ಶ್ರೀಲಂಕಾ ಪ್ರವಾಸದಲ್ಲಿದ್ದ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಅವರಿಗೆ ಲಘು ಹೃದಯಾಘಾತವಾಗಿರುವುದಾಗಿ ವರದಿಯಾಗಿದೆ.
ಕೊಲಂಬೋದಲ್ಲಿದ್ದ ಅವರನ್ನು ಏರ್‌ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಇಲ್ಲಿಯೇ ಚಿಕಿತ್ಸೆ ನೀಡಲಾಗುವುದು ಎಂದು ತಿಳಿದುಬಂದಿದೆ.
ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಶಿಫ್ಟ್ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.
83 ವರ್ಷದ ಕಸ್ತೂರಿ ರಂಗನ್ ಅವರು ಸುಮಾರು ಒಂದು ದಶಕಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶ್ರೀಲಂಕಾದಲ್ಲಿ ಬಾಹ್ಯಾಕಾಶ ವಿಜ್ಞಾನಿ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿರುವ ವಿಷಯ ತಿಳಿದು ನೋವಾಗಿದೆ. ಶೀಘ್ರವೇ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಪ್ರಾರ್ಥಿಸಿದ್ದಾರೆ.