ಗಾಝಾದ ಅತಿದೊಡ್ಡ ಆಸ್ಪತ್ರೆ ಅಲ್-ಶಿಫಾದ ಮೇಲೂ ದಾಳಿ ನಡೆಸಿದ ಇಸ್ರೇಲ್: ನೂರಾರು ಮಂದಿ ಬಲಿ

Date:

Advertisements

ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷ ಮುಂದುವರಿದಿರುವ ನಡುವೆಯೇ ಗಾಝಾದ ಪ್ರಮುಖ ಆಸ್ಪತ್ರೆ ಅಲ್-ಶಿಫಾದ ಮೇಲೆ ಇಸ್ರೇಲ್ ಡ್ರೋನ್ ದಾಳಿ ನಡೆಸಿದೆ.

ಅಲ್-ಶಿಫಾ ಆಸ್ಪತ್ರೆಯ ಮುಂಭಾಗದಲ್ಲಿ ರೋಗಿಗಳನ್ನು ಚಿಕಿತ್ಸೆಗಾಗಿ ರಫಾ ಕ್ರಾಸಿಂಗ್‌ಗೆ ಕರೆದೊಯ್ಯಲು ತಯಾರಿ ನಡೆಸುತ್ತಿದ್ದಾಗಲೇ ಈ ದಾಳಿ ನಡೆಸಲಾಗಿದ್ದು, ನೂರಾರು ಮಂದಿ ಬಲಿಯಾಗಿರುವುದಾಗಿ ವರದಿಯಾಗಿದೆ. ಆದರೆ, ಇನ್ನೂ ನಿಖರವಾದ ಅಂಕಿ ಅಂಶ ತಿಳಿದು ಬಂದಿಲ್ಲ ಎಂದು ಅಲ್-ಜಝೀರಾ ವರದಿ ಮಾಡಿದೆ.

ಡ್ರೋನ್ ದಾಳಿಯಿಂದ ಅಪಾರ ಸಾವುನೋವುಗಳು ಸಂಭವಿಸಿದೆ ಎಂದು ಟೈಮ್ಸ್ ಆಫ್ ಗಾಝಾ ವಿಡಿಯೋವೊಂದನ್ನು ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಅಲ್-ಶಿಫಾ ಆಸ್ಪತ್ರೆಯ ಮುಂಭಾಗದಲ್ಲಿ ನೂರಾರು ಮಂದಿ ರಕ್ತಸಿಕ್ತವಾಗಿ ಬಿದ್ದಿರುವುದು ಕಂಡುಬಂದಿದೆ.

Advertisements

ಅಲ್-ಶಿಫಾ ಆಸ್ಪತ್ರೆಯು ಗಾಝಾ ಪಟ್ಟಿಯಲ್ಲಿರುವ ಅತಿದೊಡ್ಡ ಆಸ್ಪತ್ರೆಯಾಗಿದೆ. ಈಗಾಗಲೇ ಈ ಆಸ್ಪತ್ರೆಯಲ್ಲಿ ರೋಗಿಗಳು ತುಂಬಿ ತುಳುಕುತ್ತಿದ್ದಾರೆ.

ಹಾಗಾಗಿ, ಹೆಚ್ಚಿನ ಚಿಕಿತ್ಸೆ ಬೇಕಾಗಿದ್ದವರನ್ನು ರಫಾ ಗಡಿಯ ಮೂಲಕ ಈಜಿಪ್ಟ್‌ಗೆ ಆಂಬುಲೆನ್ಸ್‌ಗಳ ಮೂಲಕ ಕಳುಹಿಸಲು ಪ್ಯಾಲೇಸ್ತೀನಿಯನ್ ಆರೋಗ್ಯ ಸಚಿವಾಲಯವು ವ್ಯವಸ್ಥೆ ಮಾಡುತ್ತಿತ್ತು. ಇದೇ ವೇಳೆ ಇಸ್ರೇಲ್ ಡ್ರೋನ್ ದಾಳಿ ನಡೆಸುವ ಮೂಲಕ, ಅಮಾನವೀಯ ಕೃತ್ಯ ಎಸಗಿದೆ.

ಈ ಹಿಂದೆ ಇಸ್ರೇಲ್ ಅಲ್ ಅಹ್ಲಿ ಆಸ್ಪತ್ರೆಯ ಮೇಲೂ ಕ್ಷಿಪಣಿ ದಾಳಿ ನಡೆಸಿದ ಪರಿಣಾಮ, 500ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X