ಬಿಜೆಪಿ ಅವಧಿಯ ಅಕ್ರಮ | ವಾರದೊಳಗೆ ಸಮಿತಿ ಸಭೆ ನಡೆಸಿ ವರದಿ ಸಲ್ಲಿಕೆ: ಗೃಹ ಸಚಿವ ಪರಮೇಶ್ವರ್

Date:

ತನಿಖಾ ಸಂಸ್ಥೆಗಳ ಹಂತದಲ್ಲಿ ಬಿಜೆಪಿ ಸರ್ಕಾರ ಅವಧಿಯ ಅಕ್ರಮ ಸೇರಿ ವಿವಿಧ ಹಗರಣಗಳ ತನಿಖೆ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ವಾರದೊಳಗೆ ಸಮಿತಿ ಸಭೆ ನಡೆಸುತ್ತೇನೆ ಎಂದು ಸಮಿತಿಯ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.

- Advertisement -

ಸದಾಶಿವನಗರದ ತಮ್ಮ ನಿವಾಸದ ಬಳಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಎಲ್ಲ ಹಗರಣಗಳ ಪ್ರಕರಣಗಳನ್ನು ಗುರುತಿಸಿದ್ದೇವೆ.‌ ಅವುಗಳ ತನಿಖೆ ಯಾವ ಹಂತದಲ್ಲಿವೆ ಎಂಬುದನ್ನು ಪರಿಶೀಲಿಸಿ, ವರದಿಯನ್ನು ಸಚಿವ‌ ಸಂಪುಟಕ್ಕೆ ಸಲ್ಲಿಸುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

“ತ್ವರಿತಗತಿಯಲ್ಲಿ ತನಿಖೆ ನಡೆಯಬೇಕು ಎಂಬ ಉದ್ದೇಶದಿಂದ ಸಮಿತಿ ರಚನೆ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪ್ರಗತಿ ಪರಿಶೀಲನೆ ವೇಳೆ ಗಮನಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ವಿಚಾರ ಕ್ಯಾಬಿನೆಟ್ ಗಮನಕ್ಕೆ ಬಂದ ಬಳಿಕ ತ್ವರಿತಗತಿಯಲ್ಲಿ ಮಾಡಲು ಸಮಿತಿ ರಚಿಸಿದ್ದಾರೆ‌” ಎಂದು ಹೇಳಿದರು.

ದ್ವೇಷದ ರಾಜಕಾರಣ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿ, “ಅವರು ಏನಾದರು ಹೇಳಿಕೊಳ್ಳಲಿ. ನಮ್ಮನ್ನು ಟೀಕೆ ಮಾಡುವುದಕ್ಕೆ,‌ ಸಲಹೆ‌ ನೀಡಲು, ತಪ್ಪು ಮಾಡಿದಾಗ ಹೇಳುವುದಕ್ಕೆ ಅವರಿಗೆ ಜವಾಬ್ಧಾರಿಗಳಿರುತ್ತವೆ. ಆಡಳಿತ ನಡೆಸುವರಿಗೂ ಅವರಿಗೆ ಆದಂತಹ ಜವಾಬ್ದಾರಿಗಳಿರುತ್ತವೆ” ಎಂದರು.

“ಮುಖ್ಯಮಂತ್ರಿ ಸ್ಥಾನದ ಬಗ್ಗೆ ಚರ್ಚೆ ಅನಗತ್ಯ.‌ ನಾವು ಜನರಿಗೆ ಕೊಟ್ಟ ಭರವಸೆಗಳನ್ನು, ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಆಡಳಿತ ಮಾಡಬೇಕು. ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಸರ್ಕಾರವನ್ನು ಅಸ್ಥಿರಗೊಳಿಸಲು, ಸರ್ಕಾರದ ಕಾರ್ಯಕ್ರಮಗಳು ಅನುಷ್ಠಾನ ಆಗಬಾರದು ಎಂಬ ಉದ್ದೇಶದಿಂದ ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಇದೆಲ್ಲವನ್ನು ಬದಿಗೊತ್ತಿ ನಾವು ಕೆಲಸ ಮಾಡಬೇಕಿದೆ” ಎಂದು ಹೇಳಿದರು.

“ಮುಖ್ಯಮಂತ್ರಿ ಸ್ಥಾನದ ಚರ್ಚೆಯ ಬಗ್ಗೆ ಶಿಸ್ತಿನ ಕ್ರಮದ ಕುರಿತು ಪಕ್ಷದ ಅಧ್ಯಕ್ಷರು ಕಡಿವಾಣ ಹಾಕುತ್ತಾರೆ. ಅಧ್ಯಕ್ಷರು ಅಮೇರಿಕ ಪ್ರವಾಸದಲ್ಲಿದ್ದು, ಬಂದನಂತರ ಈ ಬಗ್ಗೆ ಗಮನ ಹರಿಸುತ್ತಾರೆ” ಎಂದು ಸ್ಪಷ್ಟಪಡಿಸಿದರು.

