ಇದಾವುದು ಹೊಸ ಧರ್ಮ, ಸನಾತನ ಎಂದು ಪ್ರಶ್ನಿಸಿದ ಬಹುಭಾಷಾ ನಟ ಕಿಶೋರ್ ಕುಮಾರ್

Date:

Advertisements
  • ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲ
  • ಮನುಷ್ಯರನ್ನು ಮನುಷ್ಯರಾಗಿ ಕಾಣುವ, ಮನುಷ್ಯ ಧರ್ಮದವರಾಗುವ ಎಂದ ಕಿಶೋರ್

ಸನಾತನ ಧರ್ಮ ವಿವಾದ ದೇಶಾದ್ಯಂತ ಚರ್ಚೆ ಹುಟ್ಟುಹಾಕಿರುವ ಮಧ್ಯೆ ವಿವಾದಕ್ಕೆ ಎಂಟ್ರಿ ಕೊಟ್ಟಿರುವ ಬಹುಭಾಷಾ ನಟ ಕಿಶೋರ್ ಕುಮಾರ್, ಇದ್ಯಾವುದು ಹೊಸ ಧರ್ಮ? ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಫೇಸ್‌ಬುಕ್ ನಲ್ಲಿ ಪೋಸ್ಟ್‌ ಹಾಕಿರುವ ಕಿಶೋರ್ ಕುಮಾರ್, “ಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ? ಹಾಗಾದರೆ ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ? ಸನಾತನ? ಎಂದು ಪ್ರಶ್ನಿಸಿದ್ದಾರೆ.

ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿದ್ದ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರ ತಲೆ ಕಡಿಯಬೇಕು ಎಂದಿರುವ ಅಯೋಧ್ಯೆ ಸ್ವಾಮಿ ವಿರುದ್ಧ ಕಿಡಿಕಾರಿರುವ ನಟ, “ಮನುಷ್ಯರನ್ನು ಮನುಷ್ಯರಾಗಿ ಕಾಣುವ, ಮನುಷ್ಯ ಧರ್ಮದವರಾಗುವ, ವಿಶ್ವಮಾನವರಾಗುವ” ಎಂದು ಕರೆ ನೀಡಿದ್ದಾರೆ.

Advertisements

ಕೆಲಸ ಮಾಡಲು ಯೋಗ್ಯತೆಯಿಲ್ಲದೆ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕು. ವಾಟ್ಸಾಪ್ ವಿಶ್ವವಿದ್ಯಾಲಯದಿಂದ ಹೊರಬಂದು, ಹಿಂದೂ ಪದದ ನಿಜ ಅರ್ಥ, ಮೂಲ, ಅದರ ಹಿಂದಿನ ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದ್ವೇಷದ ವರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನವಶ್ಯಕ ಚರ್ಚೆಗೆ ಕಾರಣ ಎಂದು ಕಿಶೋರ್ ಕುಮಾರ್ ತಿಳಿಸಿದ್ದಾರೆ.

“ರಾಜಕೀಯದ ದೃಷ್ಟಿಯಿಂದ ಉದಯನಿಧಿಯವರ ಭಾಷಾ ಪ್ರಯೋಗದ ತೀಕ್ಷ್ಣತೆ ಸ್ವಲ್ಪ ಕಡಿಮೆಯಾಗಬಹುದಿತ್ತು ಎನಿಸಿದರೂ ಅವರು ಖಂಡಿಸಿದ್ದು ಇವರ ದ್ವೇಷದ, ಜಾತಿವಾದದ, ಅಸ್ಪೃಶ್ಯತೆಯ, ಅಸಮಾನತೆಯ ವೈದಿಕ ರಾಜಕೀಯವು ಕಿಡ್ನಾಪ್ ಮಾಡಿದ ಸನಾತನವನ್ನು, ಆದಿ ಅಂತ್ಯವಿಲ್ಲದ ಸನಾತನ ಪದವನ್ನಲ್ಲವೆಂಬುದು ಸ್ಪಷ್ಟ” ಎಂದು ಬಹುಭಾಷಾ ನಟ ಕಿಶೋರ್ ಕುಮಾರ್ ಉಲ್ಲೇಖಿಸಿದ್ದಾರೆ.

ಇದನ್ನು ಓದಿದ್ದೀರಾ? ಹೊಸ ಸಂಸತ್ ಕಟ್ಟಡ ಉದ್ಘಾಟನೆಗೆ ರಾಷ್ಟ್ರಪತಿ ಆಹ್ವಾನಿಸದ್ದು ಜಾತಿ ತಾರತಮ್ಯದ ಉತ್ತಮ ಉದಾಹರಣೆ: ಉದಯನಿಧಿ

“ಉದಯನಿಧಿಯವರ ಹೇಳಿಕೆಯನ್ನು ಸನಾತನಿಗಳ ಮಾರಣಹೋಮಕ್ಕೆ ಹೋಲಿಸಿದ ಇವರ ದ್ವೇಷದ ವಕ್ತಾರನಿಗೆ ಇವರ ಪಕ್ಷದ ಪ್ರಧಾನಿ ಊರಲ್ಲೆಲ್ಲ ಕಾಂಗ್ರೆಸ್ ಮುಕ್ತವೆಂದು ಕೂಗಾಡುತ್ತ ತಿರುಗಿದಾಗ ಕಾಂಗ್ರೆಸಿಗರ ಮಾರಣಹೋಮಕ್ಕೆ ಕರೆ ನೀಡಿದ್ದರೇ ಕೇಳಬೇಕಲ್ಲ” ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧವೂ ನಟ ಕಿಡಿಕಾರಿದ್ದಾರೆ.

“ಧರ್ಮವೆನ್ನುವುದು ಅಧರ್ಮದ ವಿರುದ್ಧ ಪದವಾದರೆ, ಅಧರ್ಮವೆನ್ನುವುದು ಕೆಟ್ಟ ಕೆಲಸವೆಂದಾದರೆ, ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲ. ಈ ದಾರಿತಪ್ಪಿಸುವ ಧರ್ಮಾಂಧ ರಾಜಕೀಯದಲ್ಲಿ ನಮ್ಮ ಜ್ವಲಂತ ಸಮಸ್ಯೆಗಳು, ಜಾತಿವಾದದ, ರಾಜಕೀಯ, ಆರ್ಥಿಕ, ಸಾಮಾಜಿಕ ಕ್ರೌರ್ಯದ, ಅಸಮಾನತೆಯ ಸಮಸ್ಯೆಗಳೆಲ್ಲ ಕೊಚ್ಚಿ ಹೋಗುವ ಮುನ್ನ ಎಚ್ಚರಗೊಳ್ಳುವ” ಎಂದು ಬಹುಭಾಷಾ ನಟ ಕಿಶೋರ್ ಕುಮಾರ್ ಜನತೆಗೆ ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X