“ನರೇಂದ್ರ ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಭಾರತೀಯರಲ್ಲಿ ಭ್ರಮೆ ಹುಟ್ಟಿಸಿದ್ದು ಬಿಟ್ಟರೆ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿ ಬಿಟ್ಟಿದೆ” ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಚಿತ್ರದುರ್ಗದಲ್ಲಿ ನಡೆದ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಬೃಹತ್ ಜನಸ್ತೋಮವನ್ನು ಉದ್ಘಾಟಿಸಿ ಮಾತನಾಡಿದರು.
“ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಯಾರ ಪರ ಎಂಬುವುದು ಇದರಿಂದ ತಿಳಿಯುತ್ತದೆ” ಎಂದು ಸಿಎಂ ಹೇಳಿದರು.
“ಹತ್ತು ವರ್ಷ ಪ್ರಧಾನಿಯಾಗಿ ಭಾರತೀಯರಲ್ಲಿ ಭ್ರಮೆ ಹುಟ್ಟಿಸಿದ್ದಾರೆ. ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ. ವರ್ಷಕ್ಕೆ 2 ಕೋಟಿಯಂತೆ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿ ಮಾಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಸೃಷ್ಟಿಸದ ಮೋದಿ ಕೆಲಸ ಕೇಳಿದ ವಿದ್ಯಾವಂತರಿಗೆ ಹೋಗಿ ಪಕೋಡ ಮಾರಾಟ ಮಾಡಿ ಎಂದರು. ನನ್ನ ಕೈಗೆ ಅಧಿಕಾರ ಕೊಡಿ ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದಿದ್ದರು. ಹತ್ತು ವರ್ಷದಲ್ಲಿ ಹದಿನೈದು ಪೈಸೆಯನ್ನೂ ಹಾಕಲಿಲ್ಲ” ಎಂದು ಪ್ರಧಾನಿಯ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
“ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದೋರು ರೈತ ಖರ್ಚು ಮೂರು ಪಟ್ಟು ಮಾಡಿಟ್ಟಿದ್ದಾರೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ಮೋದಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಹಾಗಾದ್ರೆ ಮೋದಿ ಯಾರ ಪರ ಎನ್ನುವುದನ್ನು ಅರ್ಥ ಮಾಡಿಕೊಳ್ಳಿ” ಎಂದರು.
“ಮೋದಿ ಬಂದ ಮೇಲೆ ಜನ ಸಾಮಾನ್ಯರ, ಮಧ್ಯಮ ವರ್ಗದವರ ಮೇಲೆ ತೆರಿಗೆ ಭಾರ ಹೆಚ್ಚಾಯಿತು. ಉದ್ಯಮಿಗಳ ತೆರಿಗೆ ಭಾರ ಕಡಿಮೆಯಾಯಿತು. ಆದ್ದರಿಂದ ಮೋದಿ ಜನದ್ರೋಹಿ ತಾನೇ” ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಪ್ರಿಯಾಂಕಾ ಗಾಂಧಿ ಭಾಗಿ
ಚಿತ್ರದುರ್ಗದಲ್ಲಿ ನಡೆದ ಪ್ರಜಾಧ್ವನಿ-2 ಯಾತ್ರೆಯಲ್ಲಿ ಮುಖ್ಯ ಅತಿಥಿಯಾಗಿ ಕಾಂಗ್ರೆಸ್ನ ಸ್ಟಾರ್ ಪ್ರಚಾರಕಿ ಪ್ರಿಯಾಂಕಾ ಗಾಂಧಿ ಭಾಗಿಯಾದರು. ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
