ಐಟಿ, ಇಡಿ ಭಯ ತೋರಿಸಿದ್ದರಿಂದ ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗಿರಬಹುದು ಎಂದ ಸಚಿವ ಪ್ರಿಯಾಂಕ್ ಖರ್ಗೆ

Date:

ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿಗೆ ಸೇರಿರುವ ಬಗ್ಗೆ ಕಾಂಗ್ರೆಸ್ ಪಾಳಯ ಆಕ್ರೋಶ ಹೊರಹಾಕುತ್ತಿದೆ. ಅಲ್ಪಸಂಖ್ಯಾತ ಸಮುದಾಯ ಶೆಟ್ಟರ್‌​ರನ್ನು ಒಪ್ಪಿರಲಿಲ್ಲ, ಹೋಗಿದ್ದು ಒಳ್ಳೆಯದಾಯಿತು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರೆ, ಕಾಂಗ್ರೆಸ್‌ ಸರ್ಕಾರ ಅಲ್ಪಸಂಖ್ಯಾತರ ಅತಿಯಾದ ಓಲೈಕೆ ಹಾಗೂ ಹಿಂದೂ ವಿರೋಧಿ ನಿಲುವಿನಿಂದ ಬೇಸತ್ತು ಮತ್ತೆ ಬಿಜೆಪಿಗೆ ಬಂದಿದ್ದಾರೆ ಎಂದು ಬಿಜೆಪಿ ಪಾಳಯವು ಸಮರ್ಥನೆ ಮಾಡಿಕೊಳ್ಳುತ್ತಿದೆ.

- Advertisement -

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರ್ಪಡೆಗೊಂಡ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರಾಮೀಣಾಭಿವೃದ್ದಿ, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ‘ಕೇಂದ್ರ ಸರ್ಕಾರವು ಐಟಿ, ಇಡಿ ಭಯ ತೋರಿಸಿದ್ದರಿಂದ ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗಿರಬಹುದು’ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಉಸ್ತುವಾರಿ ಸಚಿವ ಖರ್ಗೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಈ ರೀತಿಯಾಗಿ ಸಂಶಯ ವ್ಯಕ್ತಪಡಿಸಿದ್ದಾರೆ.

“ಜಗದೀಶ್ ಶೆಟ್ಟ‌ರ್ ಅವರಿಗೆ ಐಟಿ, ಇಡಿ ಭಯ ತೋರಿಸಿದ್ದರಿಂದ ಅವರು ದಿಢೀ‌ರ್ ಆಗಿ ಬಿಜೆಪಿ ಸೇರ್ಪಡೆಯಾಗಿರಬಹುದು. ವಿಪಕ್ಷಗಳ ನಾಯಕರನ್ನು ಹಣಿಯಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಐಟಿ, ಇಡಿ, ಸಿಬಿಐಗಳನ್ನು ಅಸ್ತ್ರವಾಗಿ ಬಳಸುತ್ತಿದೆ. ಶೆಟ್ಟರ್ ಅವರನ್ನು ಸೆಳೆಯಲು ಇದೇ ತಂತ್ರ ಅನುಸರಿಸಿರಬಹುದು” ಎಂದು ಹೇಳಿಕೆ ನೀಡಿದ್ದಾರೆ.

“ಜಗದೀಶ್ ಶೆಟ್ಟ‌ರ್ ಅವರನ್ನು ನಮ್ಮ ಪಕ್ಷ ಗೌರವಯುತವಾಗಿಯೇ ನಡೆಸಿಕೊಂಡಿತ್ತು. ಈ ಬಗ್ಗೆ ಅವರೇ ಹೇಳಿಕೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡರೂ ವಿಧಾನಪರಿಷತ್ ಸ್ಥಾನವನ್ನು ನೀಡಲಾಗಿತ್ತು. ಬಿಜೆಪಿಗೆ ಇಡಿ, ಐಟಿ, ಸಿಬಿಐಗಳೇ ಸ್ಟಾರ್ ಕ್ಯಾಂಪೇನರ್‌ಗಳಾಗಿದ್ದಾರೆ. ಇವುಗಳನ್ನು ಬಿಟ್ಟರೆ ಬಿಜೆಪಿಯವರಿಗೆ ಗತಿ ಇಲ್ಲ. ತಾಕತ್ತಿದ್ದರೆ ವಿರೋಧ ಪಕ್ಷಗಳ ನಾಯಕರ ಮೇಲೆ ಇಡಿ, ಐಟಿಗಳನ್ನು ಭೂ ಬಿಡದೇ ಚುನಾವಣೆ ಎದುರಿಸಲಿ ನೋಡೋಣ” ಎಂದು ಸವಾಲು ಹಾಕಿದರು.

“ಎಂತಹ ಭ್ರಷ್ಟ ವ್ಯಕ್ತಿಯೇ ಇರಲಿ, ಆತ ಬಿಜೆಪಿ ಎಂಬ ವಾಷಿಂಗ್ ಮೆಷಿನ್‌ನಲ್ಲಿ ಹಾದು ಹೋದರೆ ಶುಭ್ರನಾಗುತ್ತಾನೆ” ಎಂದು ವ್ಯಂಗ್ಯವಾಡಿದ ಸಚಿವರು, “ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅದನ್ನು ಮುಖ್ಯಮಂತ್ರಿ ಅವರೇ ನಿರ್ಧಾರ ಮಾಡುತ್ತಾರೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಅಲ್ಪಸಂಖ್ಯಾತ ಸಮುದಾಯ ಶೆಟ್ಟರ್‌​ರನ್ನು ಒಪ್ಪಿರಲಿಲ್ಲ, ಹೋಗಿದ್ದು ಒಳ್ಳೆಯದಾಯಿತು: ಡಿಕೆ ಶಿವಕುಮಾರ್‌

“ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ಸೆಳೆಯಲು ಯತ್ನಿಸಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾ‌ರ್ ಅವರನ್ನು ಸವದಿ ಅವರು ಸಹಜವಾಗಿಯೇ ಭೇಟಿ ಮಾಡಿದ್ದಾರೆ. ನಾನೂ ಆಗಾಗ ಶಿವಕುಮಾ‌ರ್ ಅವರನ್ನು ಭೇಟಿ ಮಾಡುತ್ತೇನೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ” ಎಂದು ಇದೇ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...