ಸಿರಿಯಾದ ಎರಡು ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇಸ್ರೇಲ್

Date:

ಸಿರಿಯಾದ ಡಮಾಸ್ಕಸ್‌ ಹಾಗೂ ಅಲೆಪ್ಪೋದಲ್ಲಿರುವ ಎರಡು ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದೆ.

ಇಸ್ರೇಲ್‌ನ ದಾಳಿಯ ಬಳಿಕ ಈ ಎರಡೂ ವಿಮಾನ ನಿಲ್ದಾಣದ ಲ್ಯಾಂಡಿಂಗ್ ಜಾಗದಲ್ಲಿ ಹಾನಿಯುಂಟಾಗಿರುವ ಹಿನ್ನೆಲೆಯಲ್ಲಿ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಿರಿಯಾದ ಸರ್ಕಾರಿ ಮಾಧ್ಯಮ ‘ಸನಾ’ ವರದಿ ಮಾಡಿದೆ.

‘ಏಕಕಾಲದಲ್ಲಿ ನಡೆಸಲಾಗಿರುವ ಈ ದಾಳಿಗಳಿಂದಾಗಿ ಎರಡೂ ವಿಮಾನ ನಿಲ್ದಾಣಗಳಲ್ಲಿನ ಲ್ಯಾಂಡಿಂಗ್ ಪ್ರದೇಶವು ಹಾನಿಗೊಂಡಿದೆ. ಈ ಹಿನ್ನೆಲೆಯಲ್ಲಿ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಮಿಲಿಟರಿ ಮೂಲವನ್ನು ಉಲ್ಲೇಖಿಸಿ ಸನಾ ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಎರಡೂ ವಿಮಾನ ನಿಲ್ದಾಣಗಳ ಮೇಲಿನ ದಾಳಿಗೆ ಪ್ರತಿಕ್ರಿಯೆಯಾಗಿ ಸಿರಿಯನ್ ಸೇನೆಯು ವಾಯು ರಕ್ಷಣಾ ಕವಚವನ್ನು ಸಕ್ರಿಯಗೊಳಿಸಲಾಗಿದೆ ಎಂದು ವರದಿಯಾಗಿದೆ.

ಹಮಾಸ್ ಶನಿವಾರದಂದು ಇಸ್ರೇಲ್ ಮೇಲೆ ಅತಿದೊಡ್ಡ ದಾಳಿಯನ್ನು ನಡೆಸಿದ ನಂತರ ಈ ದಾಳಿಯು ಸಿರಿಯಾದ ಮೇಲೆ ಇಸ್ರೇಲ್ ನಡೆಸಿದ ಮೊದಲ ದಾಳಿ ಇದಾಗಿದೆ.

ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮಿರಾಬ್ದೊಲ್ಲಾಹಿಯಾನ್ ವಿದೇಶಾಂಗ ಸಚಿವರ ವಿಮಾನವು ಇಸ್ರೇಲಿ ಬಾಂಬ್ ದಾಳಿಯಿಂದಾಗಿ ಸಿರಿಯಾದ ವಿಮಾನ ನಿಲ್ದಾಣಗಳಲ್ಲಿ ಇಳಿಯಲು ಸಾಧ್ಯವಾಗದೆ ತನ್ನ ಪಥವನ್ನು ಬದಲಾಯಿಸಿ ಮತ್ತೆ ಟೆಹ್ರಾನ್‌ಗೆ ಮರಳಿರುವುದಾಗಿಯೂ ವರದಿಯಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯವರ ಬಿಜೆಪಿ 220 ಸ್ಥಾನಗಳನ್ನು ಗೆಲ್ಲುವುದಿಲ್ಲ’

ಲೋಕಸಭಾ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿ ಪರ ಹಾಗೂ ವಿರುದ್ಧದ ಚುನಾವಣೆಯಾಗಿದೆ....

ಸಿಂಗಾಪುರದ ಬಳಿಕ ಹಾಂಗ್ ಕಾಂಗ್‌ನಲ್ಲಿ ಎಂಡಿಹೆಚ್, ಎವರೆಸ್ಟ್ ಮಸಾಲೆ ಮಾರಾಟ ನಿಷೇಧ

ಸಿಂಗಾಪುರದ ಬಳಿಕ ಈಗ ಹಾಂಗ್ ಕಾಂಗ್ ಜನಪ್ರಿಯ ಭಾರತೀಯ ಮಸಾಲೆ ಬ್ರಾಂಡ್‌ಗಳಾದ...

2019ರಲ್ಲಿ ಮೋದಿ ಕೊಟ್ಟ ಆಶ್ವಾಸನೆಗಳ ಕತೆ ಏನಾಯಿತು?

2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರಮೋದಿಯವರ ಮುಖ ಹೊತ್ತ ಬಿಜೆಪಿ ಪ್ರಣಾಳಿಕೆ ಸಾಲು...

ಶ್ರೀಲಂಕಾ| ಪ್ರೇಕ್ಷಕರೆಡೆಗೆ ನುಗ್ಗಿದ ರೇಸಿಂಗ್ ಕಾರು; ಏಳು ಮಂದಿ ಸಾವು

ಶ್ರೀಲಂಕಾದ ದಿಯಾತಲಾವಾದಲ್ಲಿ ಭಾನುವಾರ ನಡೆದ ಫಾಕ್ಸ್ ಹಿಲ್ ಸೂಪರ್ ಕ್ರಾಸ್ 2024...