ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ ಎಂದು ಕೆಲವೊಂದು ಸುದ್ದಿ ಮಾಧ್ಯಮಗಳು ಸುಳ್ಳು ಸುದ್ದಿಯನ್ನು ವರದಿ ಮಾಡಿದ್ದವು. ಈ ಬಗ್ಗೆ ಸ್ವತಃ ಸ್ಪಷ್ಟೀಕರಣ ನೀಡಿರುವ ಸಿಎಂ ಸಿದ್ದರಾಮಯ್ಯ, “ಆ ರೀತಿಯ ಯಾವುದೇ ಪ್ರಸ್ತಾಪವಿಲ್ಲ. ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು” ಎಂದು ತಿಳಿಸಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, “ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿಯವರು ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು. ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲಿ ಸರ್ಕಾರದ ಮುಂದೆ ಇಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ
ಈ ಬಾರಿಯ ದಸರಾವನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಕೈಯಲ್ಲಿ ಉದ್ಘಾಟನೆ ಮಾಡಿಸಬೇಕು ಎಂದು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂಬ ಸುದ್ದಿಯನ್ನು ಕೆಲವೊಂದು ಮಾಧ್ಯಮಗಳು ವರದಿ ಮಾಡಿದ್ದವು. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

