ಬಿಜೆಪಿ ತನ್ನ ಮೂಗಿನ ನೇರದ ಹಿಂದೂ ದೇಶ ನಿರ್ಮಾಣ ಮಾಡುವುದು ಅಸಾಧ್ಯ: ಸಿಎಂ ಸಿದ್ದರಾಮಯ್ಯ

Date:

Advertisements

“ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ. ಈ ಬಹುತ್ವದ ದೇಶವನ್ನು ನಾಶ ಮಾಡಿ ಬಿಜೆಪಿ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ. ಈ ದೇಶ ಪ್ರತಿಯೊಬ್ಬ ಭಾರತೀಯರಿಗೆ ಸೇರಿದ್ದು” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

“ಪ್ರಧಾನಿ ಮೋದಿಯವರಿಗೆ ಬಿಜೆಪಿ, ಎನ್‌ಡಿಎ ಸೋಲು ಖಚಿತವಾಗಿ ಗೊತ್ತಾಗಿದೆ. ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ. ನಾನು ಜೈವಿಕವಾಗಿ ಹುಟ್ಟಿಲ್ಲ, ದೇವರೇ ನನ್ನನ್ನು ಕಳುಹಿಸಿದ್ದು ಎಂದು ಮಾತಾಡುತ್ತಿದ್ದಾರೆ. ಸೋಲಿನ ಭಯ ಮೋದಿಯವರನ್ನು ಈ ಮಟ್ಟಕ್ಕೆ ಮಾಡಿಟ್ಟಿದೆ” ಎಂದು ಲೇವಡಿ ಮಾಡಿದರು.

Advertisements

“ನಮ್ಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ ಮತ್ತು ಮೋದಿ ಯತ್ನಿಸುತ್ತಿದ್ದು ಇದಕ್ಕೆ ಭಾರತೀಯರು ಅವಕಾಶ ಕೊಡುವುದಿಲ್ಲ. ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ. ಸಂವಿಧಾನದ ಆಶಯಗಳಲ್ಲಿ ದೇಶವನ್ನು ಮುನ್ನಡೆಸುವುದು ಕಾಂಗ್ರೆಸ್ ಪಕ್ಷ ಮಾತ್ರ. ನೆಹರೂ, ಇಂದಿರಾಗಾಂಧಿ ಅವಧಿಯಲ್ಲಿ ಭೂ ಸುಧಾರಣೆ ಮಾಡಿದರು‌. ಕೈಗಾರಿಕೆಗಳನ್ನು ಸ್ಥಾಪಿಸಿದರು. ಈಗ ಬಿಜೆಪಿ ಇದಕ್ಕೆ ವಿರುದ್ಧವಾದ ಕೆಲಸ ಮಾಡುತ್ತಿದೆ. ರೈತರಿಂದ ಭೂಮಿ ಕಿತ್ತುಕೊಳ್ಳುವುದು, ದೇಶದ ಕೈಗಾರಿಕೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದು ಬಿಜೆಪಿಯ ಸಾಧನೆಯಾಗಿದೆ” ಎಂದರು.

“ತಮ್ಮನ್ನು ತೀವ್ರವಾಗಿ ಟೀಕಿಸುತ್ತಿದ್ದ ಲೋಹಿಯಾ ಅವರ ಮಾತನ್ನು ಪಾರ್ಲಿಮೆಂಟಿನಲ್ಲಿ ಕುಳಿತು ನೆಹರೂ ಆಲಿಸುತ್ತಿದ್ದರು. ಸ್ಪಂದಿಸುತ್ತಿದ್ದರು‌. ಇದು ನೆಹರೂ ರೂಢಿಸಿಕೊಂಡಿದ್ದ ರಾಜಕೀಯ ಮೌಲ್ಯ” ಎಂದರು.

“ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ. ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿ ಮಾಡಲು ಮುಂದಾದರು. 17 ವರ್ಷಗಳ ದೀರ್ಘ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಭವಿಷ್ಯದ ಭಾರತವನ್ನು ಕಟ್ಟುವ ಕೆಲಸ ಮಾಡಿದರು. ಇಡೀ ವಿಶ್ವದಲ್ಲಿ ಶಾಂತಿ ನೆಲೆಸಬೇಕು ಎನ್ನುವ ಬದ್ಧತೆ ಉಳ್ಳವರಾಗಿದ್ದರು. ಆಗ ಮಾತ್ರ ವಿಶ್ವದ ಅಭಿವೃದ್ಧಿ ಸಾಧ್ಯ ಎನ್ನುವ ನಂಬಿಕೆ ಹೊಂದಿದ್ದರು” ಎಂದು ವಿವರಿಸಿದರು.

“ನೆಹರೂ ಇತಿಹಾಸಕಾರರೂ ಆಗಿದ್ದರು. ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು. ಅಂಬೇಡ್ಕರ್ ಅವರ ಮಾತಿನಂತೆ, ಇತಿಹಾಸ ಗೊತ್ತಿದ್ದವರು ಮಾತ್ರ ದೇಶದ ಭವಿಷ್ಯ ರೂಪಿಸಬಲ್ಲರು. ನೆಹರೂ ಈ ಕೆಲಸ ಮಾಡಿ ದೇಶವನ್ನು ಕಟ್ಟಿ ಬೆಳೆಸಿದರು. ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಅನಕ್ಷರತೆ, ಬಡತನ, ನಿರುದ್ಯೋಗ ವ್ಯಾಪಕವಾಗಿತ್ತು. ಆರ್ಥಿಕ ಚೈತನ್ಯ ಇರಲಿಲ್ಲ. ಹಳ್ಳಿಗಳು ಸಂಕಷ್ಟದಲ್ಲಿದ್ದವು. ಈ ಎಲ್ಲಕ್ಕೂ ಪರಿಹಾರವಾಗಿ ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಲು ಜೀವನದುದ್ದಕ್ಕೂ ಶ್ರಮಿಸಿದರು” ಎಂದರು.

“ದೇಶದಲ್ಲಿರುವ ಬಹುತೇಕ ಅಣೆಕಟ್ಟುಗಳು ಆಗಿದ್ದು ನೆಹರೂ ಅವಧಿಯಲ್ಲಿ. ಕಾಂಗ್ರೆಸ್ ಏನೂ ಮಾಡಿಲ್ಲ ಎನ್ನುವ ನರೇಂದ್ರ ಮೋದಿ ಇವತ್ತಿನವರೆಗೂ ಒಂದೇ ಒಂದು ಅಣೆಕಟ್ಟನ್ನಾಗಲೀ, ಸಾರ್ವಜನಿಕ ಉದ್ದಿಮೆಯನ್ನಾಗಲಿ ಸ್ಥಾಪಿಸಲಿಲ್ಲ. ಇವರಿಗೆ ನೆಹರೂ ಬಗ್ಗೆ ಮಾತನಾಡುವ ಯೋಗ್ಯತೆ ಏನಿದೆ” ಎಂದು ಪ್ರಶ್ನಿಸಿದರು.

ಬಿಜೆಪಿಗೆ ಈಗ ಸತ್ಯ ಗೊತ್ತಾಗಿದೆ

“ಕಾಂಗ್ರೆಸ್ ಕಾರ್ಯಕರ್ತರ ಶ್ರಮದಿಂದ ಲೋಕಸಭೆಯಲ್ಲಿ ಕಾಂಗ್ರೆಸ್ 15-20 ಸ್ಥಾನ ಗೆದ್ದೇ ಗೆಲ್ಲುತ್ತದೆ. 28 ಕ್ಕೆ 28 ಗೆಲ್ಲುತ್ತೀವಿ ಎನ್ನುತ್ತಿದ್ದ ಬಿಜೆಪಿ ಬಾಯಿ ಬಂದಾಗಿದೆ. ಇಡೀ ದೇಶದಲ್ಲಿ ಬಿಜೆಪಿ ತಿರಸ್ಕೃತಗೊಂಡಿದೆ” ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ಮಂಜುನಾಥ್ ಭಂಡಾರಿ, ಮಾಜಿ ಸಚಿವೆ ರಾಣಿ ಸತೀಶ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X