ಸಚಿವ ವಿ ಸೋಮಣ್ಣ ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸಿದ್ದು ಸರಿಯಲ್ಲ : ಸಿದ್ದರಾಮಯ್ಯ

Date:

  • ನಮ್ಮ‌ ಕಾರ್ಯಕರ್ತರು ಇಲ್ಲವೇ ಬೇರೆಯವರು ಮಾಡಿದ್ದರೂ ಅದು ತಪ್ಪು
  • ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಪ್ರತಿ ಅಭ್ಯರ್ಥಿಗೂ ಪ್ರಚಾರಕ್ಕೆ ಅವಕಾಶವಿದೆ

ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ವಿ ಸೋಮಣ್ಣ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಅಲ್ಲಿನ ಮತದಾರರು ಅಡ್ಡಿಪಡಿಸಿದ ಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈ ರೀತಿ ಮಾಡುವುದು ಸರಿಯಲ್ಲ. ಪ್ರಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, “ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರ ಚುನಾವಣಾ ಪ್ರಚಾರಕ್ಕೆ ಕೆಲವರು ಅಡ್ಡಿಪಡಿಸುತ್ತಿರುವುದು ವರದಿಯಾಗಿದೆ. ಇದನ್ನು ನಮ್ಮ‌ ಪಕ್ಷದ ಕಾರ್ಯಕರ್ತರು ಇಲ್ಲವೇ ಬೇರೆಯವರು ಮಾಡಿದ್ದರೆ ಅದು ಸರಿ ಅಲ್ಲ. ಎಲ್ಲ ಅಭ್ಯರ್ಥಿಗಳಿಗೂ ಮುಕ್ತ ಪ್ರಚಾರಕ್ಕೆ ಅವಕಾಶ ಮಾಡಿಕೊಡಬೇಕು” ಎಂದು ಹೇಳಿದ್ದಾರೆ.

“ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯುವ ಚುನಾವಣೆಯಲ್ಲಿ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರಚಾರ ಮಾಡಲು ಅವಕಾಶ ಇದೆ. ಅದಕ್ಕೆ ಅಡ್ಡಿ ಪಡಿಸಬಾರದು. ಅಂತಿಮವಾಗಿ ಮತದಾರರು ತಮ್ಮ ಆಯ್ಕೆಯನ್ನು ತಾವೇ ನಿರ್ಧರಿಸುತ್ತಾರೆ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಸಚಿವ ಸೋಮಣ್ಣಗೆ ವರುಣಾದಲ್ಲಿ ಮತ್ತೆ ಮುಖಭಂಗ

ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ವಿ ಸೋಮಣ್ಣ ಪ್ರಚಾರಕ್ಕೆ ತೆರಳಿದ್ದ ವೇಳೆ ಭುಗತಗಳ್ಳಿ ಗ್ರಾಮದ ಮತದಾರರು ಸಿದ್ದರಾಮಯ್ಯ ಅವರ ಪರ ಘೋಷಣೆ ಕೂಗಿ, ಸೋಮಣ್ಣ ಅವರಿಗೆ ಘೇರಾವ್‌ ಹಾಕಿದ್ದರು. ಈ ವೇಳೆ ಪೊಲೀಸರ ಮಧ್ಯೆ ಪ್ರವೇಶದೊಂದಿಗೆ ಸೋಮಣ್ಣ ಅವರನ್ನು ಅಲ್ಲಿಂದ ಮತ್ತೊಂದು ಗ್ರಾಮಕ್ಕೆ ಕರೆದೊಯ್ಯಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ ಕೇಂದ್ರೀಯ ವಿವಿ ವಿವಾದ: ಆರ್‌ಎಸ್‌ಎಸ್‌ನ ಧ್ಯೇಯಗೀತೆ ಹಾಡಿದರು, ಬೆದರಿಕೆ ಒಡ್ಡಿದರು

ದೇಶದ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಕೇಸರೀಕರಣಗೊಳ್ಳುತ್ತಿವೆ ಎಂದು ದೇಶಾದ್ಯಂತ ವ್ಯಾಪಕ ಚರ್ಚೆಗೊಳಗಾಗುತ್ತಿರುವ...

ಅಜೀಂ ಪ್ರೇಮ್ ಜಿ ಫೌಂಡೇಷನ್‌ನಿಂದ ಶಾಲಾ ಮಕ್ಕಳಿಗೆ ಆರು ದಿನವೂ ಪೌಷ್ಟಿಕ ಆಹಾರ: ಸಿಎಂ ಸಿದ್ದರಾಮಯ್ಯ

"ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ...

ರೇಣುಕಸ್ವಾಮಿ ಕೊಲೆ ಪ್ರಕರಣ | 4ನೇ ಆರೋಪಿ ತಾಯಿ ಅನಾರೋಗ್ಯದಿಂದ ಸಾವು

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 4ನೇ ಆರೋಪಿ, ದರ್ಶನ್‌ ತೂಗುದೀಪ ಸೇನೆಯ...

ಮೋದಿಯನ್ನು ಬದಿಗೊತ್ತಿ ಯುವ ಭಾರತ ಗೆಲ್ಲುವತ್ತ ಚಿತ್ತ ಹರಿಸುವರೇ ರಾಹುಲ್‌ ಗಾಂಧಿ?

ದೇಶದ ಉದ್ದಗಲಕ್ಕೂ ನಡೆದ ಎರಡು ಭಾರತ್ ಜೋಡೋ ಯಾತ್ರೆಗಳು ಮತ್ತು 2024ರ...