಪಾನಿನ ಟೋಕಿಯೋ, ನಗೋಯ ಮತ್ತು ಒಸಾಕ ನಗರಗಳಿಗೆ ಹಾಗೂ ಜುಲೈ ಮೊದಲ ವಾರದಲ್ಲಿ ದಕ್ಷಿಣ ಕೊರಿಯಾದ ಸಿಯೋಲ್, ಇಂಚೆಯಾನ್ ಮತ್ತು ಜಿಯಾಂಗಿ ನಗರಗಳಿಗೆ ಭೇಟಿ ಕೊಡಲಾಗುವುದು” ಎಂದು ಅವರು ಮಾಹಿತಿ ನೀಡಿದರು.

ʼಬೆಳವಣಿಗೆಯ ಹೊಸಪರಿಕಲ್ಪನೆʼ (Reimagining Growth) ಧ್ಯೇಯದಡಿ ನಡೆಯಲಿರುವ ಸಮಾವೇಶದ ಮೂಲಕ ತಯಾರಿಕಾ ವಲಯ, ಮೂಲಸೌಕರ್ಯ ಅಭಿವೃದ್ಧಿ, ಐಟಿ, ಇಂಧನ, ಶಿಕ್ಷಣ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಿಗೆ ಹೆಚ್ಚಿನ ಬಂಡವಾಳ ಬರುವಂತೆ ನೋಡಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ ಮಾತನಾಡಿದರು. ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ, ಐಟಿ- ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಮತ್ತು ಕೌಶಲ ಅಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ್, ಜವಳಿ ಮತ್ತು ಎಪಿಎಂಸಿ ಖಾತೆ ಸಚಿವ ಶಿವಾನಂದ ಪಾಟೀಲ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.

ಇದನ್ನು ಓದಿದ್ದೀರಾ? ಹೆಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ: ಮೂರು ತಿಂಗಳ ಗಡುವು ಹೆಚ್ಚಿಸಿದ ರಾಜ್ಯ ಸರ್ಕಾರ

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಸ್ವಾಗತಿಸಿದರು. ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಅವರು ಹೂಡಿಕೆದಾರರ ಸಮಾವೇಶ ಹಾಗೂ ಉದ್ಯಮ ಬೆಳವಣಿಗೆ ಬಗ್ಗೆ ಪ್ರಾತ್ಯಕ್ಷೆ ಮೂಲಕ ವಿವರಿಸಿದರು. ಹಲವು ಗಣ್ಯ ಉದ್ಯಮಿಗಳು ಉಪಸ್ಥಿತರಿದ್ದರು. ಸಣ್ಣ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....