ಅಮೆರಿಕದ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಆಗಿದೆ ಎನ್ನುವುದು ಸರಿಯಲ್ಲ: ಹೆಚ್‌ ಡಿ ಕುಮಾರಸ್ವಾಮಿ

Date:

ಅಮೆರಿಕದ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಅನ್ನುವುದು ಸರಿಯಲ್ಲ. ಜಾಗತಿಕ ಮಟ್ಟದಲ್ಲಿ ತನ್ನ ಮುಖ ಉಳಿಸಿಕೊಳ್ಳಲು ಪಾಕಿಸ್ತಾನ ನಾನಾ ಸರ್ಕಸ್ ಮಾಡಿದೆ. ಭಾರತ ಕಾಶ್ಮೀರ ವಿಷಯದಲ್ಲಿ ಮೂರನೇ ರಾಷ್ಟ್ರದ ಮಧ್ಯಸ್ಥಿಕೆಗೆ ಒಪ್ಪಿಲ್ಲ ಎಂದು ಕೇಂದ್ರ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

- Advertisement -

ದೆಹಲಿಗೆ ಹೊರಡುವ ಮುನ್ನ ಬೆಂಗಳೂರಿನ ತಮ್ಮ ನಿವಾಸದ ಬಳಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, “ಅಮೆರಿಕ ಮಧ್ಯಸ್ಥಿಕೆಗೆ ಭಾರತ ಅವಕಾಶ ಕೂಡ ಕೊಟ್ಟಿಲ್ಲ. ಪ್ರಧಾನಿಗಳು ಕೂಡ ಇದೇ ಮಾತನ್ನು ಸ್ಪಷ್ಟವಾಗಿ ಹೇಳಿದ್ದಾರೆ. ರಾಷ್ಟ್ರದ ಹಿತಾಸಕ್ತಿ ವಿಷಯದಲ್ಲಿ ಮೋದಿ ಅವರು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

“ರಾಷ್ಟ್ರೀಯ ಭದ್ರತೆ, ರಾಷ್ಟ್ರ ರಕ್ಷಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ದೃಢ ಹೆಜ್ಜೆಗಳನ್ನು ಇಟ್ಟಿದ್ದು, ನಮ್ಮ ಮೇಲೆ ದಾಳಿ ನಡೆಸಿದ ರಾಷ್ಟಕ್ಕೆ ನಮ್ಮ ಸೇನಾಪಡೆಗಳು ತಕ್ಕ ಪಾಠ ಕಲಿಸಿವೆ. ಪಹಲ್ಗಾಮ್ ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು ನಮ್ಮ ದೇಶದ ಪ್ರವಾಸಿಗರ ಮೇಲೆ ಪೈಶಾಚಿಕ ದಾಳಿ ನಡೆಸಿದ್ದರು. ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನಾಪಡೆಗಳು ಆ ದೇಶದಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ನಾಶ ಮಾಡಿವೆ. ನೆರೆ ದೇಶದ ಸೇನೆಯು ಉಗ್ರ ಪೋಷಣೆ ಮಾಡುತ್ತಾ ಭಾರತದ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ಭಾರತ ಪ್ರಬಲ ತಿರುಗೇಟು ನೀಡಿದೆ” ಎಂದು ಹೇಳಿದರು.

Advertisements

“ನಮ್ಮ ಸೇನಾಪಡೆಗಳ ಶಕ್ತಿಯ ಮುಂದೆ ಪಾಕಿಸ್ತಾನ ಮಂಡಿಯೂರಿದೆ. ಭಾರತದ ಎಲ್ಲ ಕಡೆ ಮೇಲುಗೈ ಸಾಧಿಸಿದೆ. ಪಾಕಿಸ್ಥಾನಕ್ಕೆ ನಡುಕ ಉಂಟಾಗಿತ್ತು. ಉಗ್ರರ ಚಟುವಟಿಕೆಗಳಿಗೆ ಇತಿಶ್ರೀ ಹಾಡುವ ದೃಷ್ಟಿಯಿಂದ ದೇಶದ ಪ್ರಧಾನಿ ಅವರು ಅನೇಕ ಕ್ರಮಗಳನ್ನು ತೆಗೆದುಕೊಂಡದ್ದರು. ಉಗ್ರರ ಶಿಬಿರಗಳ ಮೇಲೆ ನಮ್ಮ ಸೈನಿಕರು ದಾಳಿ ಮಾಡಿದ್ದರು” ಎಂದು ತಿಳಿಸಿದರು.

ಪಾಕಿಸ್ತಾನ ನಾನಾ ಸರ್ಕಸ್ ಮಾಡಿದೆ

“ಉಗ್ರ ಪೋಷಕ ಪಾಕಿಸ್ತಾನವನ್ನು ಮಟ್ಟ ಹಾಕುವ ದೃಷ್ಟಿಯಿಂದ ಪೂರ್ಣ ಪ್ರಮಾಣದ ಯುದ್ದ ಆಗಲೇಬೇಕಿತ್ತು ಎಂಬ ನಿಲುವು ಒಂದು ಕಡೆ ಇದೆ. ಮತ್ತೊಂದು ಕಡೆ ರಷ್ಯಾ, ಉಕ್ರೇನ್ ಯುದ್ಧದಿಂದ ಇವತ್ತು ಯಾವ ಸ್ಥಿತಿ ಉಂಟಾಗಿದೆ ಎನ್ನುವ ವಾದವೂ ಇನ್ನೊಂದೆಡೆ. ಈ ದೃಷ್ಟಿಯಲ್ಲಿ ಕೇಂದ್ರ ಸರ್ಕಾರ ಆಲೋಚನೆ ಮಾಡುತ್ತಿದೆ. ಆದರೆ, ಈಗಲಾದರೂ ಪಾಕಿಸ್ತಾನ ಎಚ್ಚೆತ್ತುಕೊಳ್ಳದಿದ್ದರೆ ಅದು ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ನಾಶವಾಗಲಿದೆ” ಎಂದು ಎಚ್ಚರಿಕೆ ಕೊಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿದ್ದರೂ, ಹಿಂಗಾರು ಮಳೆಯ ಅಬ್ಬರ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...