ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ, ಕೋಟ ಶ್ರೀನಿವಾಸ ಪೂಜಾರಿಗೆ ಕೋಟಿ ಕೋಟಿ ಲಂಚ: ಗೂಳಿಹಟ್ಟಿ ಶೇಖರ್‌ ಗಂಭೀರ ಆರೋಪ

Date:

ಲೋಕಸಭೆ ಚುನಾವಣೆಯಲ್ಲಿ ಜಯ ಸಾಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಹೊಸದುರ್ಗದ ಮಾಜಿ ಶಾಸಕ ಗೂಳಿಹಟ್ಟಿ ಡಿ.ಶೇಖರ್‌ ಅವರು ಗಂಭೀರ ಆರೋಪ ಮಾಡಿದ್ದು, “ಬಿಜೆಪಿ ಅಧಿಕಾರವಧಿಯಲ್ಲಿ ‘ಭೋವಿ ಅಭಿವೃದ್ಧಿ ನಿಗಮ’ದಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದೆ. ಸಮಾಜ ಕಲ್ಯಾಣ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಲಂಚ ಸಂದಾಯವಾಗಿದೆ” ಎಂದು ಆರೋಪಿಸಿದ್ದಾರೆ.

- Advertisement -

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿರುವ ಸಂದರ್ಭದಲ್ಲಿ ಗೂಳಿಹಟ್ಟಿ ಮಾಡಿದ ಈ ಆರೋಪ ರಾಜಕೀಯ ಸಂಚಲನ ಸೃಷ್ಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

13 ನಿಮಿಷಗಳ ಆಡಿಯೊ ಹೇಳಿಕೆಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಗೂಳಿಹಟ್ಟಿ, ” ‘ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದ ಕೊನೆಯ ಮೂರು ತಿಂಗಳು ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಬಿಜೆಪಿ ಅಧಿಕಾರವಧಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವುದು ನನ್ನ ಗಮನಕ್ಕೆ ಬಂದಿದೆ. ಆಗ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರಿಗೂ ಇದರಲ್ಲಿ ಪಾಲಿದೆ” ಎಂದು ದೂರಿದ್ದಾರೆ.

“ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅತ್ಯಂತ ಪ್ರಾಮಾಣಿಕ ರಾಜಕಾರಣಿ ಎಂದು ಬಿಂಬಿಸಲಾಗಿದೆ. ಆದರೆ ಚುನಾವಣೆ ಸಂದರ್ಭದಲ್ಲಿ ಅವರಿಗೆ ₹50 ಕೋಟಿಯಿಂದ ₹60 ಕೋಟಿಯಷ್ಟು ಹಣ ಎಲ್ಲಿಂದ ಬಂತು? ಇದಕ್ಕೆ ಉತ್ತರ ಸಿಗಬೇಕಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಭೋವಿ ಅಭಿವೃದ್ಧಿ ನಿಗಮದ ಅಕ್ರಮವನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ನೀಡುವುದರಿಂದ ಪ್ರಯೋಜನವಿಲ್ಲ. ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾದರೆ ಮಾತ್ರ ಸತ್ಯ ಬೆಳಕಿಗೆ ಬರುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಗಮನ ಹರಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಭೋವಿ ಅಭಿವೃದ್ಧಿ ನಿಗಮದ ₹100 ಕೋಟಿಯನ್ನು ತಿಂದು ಹಾಕಲಾಗಿದೆ. ಭೊವಿ ಸಮಾಜದ ಮುಖಂಡರ ಪಾತ್ರವೂ ಇದರಲ್ಲಿದೆ. ಸಮಾಜದ ಫಲಾನುಭವಿಗಳಿಗೆ ಒಂದು ರೂಪಾಯಿ ಕೂಡ ತಲುಪಿಲ್ಲ. ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಈ ಪ್ರಕರಣವನ್ನು ಸಿಐಡಿಗೆ ನೀಡಿದ್ದರು. ಕಾಂಗ್ರೆಸ್‌ ಅಧಿಕಾರವಧಿಯಲ್ಲಿ ಎಚ್‌.ಸಿ.ಮಹದೇವಪ್ಪ ಸಮಾಜ ಕಲ್ಯಾಣ ಸಚಿವರಾದ ಬಳಿಕ ತನಿಖೆ ಸ್ಥಗಿತಗೊಂಡಿದೆ. ಏಕೆ ಹೀಗೆ ಮಾಡಿದ್ದೀರಿ” ಎಂದು ಪ್ರಶ್ನಿಸಿದ್ದಾರೆ.

“ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಹಗರಣದ ಬಗ್ಗೆ ತನಿಖೆ ನಡೆಯುತ್ತಿದೆ. ಇಂತಹದೇ ಆರೋಪ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ವಿರುದ್ಧವೂ ಕೇಳಿಬಂದಿದೆ. ದೂರು ನೀಡಿದ ಮಹಿಳೆಯ ಸಾವಿನ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಏಕೆ ತನಿಖೆ ನಡೆಯುತ್ತಿಲ್ಲ” ಎಂದು ಕೇಳಿದ್ದಾರೆ.

“ಜಾತಿಗೊಂದರಂತೆ ಸ್ಥಾಪಿಸಿದ ಅಭಿವೃದ್ಧಿ ನಿಗಮಗಳಲ್ಲಿ ಇಂತಹ ಅವ್ಯಹಾರ ಮಾಮೂಲಿ ಆಗಿದೆ. ವಿವೇಚನಾ ಕೋಟಾದಡಿ ಸಚಿವರಿಗೆ ಶೇ 15, ಅಧ್ಯಕ್ಷರು ಮತ್ತು ಅಧಿಕಾರಿಗಳಿಗೆ ಶೇ 5ರಷ್ಟು ನಿಗದಿಪಡಿಸಲಾಗಿದೆ. ಇದು ಅತಿ ಹೆಚ್ಚು ದುರ್ಬಳಕೆ ಆಗುತ್ತಿದೆ ಎಂಬುದನ್ನು ನನ್ನ ಅನುಭವದಿಂದ ಹೇಳುತ್ತಿದ್ದೇನೆ” ಎಂದು ವಿವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಪಶು ವೈದ್ಯಕೀಯ ವಿವಿ ಪ್ರಭಾರ ಕುಲಪತಿಯಾಗಿ ಎ.ಟಿ.ರಾಮಚಂದ್ರ ನಾಯ್ಕ ಅಧಿಕಾರ ಸ್ವೀಕಾರ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ...

ಡಿಕೆಶಿ ಭರವಸೆಯಷ್ಟೇ ಸಾಲದು ಎಂದ ಕಬ್ಬು ಬೆಳೆಗಾರರು; ಪ್ರತಿಭಟನೆ ತೀವ್ರ!

ಕಬ್ಬಿಗೆ ನ್ಯಾಯಯುತ, ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹಿಸಿ ಬೆಳಗಾವಿ ಸೇರಿದಂತೆ ನಾನಾ...