ವಾಲ್ಮೀಕಿ ನಿಗಮ ಹಗರಣದ ಇ.ಡಿ. ಚಾರ್ಜ್‌ಶೀಟ್ ಕುರಿತು ಪ್ರತಿಕ್ರಿಯಿಸಿ, “ನಾವ್ಯಾರೋ ಹೇಳಿದ ಹೇಳಿಕೆ ಮುಖ್ಯವಲ್ಲ‌. ತನಿಖಾ ಸಂಸ್ಥೆಗಳು ಸಿಕ್ಕಂತಹ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತೀರ್ಮಾನ ಮಾಡುತ್ತಾರೆ. ನಾವು ನೀಡುವ ಹೇಳಿಕೆಗಳು ಮೇಲ್ನೋಟಕ್ಕೆ ಮಾತ್ರ. ತನಿಖೆ ಕೈಗೊಂಡ ಬಳಿಕ ಸತ್ಯಾಸತ್ಯತೆ ಗೊತ್ತಾಗುತ್ತದೆ” ಎಂದರು

“ಮಾಜಿ ಸಚಿವ ನಾಗೇಂದ್ರ ಅವರ ಪಾತ್ರ ಇದೆ ಎಂದು ಇ.ಡಿ.ಯವರು ಹೇಳುತ್ತಿದ್ದಾರೆ. ಬೇಕಾದಷ್ಟು ಸಲ ಹಾಗೇ ಆಗುತ್ತದೆ. ಅವರು ಹೇಳಿರುವುದಕ್ಕೆ ನಮಗೆ ಸಾಕ್ಷ್ಯ ಸಿಕ್ಕಿರುವುದಿಲ್ಲ. ನಾವು ಹೇಳಿರುವುದಕ್ಕೆ ಅವರಿಗೆ ಸಾಕ್ಷ್ಯ ಸಿಕ್ಕಿರುವುದಿಲ್ಲ. ಬೇಕಾದಷ್ಟು ಸಲ ಹೀಗಾಗಿದೆ. ವಿವಿಧ ತನಿಖಾ ಸಂಸ್ಥೆಗಳ ತನಿಖಾ ವಿಧಾನವೇ ಬೇರೆ ಇರುತ್ತದೆ. ಆ ದೃಷ್ಟಿಯಿಂದ‌ ಮಾಡುತ್ತಾರೆ. ಇ.ಡಿ.ಯವರು ಮತ್ತು ಎಸ್‌ಐಟಿಯವರು ಇಬ್ಬರು ಚಾರ್ಜ್‌ಶೀಟ್ ಸಲ್ಲಿಸುತ್ತಾರೆ” ಎಂದು ಹೇಳಿದರು.

ಡಿಕೆಶಿ, ರಾಹುಲ್ ಗಾಂಧಿ ಭೇಟಿ ಆಕಸ್ಮಿಕ

“ಅಮೆರಿಕಾದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಭೇಟಿಯಾಗಿರುವುದು ನನಗೆ ಗೊತ್ತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಬಂದಿರುವ ಫೋಟೊಗಳನ್ನು ಗಮನಿಸಿದ್ದೇನೆ. ಅವರು ಕುಟುಂಬ ಸಮೇತ ಅಮೆರಿಕಾ ಪ್ರವಾಸ ಹೋಗಿದ್ದಾರೆ. ಆಕಸ್ಮಿಕವಾಗಿ ಅದೇ ಹೋಟೆಲ್‌ನಲ್ಲಿ ಸಿಕ್ಕಿದ್ದಾರೆ ಎಂದರೆ, ಓಡಿ ಹೋಗಲು ಆಗುತ್ತಾ? ಅವರಿಗೆ ಸತ್ಕರಿಸಿರುತ್ತಾರೆ. ಅದು ಬಿಟ್ಟರೆ ಬೇರೆನು ಗೊತ್ತಿಲ್ಲ” ಎಂದರು.

ಬಿಪಿಎಲ್ ಕಾರ್ಡ್‌ ಕಡಿತ ಇಲ್ಲ

“ಯಾವುದೇ ಬಿಪಿಎಲ್ ಕಾರ್ಡ್‌ಗಳನ್ನು ಕಡಿತ ಮಾಡುವುದಿಲ್ಲ. ತೆರಿಗೆ ಪಾವತಿ ಮಾಡುತ್ತಿರುವವರು ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರಲ್ಲ ಎಂಬುದು ನಿಯಮದಲ್ಲಿದೆ. ಸುಳ್ಳು ದಾಖಲೆ ಸಲ್ಲಿಸಿ, ಅಧಿಕಾರಿಗಳ ಮನವೊಲಿಸಿ ಕಾರ್ಡ್ ಪಡೆದಿರುವುದು ತಪ್ಪು. ಯಾರ ಕಾರ್ಡ್‌ನ್ನು ತೆಗೆಯಲು ಹೋಗುವುದಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...