ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು: ಸಿಎಂ ಸಿದ್ದರಾಮಯ್ಯ

Date:

Advertisements
  • ಅಪರಾಧ ತಡೆಗಟ್ಟುವಲ್ಲಿ ಪೋಲಿಸರು ಕ್ರಿಯಾತ್ಮಕವಾಗಿರಬೇಕು: ಸಿದ್ದರಾಮಯ್ಯ
  • ದಕ್ಷಿಣ ಭಾರತ ರಾಜ್ಯಗಳ ಪೊಲೀಸ್ ಮಹಾನಿದೇರ್ಶಕರ ಸಮನ್ವಯ ಸಮ್ಮೇಳನ

ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು. ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ಕ್ರಿಯಾತ್ಮಕವಾಗಿರಬೇಕು. ಕಳೆದ ಹಲವು ವರ್ಷಗಳಲ್ಲಿ ಸೈಬರ್ ದಾಳಿಗಳು ವಿವಿಧ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ಆನ್ ಲೈನ್ ಮೂಲಕ ಮೋಸ ಮಾಡುವುದು ಅಧಿಕವಾಗಿದೆ. ಇದು ವ್ಯಕ್ತಿಗತವಾಗಿ ಹಾನಿಯಲ್ಲದೇ ರಾಷ್ಟ್ರೀಯ ಭದ್ರತೆಗೂ ಅಪಾಯಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದಕ್ಷಿಣ ಭಾರತ ರಾಜ್ಯಗಳ ಪೊಲೀಸ್ ಮಹಾನಿದೇರ್ಶಕರ ಸಮನ್ವಯ ಸಮ್ಮೇಳನವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಅವರು, “ಅತ್ಯಾಧುನಿಕ ವಿಧಿವಿಜ್ಞಾನ ಸಾಧನಗಳು ಸೈಬರ್ ಅಪರಾಧಿಗಳನ್ನು ಮಟ್ಟಹಾಕಲು ಸಹಾಯಕವಾಗಿವೆ. 2003ರಲ್ಲಿ ಸೈಬರ್ ಅಪರಾಧಗಳ ಪೊಲೀಸ್ ಠಾಣೆಯನ್ನು ತೆರೆದ ಮೊದಲ ರಾಜ್ಯ ಕರ್ನಾಟಕ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಸೈಬರ್ ಅಪರಾಧ ತಡೆಗಾಗಿ ಸಿಇಎನ್ ಪೊಲೀಸ್ ಠಾಣೆಗಳನ್ನು ರಾಜ್ಯ ಹೊಂದಿದೆ. ಇಂಥ ಪ್ರಕರಣಗಳನ್ನು ನಿರ್ವಹಿಸಲೆಂದೇ ಸೈಬರ್ ಠಾಣೆಯ ಪೊಲೀಸ್ ಅಧಿಕಾರಿಗಳು ವಿಶೇಷ ತರಬೇತಿ ಪಡೆದಿದ್ದಾರೆ” ಎಂದರು.

ಆಂತರಿಕ ಭದ್ರತೆ

Advertisements

ನಮ್ಮ ದೇಶದ ಬುನಾದಿ ಹಾಗೂ ಸಮಾಜದ ಸಂರಚನೆಗೆ ಸವಾಲಾಗಿರುವ ಆಂತರಿಕ ಭದ್ರತಾ ವಿಷಯಗಳು ತಮ್ಮ ಸಂಪೂರ್ಣ ಗಮನ ಮತ್ತು ಸಹಯೋಗ ಅಗತ್ಯ ಎಂದರು. ಕಾನೂನು ಸುವ್ಯವಸ್ಥೆ ಕಾಪಾಡುವುದು, ಸಾರ್ವಜನಿಕ ವ್ಯವಸ್ಥೆ ಹಾಗೂ ತಮ್ಮ ಪ್ರದೇಶದ ಪ್ರತಿಯೊಬ್ಬರ ಸುರಕ್ಷತೆ ಹಾಗೂ ಭದ್ರತೆಯ ಜವಾಬ್ದಾರಿಯನ್ನು ಹೊತ್ತಿರುವ ಪೊಲೀಸರಿಂದ ಅಚಲ ಬದ್ಧತೆ, ಸಮರ್ಪಣೆ ಹಾಗೂ ಕರ್ತವ್ಯಪರತೆಯನ್ನು ನಿರೀಕ್ಷಿಸಲಾಗುತ್ತದೆ ಎಂದರು.

“ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಪರಾಧಿ ಚಟುವಟಿಕೆಗಳಿಂದ ಹಿಡಿದು ಡಿಜಿಟಲ್ ವಲಯದ ಬೆದರಿಕೆಗಳನ್ನೂ ದೇಶ ಎದುರಿಸುತ್ತಿದೆ. ಆಧುನಿಕ ಸಮಾಜದ ಸಂಕೀರ್ಣತೆಗಳೂ ಕೂಡ ಹೊಸ ಮಾದರಿಯ ಅಪರಾಧಗಳನ್ನು ಹೆಚ್ಚಿಸಿವೆ. ಇದರಿಂದಾಗಿ ಪೊಲೀಸ್ ತಂತ್ರಗಾರಿಕೆಯಲ್ಲಿಯೂ ನಿರಂತರವಾಗಿ ಮಾರ್ಪಾಡು ತರಬೇಕಾದ ಅವಶ್ಯಕತೆ ಇದೆ” ಎಂದ ತಿಳಿಸಿದರು.

“ಕಾನೂನು ಪಾಲಕರಾಗಿ ತಾವುಗಳು ಸಮಾಜದ ಸ್ವಾಸ್ವ್ಥವನ್ನು ಹಾಳು ಮಾಡುವವರಿಂದ, ಶಾಂತಿ ಕದಡುವವರಿಗಿಂತ ಒಂದು ಹೆಜ್ಜೆ ಮುಂದಿರಬೇಕಲ್ಲದೇ ಶೀಘ್ರವಾಗಿ ಹೊಂದಿಕೊಂಡು ನವೀನ ಮಾದರಿಯನ್ನು ಅಳವಡಿಸಿಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಶೈಕ್ಷಣಿಕ ಸುಧಾರಣೆಗಳಿಗೆ ನಾಂದಿ ಹಾಡಿದ ಹೊಸ ಪರೀಕ್ಷಾ ವಿಧಾನ: ಸಿಎಂ ಸಿದ್ದರಾಮಯ್ಯ

ಮಾದಕವಸ್ತು ನಿಯಂತ್ರಣ

“ಮಾದಕವಸ್ತು ನಿಯಂತ್ರಣದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಅತ್ಯುತ್ತಮ ಕೆಲಸ ಮಾಡಿದ್ದು ಅಂತಾರಾಷ್ಟ್ರೀಯ ಮಾದಕವಸ್ತು ಜಾಲವನ್ನು ಪತ್ತೆ ಹಚ್ಚಲಾಗಿದೆ. ಡಾರ್ಕ್‍ವೆಬ್ ಮೂಲಕ ನಡೆಸುವ ಡ್ರಗ್ಸ್ ಜಾಲವನ್ನೂ ಕೂಡ ಭೇದಿಸಲಾಗಿದೆ ಎಂದರು. ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು ನಿಗ್ರಹಿಸಲಾಗಿದ್ದರೂ, ಕರ್ನಾಟಕದ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಈ ಸಮಸ್ಯೆಯನ್ನು ಮಟ್ಟಹಾಕಲು ಹೆಚ್ಚಿನ ಸಹಕಾರ ಅಗತ್ಯ” ಎಂದು ಹೇಳಿದರು.

ಭಯೋತ್ಪಾದನೆ ನಿಗ್ರಹ

ಭಯೋತ್ಪಾದನಾ ಚಟುವಟಿಕೆಗಳು ರಾಜ್ಯದಲ್ಲಿಯೂ ನಡೆದಿದ್ದು, ಇವುಗಳ ನಿಗ್ರಹಕ್ಕೆ ಮಾಹಿತಿ ಸಂಗ್ರಹಣೆ, ಸಮನ್ವಯ, ಸಹಕಾರ ಹಾಗೂ ಭಯೋತ್ಪಾದನಾ ಸಂಘಟನೆಗಳ ವಿರುದ್ಧ ಕ್ರಮ ಅಗತ್ಯ. ಅಂತರ ರಾಜ್ಯ ಅಪರಾಧಿಗಳು ಹಾಗೂ ಗ್ಯಾಂಗ್ ಗಳ ಮೇಲೆ ನಿಗಾ ಅಗತ್ಯವೆಂದ ಮುಖ್ಯಮಂತ್ರಿಗಳು ಈ ಕುರಿತು ವಿವಿಧ ರಾಜ್ಯಗಳ ನಡುವೆ ಸಮನ್ವಯ ಹಾಗೂ ಸಹಕಾರವಿದ್ದರೆ ಅಪರಾಧಿಗಳನ್ನು ಮಟ್ಟಹಾಕುವುದು ಸುಲಭ ಎಂದರು.

ಗೃಹ ಸಚಿವರಾದ ಜಿ.ಪರಮೇಶ್ವರ್ ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X