ನೀರು ಖಾಲಿಯಾದ ಮೇಲೆ ಸರ್ಕಾರ ಕ್ರಮ ಕೈಗೊಳ್ಳುತ್ತಾ?: ಕುಮಾರಸ್ವಾಮಿ ವಾಗ್ದಾಳಿ

Date:

Advertisements
  • ಕಾವೇರಿ ಸಂಕಷ್ಟ ಸೂತ್ರ ರೂಪಿಸಬೇಕಾದವರು ಯಾರು?: ಎಚ್‌ಡಿಕೆ
  • ಸಂಸದರನ್ನು ಕೂರಿಸಿಕೊಂಡು ಭಾಷಣ ಮಾಡಲಿಕ್ಕೆ ಹೋಗಿದ್ದ?

ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ, ಈ ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಏನು ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆ ಕೊಡುತ್ತಿದ್ದರೆ ಉಪಯೋಗ ಏನು? ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದರು.

ಚನ್ನಪಟ್ಟಣದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನೀರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ಮೊದಲನೇಯ ತಪ್ಪು. ಸಂಕಷ್ಟ ಸೂತ್ರ ರಚನೆಗೆ ಇಷ್ಟು ಹೊತ್ತಿಗೆ ರಾಜ್ಯ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಬೇಕಿತ್ತು” ಎಂದರು.

ದೆಹಲಿಯಲ್ಲಿ ರಾಜ್ಯದ ಸಂಸದರ ಸಭೆ ಕರೆದು ಇವತ್ತು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಏನು ಚರ್ಚೆ ಮಾಡಿದ್ದಾರೆ? ಇವರೇನು ಹೇಳಿದ್ದಾರೆ ಎನ್ನುವ ಮಾಹಿತಿ ನನಗೂ ಇದೆ. ಹೊರನೋಟಕ್ಕೆ ನಾವು ಒಗ್ಗಟ್ಟಾಗಿದ್ದೇವೆ ಎಂದು ತೋರಿಸುವುದರಲ್ಲಿ ಏನೂ ಪ್ರಯೋಜನವಿಲ್ಲ. ಸಂಸದರನ್ನು ಕೂರಿಸಿಕೊಂಡು ಭಾಷಣ ಮಾಡಲಿಕ್ಕೆ ಹೋಗಿದ್ದಾ?” ಎಂದು ವಾಗ್ದಾಳಿ ನಡೆಸಿದರು.

Advertisements

“ಕಾವೇರಿ ನೀರು ನಿರ್ವಹಣಾ ಸಮಿತಿ ಹಾಗೂ ನಿಯಂತ್ರಣ ಸಮಿತಿ ಏನಾದ್ರೂ ದೇವಲೋಕದಿಂದ ಇಳಿದು ಬಂದಿದೆಯಾ? ಅಲ್ಲಿರುವವರೆಲ್ಲ ನಾವು ನೇಮಕ ಮಾಡಿಕೊಂಡ ಸದಸ್ಯರೆಲ್ಲವೇ? ಈಗ ನೋಡಿದರೆ ನಮ್ಮ ರಾಜ್ಯದ ಜನರ ಮೇಲೆ ಸವಾರಿ ಮಾಡುತ್ತಿದ್ದಾರೆ” ಎಂದು ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ’ಈ ದಿನ’ ಸಂಪಾದಕೀಯ| 2029ರ ಕನಸಿಗೆ ಈಗಲೇ ‘ಟೋಪಿ’ ಹೊಲಿದ ಮೋದಿ ಮಂತ್ರವಾದಿ

“ನಮ್ಮ ಅಧಿಕಾರಿಗಳ ಕೆಲಸ ಅಂದರೆ ಆ ದೇವರಿಗೆ ಪ್ರೀತಿ. ದೆಹಲಿಯಲ್ಲಿ ನಡೆಯುವ ಸಭೆಗಳಿಗೆ ಮಾಹಿತಿ, ಅಂಕಿ ಅಂಶಗಳ ಸಮೇತ ಹೋಗಿ ಕೂತು ಚರ್ಚೆ ಮಾಡುವುದು ಬಿಟ್ಟು ಇಲ್ಲಿಂದಲೇ ವರ್ಚುವಲ್ ಆಗಿ ಹಾಜರಾಗುತ್ತಾರೆ. ತಮಿಳುನಾಡಿನಿಂದ ಹದಿನೈದು ಜನ ಅಧಿಕಾರಿಗಳು ಹೋಗುತ್ತಾರೆ. ಇದರಿಂದ ರಾಜ್ಯಕ್ಕೆ ನ್ಯಾಯ ಸಿಗುತ್ತದಾ” ಎಂದು ಪ್ರಶ್ನಿಸಿದರು.

“ನೀರಾವರಿ ಬಗ್ಗೆ ಸಚಿವರಿಗೆ ತಿಳಿವಳಿಕೆ ಇಲ್ಲದಿದ್ದರೆ ಕೊನೆಪಕ್ಷ ಈ ಬಗ್ಗೆ ಗೊತ್ತಿರುವವರ ಸಲಹೆಯನ್ನಾದರೂ ಪಡೆದು ಹೆಜ್ಜೆ ಇಡಲಿ. ರಾಜ್ಯದಲ್ಲಿ ಬರ ಇದೆ, 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ ಎಂದು ಸ್ವತಃ ಕಂದಾಯ ಸಚಿವರೇ ಹೇಳಿದ್ದಾರೆ. ಆದರೆ ಇಷ್ಟು ದಿನ ಸರ್ಕಾರ ಮಾಡಿದ್ದೇನು?” ಎಂದು ತರಾಟೆಗೆ ತೆಗೆದುಕೊಂಡರು.

“ಭಾಷಣ ಮಾಡಲಿಕ್ಕೆ ರಾತ್ರೋರಾತ್ರಿ ತರಾತುರಿಯಲ್ಲಿ ಇವರೆಲ್ಲ ದೆಹಲಿಗೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್ ಮುಂದೆ ಅರ್ಜಿ ಹಾಕಿ, ರಾಜ್ಯ ವಾಸ್ತವ ಪರಿಸ್ಥಿತಿಯನ್ನು ವಿವರಿಸುವುದು ಬಿಟ್ಟು, ಆ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳುವುದು ಬಿಟ್ಟು, ಅರ್ಜಿ ಸಲ್ಲಿಸುವುದಕ್ಕೆ ಆಲೋಚನೆ ಮಾಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ನೀರು ಖಾಲಿಯಾದ ಮೇಲೆ ಇವರು ಕ್ರಮ ಕೈಗೊಳ್ಳುತ್ತಾರಾ ನೋಡಬೇಕು” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X